KSET Exam Dress Code: ಜನವರಿ 13, 2024 ರಂದು ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಈ ಮಾರ್ಗಸೂಚಿಗಳನ್ನು ಹಾಗೂ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದೆ.
2023-24 ನೇ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಧಾರವಾಡ ಕಚೇರಿಯ ಅಧೀನ ಕಚೇರಿಗಳಲ್ಲಿ ಖಾಲಿ ಇರುವ ಗುತ್ತಿಗೆ ಆಧಾರಿತ ತಾಲೂಕು ತಾಂತ್ರಿಕ ವ್ಯವಸ್ಥಾಪಕರು (BTM) ಒಂದು (1) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
KSET 2023 Admit Card: KSET 2023 ಪರೀಕ್ಷೆಯನ್ನು ಜನವರಿ 13, 2024 ರಂದು ನಡೆಸಲು ನಿರ್ಧರಿಸಲಾಗಿದೆ. ಪೇಪರ್ I ಅನ್ನು ಬೆಳಿಗ್ಗೆ 10.00 ರಿಂದ 11.00 ರವರೆಗೆ ಮತ್ತು ಪೇಪರ್ 2 ಅನ್ನು ಮಧ್ಯಾಹ್ನ 12.00 ರಿಂದ 2.00 ರವರೆಗೆ ನಡೆಸಲಾಗುತ್ತದೆ.
ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಮರ್ಪಕ ಸೇವಾ ಸಮಿತಿ ಮತ್ತು ವಿಜಯೋನ್ನತಿ ಸ್ಪರ್ಧಾತ್ಮಕ ತರಬೇತಿ ಸಂಸ್ಥೆ, ಕೊಪ್ಪಳ ಇವರ ಸಹಯೋಗದೊಂದಿಗೆ ಭಾರತೀಯ ಸೇನೆಯ ಅಗ್ನಿಪಥ್ ಹುದ್ದೆಗೆ ಲಿಖಿತ ಪರೀಕ್ಷೆಗಾಗಿ ಉನ್ನತ ಮಟ್ಟದ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಆಸಕ್ತ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾರ್ಮಿಕ ಇಲಾಖೆ ವತಿಯಿಂದ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತಗೊಂಡ ಕಾರ್ಮಿಕರಿಗೆ ಅಪಘಾತ ಪರಿಹಾರ ಪಡೆಯಲು “ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ” ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ 2023-24 ನೇ ಸಾಲಿನ ಪ್ರಥಮ ವರ್ಷದ ಈ ಷಣ್ಮಾಸಿಕದಲ್ಲಿ ಬೋಧಿಸಲು ಇಬ್ಬರು ಸಹಾಯಕ ಪ್ರಾಧ್ಯಾಪಕರನ್ನು ತಾತ್ಕಾಲಿಕವಾಗಿ 179 ದಿನಗಳು ಮೀರದಂತೆ ನೇಮಿಸಿಕೊಳ್ಳಲು ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:30.01.2023 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್.ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಡಿಸೆಂಬರ್ 26 ರಂದು ಯುವ ನಿಧಿ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದು, ಇದರ ಪ್ರಯುಕ್ತ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚು ಯುವಜನರ ಬಳಿಗೆ ಯುವ ನಿಧಿಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಬುಧವಾರದಂದು ಪೋಸ್ಟರ್ ಬಿಡುಗಡೆಗೊಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.