ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಕಚೇರಿಯಿಂದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆ-ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿನ ಕಾರ್ಯನಿರ್ವಹಣೆ ಕುರಿತು ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 19ರ ವರೆಗೆ ವಿಸ್ತರಿಸಿದೆ.
KAS officer recruitment 2023: ಎಷ್ಟು KAS ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವವರು, ಆಡಳಿತ ಇಲಾಖೆಗೆ 656 ಹುದ್ದೆಗಳ ಭರ್ತಿಗೆ ಕೋರಲಾಗಿತ್ತು. ಈ ಪೈಕಿ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.
Intelligence Bureau Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 955 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್-2/ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Top 8 Highest Paying Jobs: ಪ್ರತಿಯೊಬ್ಬರಿಗೂ ತಾವೂ ಕೂಡ ಚೆನ್ನಾಗಿ ದುಡಿಯಬೇಕು. ಕೈತುಂಬಾ ವೇತನ ಪಡೆಯಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅಂತಹವರಲ್ಲಿ ನೀವೂ ಒಬ್ಬರಾಗಿದ್ದರೆ ಇಲ್ಲಿದೆ ಅತಿ ಹೆಚ್ಚು ಸಂಬಳ ಪಡೆಯುವ ವಿಶ್ವದ ಟಾಪ್ 8 ಉದ್ಯೋಗಗಳ ಬಗ್ಗೆ ಮಾಹಿತಿ.
2023-24ನೇ ಶೈಕ್ಷಣಿಕ ಸಾಲಿನ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಅರ್ಜಿ ಸಲ್ಲಿಕೆಯ ಕೊನೆಯ ದಿನವನ್ನು ಡಿಸೆಂಬರ್ 19ರವರೆಗೆ ವಿಸ್ತರಿಸಲಾಗಿದೆ.
2023-24ನೇ ಸಾಲಿನ 2 ವರ್ಷದ ಬಿ.ಇಡಿ ಕೋರ್ಸ್ ಗಾಗಿ ಸರ್ಕಾರಿ ಕೋಟಾದ ದಾಖಲಾತಿಗಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ಸೈಟ್ www.sschooeducation.kar.nic.in ನಲ್ಲಿ ಪ್ರಕಟಿಸಿದೆ.
Transport Department Recruitment 2023: ಪ್ರತಿದಿನದ ಸರಾಸರಿ ಆದಾಯ KSRTCಯಲ್ಲಿ 12.57 ಕೋಟಿ ರೂ., ಬಿಎಂಟಿಸಿಯಲ್ಲಿ 5.39 ಕೋಟಿ ರೂ. ವಾಯುವ್ಯ ಸಾರಿಗೆಯಲ್ಲಿ 6.60 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 5.92 ಕೋಟಿ ರೂ. ತಲುಪಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
Karnataka Recruitment 2023: ಕರ್ನಾಟಕದಲ್ಲಿ 9,000 ಗ್ರಾಮ ಆಡಳಿತಾಧಿಕಾರಿಗಳಿದ್ದು, ಇನ್ನೂ 1,500 ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಈ ಪೈಕಿ ಮೊದಲ ಹಂತದಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಂದಾಯ ಇಲಾಖೆ ನಿರ್ಧರಿಸಿದೆ.
ಇಡಿಸಿಎಸ್ ನಿರ್ದೇಶನಾಲಯ, ಇ-ಆಡಳಿತ ಇಲಾಖೆಯಿಂದ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬೂ.ಅರಳಿಕಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 02 ಗ್ರಾಮ್ ಒನ್ ಕೇಂದ್ರಗಳಿ ಗೆ ಪ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ (https://www.karnatakaone.gov.in/.../GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.