Rajasthan Assembly Election Result 2023: ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಪ್ರಮುಖ ಅಭ್ಯರ್ಥಿಗಳಾದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಮತ್ತು ವಸುಂಧರಾ ರಾಜೆ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಗೆಹ್ಲೋಟ್ ಸರ್ದಾರ್ಪುರದಿಂದ ಕಣದಲ್ಲಿದ್ದರೆ, ಪೈಲಟ್ ಟೊಂಕ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ರಾಜಸ್ಥಾನದ ತಿಜಾರಾ ಕ್ಷೇತ್ರದಲ್ಲಿ ಬಿಜೆಪಿಯ ಬಾಬಾ ಬಾಲಕನಾಥ್ ಮುನ್ನಡೆ ಸಾಧಿಸಿದ್ದಾರೆ. ಭಾನುವಾರ ಬೆಳಗ್ಗೆಯಿಂದಲೇ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ಪ್ರತಿಯೊಬ್ಬ ಅಭ್ಯರ್ಥಿಯ ಎದೆಬಡಿತ ಹೆಚ್ಚಾಗಿದೆ. ಪಕ್ಷಗಳ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಜನಸಾಮಾನ್ಯರಲ್ಲಿ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಅದರಂತೆ ರಾಜಕಿಯ ನಾಯಕರ ಭವಿಷ್ಯವೂ ಇಂದು ನಿರ್ಧಾರವಾಗಲಿದೆ.
ಇದನ್ನೂ ಓದಿ: I.N.D.I.A ಮೈತ್ರಿಕೂಟಕ್ಕೆ ನಾಲ್ಕು ರಾಜ್ಯಗಳ ಫಲಿತಾಂಶಗಳು ಎಷ್ಟು ಮುಖ್ಯ?
Rajasthan election results: BJP leading on 52 seats; Congress on 34
Read @ANI Story | https://t.co/Hnd8L4cRQl#RajasthanElection2023 #Rajasthan #ElectionCommissionOfIndia #BJP #Congress pic.twitter.com/MYy1gehXIz
— ANI Digital (@ani_digital) December 3, 2023
ಏನಾಗಲಿದೆ 7,866 ಅಭ್ಯರ್ಥಿಗಳ ಭವಿಷ್ಯ?
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಒಟ್ಟು 7,866 ಅಭ್ಯರ್ಥಿಗಳು ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ಪೈಕಿ ರಾಜಸ್ಥಾನದ 199 ಕ್ಷೇತ್ರಗಳಲ್ಲಿ 1,862 ಅಭ್ಯರ್ಥಿಗಳು, ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ 2,533 ಅಭ್ಯರ್ಥಿಗಳು, ಛತ್ತೀಸ್‌ಗಢದ 90 ಕ್ಷೇತ್ರಗಳಲ್ಲಿ 1,181 ಅಭ್ಯರ್ಥಿಗಳು ಮತ್ತು ತೆಲಂಗಾಣದ 119 ಕ್ಷೇತ್ರಗಳಲ್ಲಿ 2,290 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
ರಾಜಸ್ಥಾನದ 199 ವಿಧಾನಸಭಾ ಸ್ಥಾನಗಳಿಗೆ ನ.25ರಂದು ಮತದಾನ ನಡೆದಿತ್ತು. ಮಧ್ಯಪ್ರದೇಶದ 230 ಕ್ಷೇತ್ರಗಳಿಗೆ ನ.17ರಂದು ಮತದಾನ ನಡೆದಿತ್ತು. ಛತ್ತೀಸ್‌ಗಢದ 90 ಸ್ಥಾನಗಳಿಗೆ ನ.7 ಮತ್ತು 17ರಂದು 2 ಹಂತಗಳಲ್ಲಿ ಮತದಾನ ನಡೆದಿತ್ತು. ಕೊನೆಯದಾಗಿ ತೆಲಂಗಾಣದ 119 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನ,30ರಂದು ಮತದಾನ ನಡೆದಿತ್ತು. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.
ಇದನ್ನೂ ಓದಿ: ತೆಲಂಗಾಣದಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್.! ಸರ್ಕಾರ ರಚನೆಗೆ ʼಡಿಕೆಶಿ ಮಾಸ್ಟರ್ ಪ್ಲಾನ್ʼ
ಎಕ್ಸಿಟ್ ಪೋಲ್‌ಗಳಲ್ಲಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಮುನ್ನಡೆಯಾಗಿದ್ದರೆ, ಛತ್ತೀಸ್‌ಗಢ ಮತ್ತು ತೆಲಂಗಾಣದ ಕಾಂಗ್ರೆಸ್ ಪರವಾಗಿದೆ. ಈ 4 ರಾಜ್ಯಗಳ ಪ್ರಮುಖ ಅಭ್ಯರ್ಥಿಗಳ ಚುನಾವಣಾ ಭವಿಷ್ಯದ ಬಗ್ಗೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ.
ಏನಾಗುತ್ತೆ ಪ್ರಮುಖ ಅಭ್ಯರ್ಥಿಗಳ ಭವಿಷ್ಯ?
ರಾಜಸ್ಥಾನದ ಪ್ರಮುಖ ಅಭ್ಯರ್ಥಿಗಳ ಪೈಕಿ ಸಿಎಂ ಅಶೋಕ್ ಗೆಹ್ಲೋಟ್, ಮಾಜಿ ಡಿಸಿಎಂ ಸಚಿನ್ ಪೈಲಟ್, ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರಾ, ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ, ಸಚಿವ ಶಾಂತಿ ಧರಿವಾಲ್, ಭನ್ವರ್ ಸಿಂಗ್ ಭಾಟಿ, ಮಮತಾ ಭೂಪೇಶ್, ಪ್ರತಾಪ್ ಸಿಂಗ್ ಖಚರಿಯಾವಾಸ್, ರಾಜೇಂದ್ರ ಯಾದವ್ & ಶಕುಂತಲಾ ರಾವತ್ ಇದ್ದಾರೆ. ಈ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಏನಾಗಲಿದೆ ಅನ್ನೋದು ಇನ್ನು ಕೆಲವೇ ಗಂಟೆಗಳಲ್ಲಿ ತಿಳಿದುಬರಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.