ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಆರೋಪ ಹಾಸ್ಯಾಸ್ಪದ: ಬಿಜೆಪಿ

ಕಾಂಗ್ರೆಸ್ ನಾಯಕರ ದೂರವಾಣಿ ಕರೆಗಳನ್ನು ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಕರ್ನಾಟಕ ಗೃಹ ಸಚಿವ ಆರ್.ರಾಮಲಿಂಗಾರೆಡ್ಡಿ ಅವರ ಆರೋಪ ಹಾಸ್ಯಾಸ್ಪದ ಎಂದು ಬಿಜೆಪಿ ಹೇಳಿದೆ.

Last Updated : Apr 29, 2018, 01:56 PM IST
ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಆರೋಪ ಹಾಸ್ಯಾಸ್ಪದ: ಬಿಜೆಪಿ title=

ನವದೆಹಲಿ: ಕಾಂಗ್ರೆಸ್ ನಾಯಕರ ದೂರವಾಣಿ ಕರೆಗಳನ್ನು ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಕರ್ನಾಟಕ ಗೃಹ ಸಚಿವ ಆರ್.ರಾಮಲಿಂಗಾರೆಡ್ಡಿ ಅವರ ಆರೋಪ ಹಾಸ್ಯಾಸ್ಪದ ಎಂದು ಬಿಜೆಪಿ ಹೇಳಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯತಂತ್ರಗಳನ್ನು ತಿಳಿಯಲು ಬಿಜೆಪಿ ಹಲವು ಅಡ್ಡ ದಾರಿ ಹಿಡಿದಿದ್ದು, ಪಕ್ಷದ ಹಲವು ನಾಯಕರ ದೂರವಾಣಿಗಳನ್ನು ದಿನಕ್ಕೆ 18ಗಂಟೆಗಳಿಗೂ ಹೆಚ್ಚು ಕಾಲ ಕದ್ದಾಲಿಕೆ ಮಾಡಿದೆ ಎಂದು ರಾಜ್ಯ ಗೃಹ ಸಚಿವ ಆರ್. ರಾಮಲಿಂಗಾರೆಡ್ಡಿ ಶನಿವಾರ ಆರೋಪಿಸಿದ್ದರಲ್ಲದೆ, ಇದಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರೇ ಮೂಲ ಕಾರಣ ಎಂದಿದ್ದರು. ಅಲ್ಲದೆ, ಈ ದೂರವಾಣಿ ಸಂಭಾಷಣೆಗಳನ್ನು ಹಿಂದಿ ಮತ್ತು ಆಂಗ್ಲ ಭಾಷೆಗಳಿಗೆ ತರ್ಜುಮೆ ಮಾಡುವ ಕಾರ್ಯವನ್ನೂ ಮಾಡುತ್ತಿದೆ ಎಂದು ಆರೋಪಿಸಿದ್ದರು.

ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ನಡೆಯುತ್ತಿದೆ: ರಾಮಲಿಂಗಾರೆಡ್ಡಿ

ಇದರಿಂದ ಆಕ್ರೋಶಗೊಂಡಿರುವ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ, ಕಾಂಗ್ರೆಸ್ ನಾಯಕರ ಫೋನ್ ಗಳನ್ನು ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ನಗು ಬರುತ್ತಿದೆ ಎಂದು ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದು, ಇದು ಸದ್ಯದಲ್ಲೇ ಅವರಿಗಾಗುವ ಸೋಲಿಗೆ ಕುಂಟು ನೆಪವಾಗಿದೆ ಎಂದು ಟೀಕಿಸಿದ್ದಾರೆ. 

ಹೀಗಾಗಿ ಕರ್ನಾಟಕ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳ ಪ್ರತಿಷ್ಟೆಯ ವಿಚಾರವಾಗುವುದರೊಂದಿಗೆ ರಾಜಕೀಯ ನಾಯಕರ ನಡುವೆ ವೈಯಕ್ತಿಕ ವಾಗ್ದಾಳಿ ನಡೆಸುವ ಮೂಲಕ ಸಮರವೇ ನಡೆಯುತ್ತಿದೆ. ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಂದು ಅವಧಿಗೆ ಆಡಳಿತ ನಡೆಸಲು ಕಾರ್ಯತಂತ್ರ ರೂಪಿಸುತ್ತಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ.

Trending News