ಬಿಜೆಪಿ ಪ್ರಣಾಳಿಕೆ ರಿಲೀಸ್; ರೈತರ ಸಾಲ ಮನ್ನಾ, ಮಹಿಳೆಯರಿಗೆ ಸ್ಮಾರ್ಟ್ ಪೋನ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಬೆನ್ನಲ್ಲೇ ಇಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.

Last Updated : May 4, 2018, 12:50 PM IST
ಬಿಜೆಪಿ ಪ್ರಣಾಳಿಕೆ ರಿಲೀಸ್; ರೈತರ ಸಾಲ ಮನ್ನಾ, ಮಹಿಳೆಯರಿಗೆ ಸ್ಮಾರ್ಟ್ ಪೋನ್ title=

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಬೆನ್ನಲ್ಲೇ ಇಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೇ. ಈ ಬಾರಿಯ ಪ್ರಣಾಳಿಕೆಯಲ್ಲಿ ರೈತರಿಗೆ, ಮಹಿಳೆಯರಿಗೆ ಹಾಗೂ ಬಡವರಿಗೆ ಹಲವು ಸೌಲಭ್ಯಗಳನ್ನು ಒದಗಿಸುವುದಾಗಿ ಬಿಜೆಪಿ ಹೇಳಿದೆ. 

'ನಮ್ಮ ಕರ್ನಾಟಕಕ್ಕೆ ನಮ್ಮ ವಚನ' ಎಂಬ ಶೀರ್ಷಿಕೆಯಲ್ಲಿರುವ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ಕಾಂಗ್ರೆಸ್'ನ ಇಂದಿರಾ ಕ್ಯಾಂಟೀನ್ ಯೋಜನೆಯಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಮುಖ್ಯಮಂತ್ರಿ ಅನ್ನಪೂರ್ಣ ಕ್ಯಾಂಟೀನ್ ಯೋಜನೆ, ಅನ್ನ ದಾಸೋಹ ಯೋಜನೆ ಜಾರಿಗೆ ತರುವುದಾಗಿ ಹೇಳಿದೆ. 

ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶಗಳು

* ರಾಷ್ಟ್ರೀಕೃತ ಬ್ಯಾಂಕ್‌ ನ 1 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ 
* ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ ಉಚಿತ ಸ್ಮಾರ್ಟ್‌ ಫೋನ್‌, ಉಚಿತ ಸ್ಯಾನಿಟರಿ ನ್ಯಾಪ್ಕಿನ್
* ನೇಕಾರರ 1 ಲಕ್ಷ ರೂ. ಸಾಲ ಮನ್ನಾ 
* 1 ಲಕ್ಷ ರೂ.ನಿಂದ 2 ಲಕ್ಷ ರೂ.ವರಗೆ ಭಾಗ್ಯಲಕ್ಷ್ಮೀ ಯೋಜನೆ ಹಣ ಹೆಚ್ಚಳ
* ವಿವಾಹ ಮಂಗಳ ಯೋಜನೆ ಯಲ್ಲಿ  ಬಡ ಯುವತಿಗೆ 25,000 ರೂ ಮತ್ತು 3 ಗ್ರಾಂ ಚಿನ್ನಾಭರಣ 
* ಸ್ತ್ರೀ ಶಕ್ತಿ ಸಂಘಟನೆಗಳ ಸದಸ್ಯರಿಗೆ ಶೇ.1ರ ಬಡ್ಡಿ ದರದಲ್ಲಿ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ
* ಗೋಹತ್ಯೆ ನಿಷೇಧ ಕಾಯ್ದೆಗೆ ಚಾಲನೆ
* ಎಲ್ಲ ಬಡ ಮತ್ತು ದುರ್ಬಲ ವರ್ಗದವರ ಚಿಕಿತ್ಸೆಗಾಗಿ 5 ಲಕ್ಷ ರೂ. ವಿಮೆ ಒದಗಿಸಲು ಆಯುಷ್ಮಾನ್ ಕರ್ನಾಟಕ ಯೋಜನೆ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದೆ. 
*ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಏಮ್ಸ್ ಮಾದರಿಯಲ್ಲಿ 2 ಕರ್ನಾಟಕ ರಾಜ್ಯ ವೈದ್ಯಕೀಯ ಸಂಸ್ಥೆಗಳ ಸ್ಥಾಪನೆ. 
* 'ಸಿ' ಮತ್ತು 'ಡಿ' ನೌಕರರ ನೇಮಕಾತಿ ಪ್ರಕ್ರಿಯೆಯಲ್ಲಿ ಸಂದರ್ಶನ ರದ್ದುಪಡಿಸುವುದು.
* ಹಿಂದುಳಿದ ವರ್ಗಗಳ ವಸತಿ ಸೋಕಿರ್ಣ ನಿರ್ಮಾಣಕ್ಕೆ 7,500 ಕೋಟಿ ರೂ. ನಿಗದಿ.
* ಉನ್ನತ ಶಿಕ್ಷಣ ಪಡೆಯುವ ಬಿಪಿಎಲ್ ವಿದ್ಯಾರ್ಥಿಗಳಿಗೆ ಬಡ್ಡಿ ರಹಿತ ಸಾಲ
* ಪ್ರತಿ ವರ್ಷ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ
* ಶುದ್ಧ ಕುಡಿಯುವ ನೀರು ಯೋಜನೆ ಜಾರಿಗೆ ಮತ್ತು ಕೊಳಗೇರಿ ಮುಕ್ತವಾಗಿಸಲು ಪ್ರತ್ಯೇಕ ಸಚಿವಾಲಯ ಸೇರಿದಂತೆ ಹಲವು ಪ್ರಮುಖ ಅಂಶಗಳನ್ನು ಪ್ರಣಾಳಿಕೆಯಲ್ಲಿ ಬಿಜೆಪಿ ತಿಳಿಸಿದೆ. 

ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಬಿಡುಗಡೆ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್, ಶೋಭಾ ಕರಂದ್ಲಾಜೆ, ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

Trending News