ಏ.30ಕ್ಕೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಏಪ್ರಿಲ್ 30ರಂದು ಬಿಡುಗಡೆ ಮಾಡಲು ನಿರ್ಧರಿಸಿದೆ. 

Last Updated : Apr 27, 2018, 11:22 AM IST
ಏ.30ಕ್ಕೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ title=

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಏಪ್ರಿಲ್ 30ರಂದು ಬಿಡುಗಡೆ ಮಾಡಲು ನಿರ್ಧರಿಸಿದೆ. 

ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಈ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಗಮನಿಸಿ, ನಂತರ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಲು ಆಲೋಚಿಸಿದೆ ಎನ್ನಲಾಗಿದೆ. 

ಇಂದಿನಿಂದ ನಾಲ್ಕು ದಿನಗಳ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಏ.30ರಂದು ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಈಗಾಗಲೇ ನವಕರ್ನಾಟಕ ಜನಪರ ಶಕ್ತಿ ಅಡಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ, ಕೃಷಿ, ಉದ್ಯೋಗ, ಕಾನೂನು ಸುವ್ಯವಸ್ಥೆ, ರೈತರ ಜೀವನ ಸುಧಾರಣೆ ಬಗ್ಗೆ ಬಿಜೆಪಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದ್ದು, ಅದಕ್ಕೆ ಪೂರಕವಾಗಿ ಪ್ರಣಾಳಿಕೆ ಸಿದ್ಧಪಡಿಸಿದೆ ಎನ್ನಲಾಗಿದೆ.

Trending News