ಸಿಎಂ ಸಿದ್ದರಾಮಯ್ಯರ ಇಂದಿನ ಪ್ರವಾಸದ ವಿವರ

ರಾಜ್ಯದಲ್ಲಿ ಹತ್ತು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಪ್ರವಾಸ.

Last Updated : Apr 28, 2018, 10:42 AM IST
ಸಿಎಂ ಸಿದ್ದರಾಮಯ್ಯರ ಇಂದಿನ ಪ್ರವಾಸದ ವಿವರ title=

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದಿನಿಂದ ಹತ್ತು ದಿನಗಳ ಕಾಲ ಪ್ರವಾಸ ಕೈಗೊಂಡಿರುವು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಯಿಂದ ತಮ್ಮ ಪ್ರವಾಸ ಪ್ರಾರಂಭಿಸಲಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಮುಂದಾಗಿರುವ ಸಿದ್ದರಾಮಯ್ಯ ಬೆಳಿಗ್ಗೆ 10:45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಮೊದಲಿಗೆ ಬೆಳಗ್ಗೆ 11:30ಕ್ಕೆ ಚಿಕ್ಕೋಡಿಯ ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬೆಡಕಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಮಧ್ಯಾಹ್ನ 01:00 ಗಂಟೆಗೆ ಹುಕ್ಕೇರಿ ತಾಲೂಕಿನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 03:30ಕ್ಕೆ ಬೈಲಹೊಂಗಲದಲ್ಲಿ ಮತಬೇಟೆ ನಡೆಸಿರುವ ಸಿಎಂ, ಸಂಜೆ 04:30 ಕ್ಕೆ ಬೆಳಗಾವಿ ತಾಲೂಕಿನ ಬಾಳೇಕುಂದ್ರಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ರಾತ್ರಿ 08:00 ಕ್ಕೆ  ಖಾನಾಪುರದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ವಿಜಯ ಸಾಧಿಸಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯದ ಜನತೆ ವಿಜಯ ಮಾಲೆ ಧರಿಸುವರೇ ಎಂಬುದನ್ನು ಮೇ 15 ರವರೆಗೆ ಕಾದುನೋಡಬೇಕಿದೆ.

Trending News