ಎಚ್.ಡಿ. ಕುಮಾರಸ್ವಾಮಿ ರೈತರ ಪರವಾಗಿ ಕೆಲಸ ಮಾಡುತ್ತಾರೆ: ಪ್ರಜ್ವಲ್ ರೇವಣ್ಣ

ರೈತರ ಸಾಲಮನ್ನಾ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಬಾರದು ಎಂದ ಪ್ರಜ್ವಲ್ ರೇವಣ್ಣ  

Last Updated : May 24, 2018, 11:46 AM IST
ಎಚ್.ಡಿ. ಕುಮಾರಸ್ವಾಮಿ ರೈತರ ಪರವಾಗಿ ಕೆಲಸ ಮಾಡುತ್ತಾರೆ: ಪ್ರಜ್ವಲ್ ರೇವಣ್ಣ title=
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರೈತರ ಪರವಾಗಿ ಕೆಲಸ ಮಾಡುತ್ತಾರೆ ಎಂದು ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಮಾತನಾಡಿದ ಪ್ರಜ್ವಲ್, ಕುಮಾರಸ್ವಾಮಿ ಅವರು ರೈತರ ಪರವಾಗಿ ಕೆಲಸ ಮಾಡುತ್ತಾರೆ. ರೈತರ ಸಾಲಮನ್ನಾ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಬಾರದು. ಇದು ಸಮ್ಮಿಶ್ರ ಸರ್ಕಾರ. ಹಾಗಾಗಿ ಮುಖ್ಯಮಂತ್ರಿ ಎಲ್ಲರ ಜೊತೆ ಚರ್ಚೆ ನಡೆಸಿ ಒಳ್ಳೆಯ ನಿರ್ಧಾರಕ್ಕೆ ಬರುತ್ತಾರೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಪಕ್ಷ ಸಂಘಟನೆ ಮಾಡುತ್ತೇವೆ. ರೈತರ ಸಾಲಮನ್ನಾ ವಿಷಯದಲ್ಲಿ ಹಿಂದೆ ಸರಿಯುವ ಮಾತಿಲ್ಲ, ಬಹುಮತ ಬಂದಿದ್ದಾರೆ ಅಧಿಕಾರಕ್ಕೆ ಬಂದ ತಕ್ಷಣವೇ ಸಾಲ ಮನ್ನಾ ಮಾಡುತ್ತಿದ್ದರು. ಆದರೆ ಈಗ ಇರುವುದು ಸಮ್ಮಿಶ್ರ ಸರ್ಕಾರ, ಎರಡು ಪಕ್ಷದ ಮುಖಂಡರು ಕುಳಿತು ಚರ್ಚಿಸಿ ತೀರ್ಮಾನಿಸುತ್ತಾರೆ ಎಂದರು. 

Trending News