ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 'ಭಯೋತ್ಪಾದಕ ಕಾರ್ಖಾನೆಗಳ' ನಿಷೇದ- ಸಚಿವ ರಾಮಲಿಂಗಾರೆಡ್ಡಿ

   

Last Updated : May 1, 2018, 10:20 PM IST
ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 'ಭಯೋತ್ಪಾದಕ ಕಾರ್ಖಾನೆಗಳ' ನಿಷೇದ- ಸಚಿವ ರಾಮಲಿಂಗಾರೆಡ್ಡಿ title=

ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ  ಇಲ್ಲಿನ ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಸೃಷ್ಟಿಸುವಂತಹ ಸಂಘಪರಿವಾರ, ಎಸ್ಡಿಪಿಐ,ಪಿಎಫ್ಐ, ನಂತಹ  ಸಂಘಟನೆಗಳನ್ನು ನಿಷೇದ ಮಾಡುತ್ತೇವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು ಕಳೆದ 10 ತಿಂಗಳಿಂದ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ.ಆದರೆ ಈ ಪ್ರಯತ್ನಗಳನ್ನು ವಿಫಲಗೊಲಿಸಿದ್ದೇವೆ ಎಂದು ತಿಳಿಸಿದರು.

ಇನ್ನು ಮುಂದುವರೆದು ಮಾತನಾಡಿದ ಅವರು ಈ ಹಿಂದೆ ಸ್ವತಃ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾರವರೆ ರಾಜ್ಯಕ್ಕೆ ಬೆಂಕಿ ಹಚ್ಚುವಂತೆ ಕರೆ ನೀಡಿದ್ದರು. ಆದರೆ, ಇದನ್ನು ವಿಫಲಗೊಳಿಸಿ ಕರ್ನಾಟಕದ ಕಾನೂನು ಸುವ್ಯವಸ್ಥೆ ಕಾಪಾಡಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. 

Trending News