ಜೆಡಿಎಸ್ ಬಹುಮತದೊಂದಿಗೆ ಜಯಗಳಿಸಲಿದೆ: ಕುಮಾರಸ್ವಾಮಿ

ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಬಹುಮತಗಳೊಂದಿಗೆ ಜಯಭೇರಿ ಬಾರಿಸಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Last Updated : Apr 26, 2018, 06:11 PM IST
ಜೆಡಿಎಸ್ ಬಹುಮತದೊಂದಿಗೆ ಜಯಗಳಿಸಲಿದೆ: ಕುಮಾರಸ್ವಾಮಿ title=

ಮೈಸೂರು : ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಬಹುಮತಗಳೊಂದಿಗೆ ಜಯಭೇರಿ ಬಾರಿಸಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಇಂದು ANIಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಕುಮಾರಸ್ವಾಮಿ ಅವರು, ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಜೆಡಿಎಸ್ ಜಯಶಾಲಿಯಾಗಿದೆ. ರಾಜ್ಯ ಸರ್ಕಾರದ ಧೋರಣೆಗಳಿಂದ ರಾಜ್ಯದ ಜನತೆ ಬೇಸತ್ತಿದ್ದು, ಜೆಡಿಎಸ್ ಮತ್ತು ಬಹುಜನ ಪಕ್ಷದ ಕಡೆ ಒಲವು ತೋರಿದ್ದಾರೆ. ಮತಗಳ ಪ್ರಮುಖ ಪಾಲು ನಮ್ಮ ಪರವಾಗಿ ಬರಲಿದೆ. ದಲಿತರು ಮಾತ್ರವಲ್ಲ ಬುದ್ಧಿಜೀವಿಗಳು ಸಹ ನಮಗೆ ಬೆಂಬಲ ನೀಡಲಿದ್ದಾರೆ ಎಂದಿದ್ದಾರೆ. 

ಮುಂದುವರೆದು, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಅವಹೇಳನಕಾರಿ ಹೇಳಿಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ದೇವೇಗೌಡರು ಸಿದ್ದರಾಮಯ್ಯ ಅವರನ್ನು ಅಮಾನತುಗೊಳಿಸಿಲ್ಲ, ಪಕ್ಷ ವಿರೋಧಿ ಚಟುವಟಿಕೆಗಳ ಕಾರಣದಿಂದ ಅವರನ್ನು ಅಮಾನತುಗೊಳಿಸಲಾಯಿತು. ಜೆಡಿಎಸ್ ನಾಯಕರಾಗಿದ್ದ ಅವರು ಕಾಂಗ್ರೆಸ್ ಸ್ನೇಹಿತರೊಡನೆ ಪ್ರತ್ಯೇಕ ಸಭೆ ನಡೆಸುತ್ತಿದ್ದರು. ಹಾಗಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಯಿತು ಎಂದು ಸ್ಪಷ್ಟಪಡಿಸಿದರು. 

ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಜೆಡಿಎಸ್, ಬಿಎಸ್ಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮೈತ್ರಿಯೊಂದಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿ ದಲಿತ ಮತದಾರರನ್ನು ಸೆಳೆಯಲು ಜೆಡಿಎಸ್ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ಪಿ ನಾಯಕಿ ಮಾಯಾವತಿ ಅವರನ್ನು ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಕರೆತಂದಿದೆ. ಕಳೆದ 2013ರ ಚುನಾವಣೆಯಲ್ಲಿ 40 ಮತಗಳನ್ನು ಗಳಿಸಿದ್ದ ಜೆಡಿಎಸ್ ಈ ಬಾರಿ ಬಹುಮತ ಗಳಿಸುವ ವಿಶ್ವಾಸದಲ್ಲಿದೆ. 

Trending News