ಕರ್ನಾಟಕ ವಿಧಾನಸಭೆ ಚುನಾವಣೆ ಕಣದಲ್ಲಿ 2,655 ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12 ರಂದು ನಡೆಯಲಿದ್ದು, ಒಟ್ಟು 2,655 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Last Updated : Apr 29, 2018, 12:03 PM IST
ಕರ್ನಾಟಕ ವಿಧಾನಸಭೆ ಚುನಾವಣೆ ಕಣದಲ್ಲಿ 2,655 ಅಭ್ಯರ್ಥಿಗಳು title=

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12 ರಂದು ನಡೆಯಲಿದ್ದು, ಒಟ್ಟು 2,655 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಏ.24ರವರೆಗೆ ಒಟ್ಟು 3,509 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಏ. 27 ಕಡೆಯ ದಿನವಾದ ಹಿನ್ನೆಲೆಯಲ್ಲಿ 587 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದರೆ, 271 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ. 

219 ಮಹಿಳೆಯರು ಸೇರಿದಂತೆ ಆಡಳಿತ ಕಾಂಗ್ರೆಸ್ ಪಕ್ಷದಿಂದ 222, ಬಿಜೆಪಿ ಪಕ್ಷದಿಂದ 224, ಜೆಡಿಎಸ್ ಪಕ್ಷದಿಂದ 201, ಸ್ವತಂತ್ರ ಅಭ್ಯರ್ಥಿಗಳಾಗಿ 1,155 ಮತ್ತು ಇತರ ರಾಷ್ಟ್ರೀಯ, ಪ್ರಾದೇಶಿಕ ಮತ್ತು ಫ್ರಿಂಗ್ ಪಕ್ಷಗಳ 800 ಅಭ್ಯರ್ಥಿಗಳು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರ ಅತಿ ಹೆಚ್ಚು ಅಭ್ಯರ್ಥಿಗಳನ್ನು ಹೊಂದಿದೆ ಎಂದು ಚುನಾವಣಾ ಸಮಿತಿ ತಿಳಿಸಿದೆ. 

ರಾಜ್ಯದಲ್ಲಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಇದರಲ್ಲಿ 36 ಸ್ಥಾನಗಳನ್ನು ಪರಿಶಿಷ್ಟ ಜಾತಿ (ಎಸ್ಸಿಗಳು) ಮತ್ತು 15 ಸ್ಥಾನಗಳನ್ನು ಪರಿಶಿಷ್ಟ ಪಂಗಡ (ಎಸ್ಟಿಗಳು) ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಮೇ 12ರಂದು ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 15 ರಂದು ಮತಎಣಿಕೆ ನಡೆಯಲಿದೆ. 

Trending News