ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿ ಮಾತುಕತೆ

ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಅಂಬರೀಶ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

Last Updated : May 6, 2018, 02:58 PM IST
ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿ ಮಾತುಕತೆ title=

ಬೆಂಗಳೂರು: ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿ ಫಾರಂ ಕೊಟ್ಟು ಸ್ಪರ್ಧಿಸುವಂತೆ ಅಷ್ಟೆಲ್ಲಾ ಕೇಳಿಕೊಂಡರೂ, ಎಲ್ಲಾ ನಾಯಕರನ್ನೂ ಅಲೆಸಿ, ಕಡೆಗೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಬಿ ಫಾರಂ ತಿರಸ್ಕರಿಸಿದ್ದ ಮಾಜಿ ಸಚಿವ, ನಟ ಅಂಬರೀಶ್ ಅವರನ್ನು ಇಂದು ಕುಮಾರಸ್ವಾಮಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. 

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಂಬಿ ಅಪಾರ್ಟ್‌ಮೆಂಟ್‌ನಲ್ಲಿ ಶನಿವಾರ ರಾತ್ರಿ ಅಂಬರೀಶ್ ಅವರನ್ನು ಕುಮಾರಸ್ವಾಮಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಅಂಬರೀಶ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಮಹತ್ವದ ಮಾತುಕತೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Trending News