ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾರಿಗೆ ಬೆಂಕಿ

ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಓಂಶಕ್ತಿ ಚಲಪತಿ ಅವರ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

Last Updated : Apr 24, 2018, 11:09 AM IST
ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾರಿಗೆ ಬೆಂಕಿ title=
ಸಾಂದರ್ಭಿಕ ಚಿತ್ರ

ಕೋಲಾರ: ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರವಷ್ಟೇ ನಾಮಪತ್ರ ಸಲ್ಲಿಸಿರುವ ಓಂಶಕ್ತಿ ಚಲಪತಿ ಅವರ ಕಾರಿಗೆ ಇಂದು ಬೆಳಗಿನ ಜಾವ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಕೋಲಾರ ನಗರದ ಕಠಾರಿ ಪಾಳ್ಯ ಬಡಾವಣೆಯಲ್ಲಿ ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇನ್ನೋವ ಕಾರಿಗೆ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲೇ ಇದ್ದ ಓಮ್ನಿ ಕಾರು ಕೂಡ ಸುಟ್ಟು ಭಸ್ಮವಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಓಂಶಕ್ತಿ ಚಲಪತಿ ಜನಪ್ರಿಯತೆ ಸಹಿಸಲಾಗದೆ ವಿರೋಧಿಗಳು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Trending News