ಚುನಾವಣಾ ಪ್ರಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್: ಇದು ಪಕ್ಷಕ್ಕಾಗಿ ಅಲ್ಲ, ಸ್ನೇಹಕ್ಕಾಗಿ

ಬೆಳಗ್ಗೆ ಜೆಡಿಎಸ್ ಅಭ್ಯರ್ಥಿ ಪರ, ಸಂಜೆ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲಿರುವ ಯಶ್.

Last Updated : May 2, 2018, 12:43 PM IST
ಚುನಾವಣಾ ಪ್ರಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್: ಇದು ಪಕ್ಷಕ್ಕಾಗಿ ಅಲ್ಲ, ಸ್ನೇಹಕ್ಕಾಗಿ title=

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದ್ದು, ಕಣ ರಂಗೇರಿದೆ. ರಾಜಕೀಯ ಪಕ್ಷಗಳ ಪರವಾಗಿ ಸ್ಟಾರ್ ಪ್ರಚಾರಕರ ಎಂಟ್ರಿ ಸಹ ಕಡಿಮೆಯೇನಿಲ್ಲ. ನನಗೆ ರಾಜಕಾರಣಿಯಾಗಳು ಇಷ್ಟವಿಲ್ಲ ಎಂದಿದ್ದ ರಾಕಿಂಗ್ ಸ್ಟಾರ್ ಯಶ್ ಈಗ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಆದರೆ ಇದು ಯಾವುದೇ ಪಕ್ಷಕ್ಕಾಗಿ ಅಲ್ಲ, ಅವರ ಸ್ನೇಹಕ್ಕಾಗಿ ಮಾತ್ರ.

ಹೌದು, ರಾಕಿಂಗ್ ಸ್ಟಾರ್ ಯಶ್ ಇಂದು ಬೆಳಿಗ್ಗೆ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್ ಪರ ರೋಡ್ ಶೋ ನಡೆಸಿ ಪ್ರಚಾರ ನಡೆಸಿದರು. 

ಅಲ್ಲದೆ, ಇಂದು ಸಂಜೆ 05:00ಗಂಟೆಗೆ ಗನ್ ಹೌಸ್ ವೃತ್ತದಿಂದ ರ್ಯಾಲಿ ಆರಂಭಿಸಲಿರುವ ನಟ ಯಶ್ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎ. ರಾಮದಾಸ್ ಪರ ಪ್ರಚಾರ ನಡೆಸಲಿದ್ದಾರೆ.

ಇಬ್ಬರೂ ನನ್ನ ಆಪ್ತರಾಗಿರುವ ಕಾರಣ ಇವರ ಪರ ಪ್ರಚಾರ ಕೈಗೊಳ್ಳುತ್ತಿದ್ದೇನೆ. ಇದೇ ರೀತಿ ಇತರ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೂಡಾ ಪ್ರಚಾರ ಮಾಡಬಹುದು. ಆದರೆ ನಾನು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ ಎಂದು ರಾಕಿಂಗ್ ಸ್ಟಾರ್ ಹೇಳಿದ್ದಾರೆ.

Trending News