ಬೆಂಗಳೂರು: ಮೇ 12ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ಪಕ್ಷಗಳು ಒಳಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಜೆಡಿಎಸ್ ಗೆ ನೆರವಾಗಿದೆ ಎಂದು ಕೆಲದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್-ಬಿಜೆಪಿ ವಿರುದ್ಧ ಆರೋಪ ಮಾಡಿದ್ದರು. ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋ ಒಂದು ದೊರೆತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್-ಬಿಜೆಪಿ ಒಳಮೈತ್ರಿ ಬಹಿರಂಗ ಪಡಿಸುವ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡರು ಮಾತನಾಡಿರುವ ವಿಡಿಯೋ ಈಗ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಜಿ.ಟಿ. ದೇವೇಗೌಡ ಕಾಂಗ್ರೆಸ್ ಅನ್ನು ಸೋಲಿಸಬೇಕು, 'ಎಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪ್ರಬಲವಾಗಿರುತ್ತಾರೋ ಅಲ್ಲಿ ಬಿಜೆಪಿ ಮತದಾರರು ಜೆಡಿಎಸ್ ಗೆ ಮತ ಹಾಕುತ್ತಾರೆ ಮತ್ತು ಬಿಜೆಪಿ ಸಮರ್ಥವಾಗಿದ್ದರೆ ಅಂತಹ ಕಡೆಗಳಲ್ಲಿ ಜೆಡಿಎಸ್ ಮತದಾರರು ಬಿಜೆಪಿಗೆ ಮತಹಾಕಲಿದ್ದಾರೆ' ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಮತ್ತು ಜೆಡಿಎಸ್ ಗುಟ್ಟಾಗಿ ಮಾಡಿಕೊಂಡಿರುವ ಒಪ್ಪಂದ ಈಗ ಗುಟ್ಟಾಗಿ ಉಳಿದಿಲ್ಲ. ಜೆಡಿಎಸ್ ನ ಜಾತ್ಯಾತೀತ ಡೋಂಗಿ ತನದ ಮುಖವಾದ ಈಗ ಕಳಚುವ ಸಮಯ ಬಂದಿದೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ಹೀಗೆ ಟ್ವೀಟ್ ಮೂಲಕ ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇದನ್ನೇ ಗುರಿಯಾಗಿಸಿಕೊಂಡಿರುವ ಸಿದ್ದರಾಮಯ್ಯ ಜೆಡಿಎಸ್-ಬಿಜೆಪಿ ನಡುವಿನ ದೋಸ್ತಿ ಬಹಿರಂಗವಾಗಿದೆ ಎಂದು ಟೀಕಿಸಿದ್ದಾರೆ.
GT Deve Gowda of JDS says “where JDS candidate is strong BJP voters will vote JDS & where BJP is strong JDS voters will vote BJP.”
The secret understanding between BJP & JDS is not no secret anymore.
Time for JDS to shed secular pretensions.https://t.co/GGFbtqujOS
— Siddaramaiah (@siddaramaiah) April 27, 2018