ನಾವು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದ್ದೇವೆ: ಜೆಡಿಎಸ್ ವರಿಷ್ಠ ದೇವೇಗೌಡ

ಮತದಾರರು ನಮ್ಮ ಬಗ್ಗೆ ಒಲವು ತೋರಲಿದ್ದಾರೆ- ಎಚ್ಡಿಡಿ  

Last Updated : May 12, 2018, 12:54 PM IST
ನಾವು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದ್ದೇವೆ: ಜೆಡಿಎಸ್ ವರಿಷ್ಠ ದೇವೇಗೌಡ title=
Pic: ANI

ಹೊಳೆನರಸಿಪುರ: ಹಾಸನ ಜಿಲ್ಲೆಯ ಹೊಳೆನರಸಿಪುರದ ಮತಗಟ್ಟೆ ಸಂಖ್ಯೆ 244ರಲ್ಲಿ ಮತ ಚಲಾಯಿಸಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಮತದಾರರು ನಮ್ಮ ಬಗ್ಗೆ ಒಲವು ತೋರಲಿದ್ದಾರೆ. ನಾವು ಸರ್ಕಾರ ರಚಿರುವ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸಿಪುರದ ಮತಗಟ್ಟೆ ಸಂಖ್ಯೆ 244ರಲ್ಲಿ ಎಚ್.ಡಿ. ದೇವೇಗೌಡರು, ಪತ್ನಿ ಚೆನ್ನಮ್ಮ, ಪುತ್ರ ಎಚ್.ಡಿ. ರೇವಣ್ಣ, ಸೊಸೆ ಭವಾನಿ ರೇವಣ್ಣ ಮತ್ತು ಕುಟುಂಬದ ಇತರ ಸದಸ್ಯರೊಂದಿಗೆ ತೆರಳಿ ಮತಚಲಾಯಿಸಿದರು.

Trending News