9 ನೇ ತರಗತಿಯಿಂದ ಪ್ರತಿ ತಿಂಗಳು 1,000 ರೂ.ವಿದ್ಯಾರ್ಥಿ ವೇತನ !ಸರ್ಕಾರದ ಅಧಿಸೂಚನೆ ಪ್ರಕಟ

ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 9 ರಿಂದ 12 ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಮಾಸಿಕ 1,000 ರೂ.ನೀಡಲಾಗುತ್ತದೆ.   ಪ್ರತಿ ತರಗತಿಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.  

Written by - Ranjitha R K | Last Updated : Jan 27, 2025, 10:47 AM IST
  • ಪ್ರತಿ ತಿಂಗಳು 1 ,000 ರೂಪಾಯಿಗಳ ವಿದ್ಯಾರ್ಥಿವೇತನ
  • ಸರ್ಕಾರದಿಂದ ಅಧಿಸೂಚನೆ ಪ್ರಕಟ
  • ಯಾರು ಈ ವಿದ್ಯಾರ್ಥಿವೇತನಕ್ಕೆ ಅರ್ಹರು
9 ನೇ ತರಗತಿಯಿಂದ ಪ್ರತಿ ತಿಂಗಳು 1,000 ರೂ.ವಿದ್ಯಾರ್ಥಿ ವೇತನ !ಸರ್ಕಾರದ ಅಧಿಸೂಚನೆ ಪ್ರಕಟ  title=

ಹರಿಯಾಣ ಸರ್ಕಾರವು ಹೊಸ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿದೆ.  ಅದರ ಅಡಿಯಲ್ಲಿ ಆಯಾ ತರಗತಿಗಳಲ್ಲಿ ಅಗ್ರಸ್ಥಾನದಲ್ಲಿರುವ  ವಿದ್ಯಾರ್ಥಿಗಳು 1,000 ರೂಪಾಯಿಗಳ ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.  ವಿದ್ಯಾರ್ಥಿವೇತನವನ್ನು ಅಕಾಡೆಮಿಕ್ ಎಕ್ಸಲೆನ್ಸ್ ಎಂಕರೇಜ್‌ಮೆಂಟ್ (ಇಇಇ) ಉಪಕ್ರಮದ ಅಡಿಯಲ್ಲಿ ನೀಡಲಾಗುತ್ತದೆ.

ಯಾರು ಈ ವಿದ್ಯಾರ್ಥಿವೇತನಕ್ಕೆ ಅರ್ಹರು : 
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 9 ರಿಂದ 12 ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಮಾಸಿಕ 1,000 ರೂ.ನೀಡಲಾಗುತ್ತದೆ.  ತಮ್ಮ ವಾರ್ಷಿಕ ಪರೀಕ್ಷೆಗಳಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದು, ಪ್ರತಿ ತರಗತಿಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ : Income Tax ಕಟ್ಟುವ ಪದ್ದತಿಯೇ ಇಲ್ಲದ ದೇಶಗಳು ಯಾವುವು ಗೊತ್ತಾ?

ಯೋಜನೆಯನ್ನು ಯಾವಾಗ ಪ್ರಾರಂಭಿಸಲಾಯಿತು? :
ಪ್ರೋತ್ಸಾಹಧನ ಪಡೆಯಲು ಅರ್ಹರಾಗಿರುವ ವಿದ್ಯಾರ್ಥಿಗಳ ಹೆಸರನ್ನು ಜನವರಿ 24ರೊಳಗೆ ಹಾಜರುಪಡಿಸುವಂತೆ ಪ್ರೌಢಶಿಕ್ಷಣ ನಿರ್ದೇಶಕರು ಎಲ್ಲಾ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 2005-06ರಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಅಕಾಡೆಮಿಕ್ ಎಕ್ಸಲೆನ್ಸ್ ಎಂಕರೇಜ್‌ಮೆಂಟ್ (EEE) ಯೋಜನೆಯಡಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈ ಉಪಕ್ರಮದ ಅಡಿಯಲ್ಲಿ, ತಮ್ಮ ಹಿಂದಿನ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಅಧಿಸೂಚನೆ ಪ್ರಕಟ :
ಪ್ರತಿ ಶಾಲೆಯು 9 ರಿಂದ 12 ನೇ ತರಗತಿಯವರೆಗಿನ ಒಬ್ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಯನ್ನು ಈ ವಿದ್ಯಾರ್ಥಿವೇತನವನ್ನು ಆಯ್ಕೆ ಮಾಡಬಹುದು. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅದರಂತೆ ಎಲ್ಲಾ ಶಾಲೆಗಳಿಗೆ ಸೂಚನೆಗಳನ್ನು ನೀಡಲಾಗಿದೆ. 

ಇದನ್ನೂ ಓದಿ : ಸರ್ಕಾರಿ ನೌಕರರೇ ಗಮನಿಸಿ ! ಮೂಲ ವೇತನದಲ್ಲಿ ಆಗುವುದು ಭಾರೀ ಏರಿಕೆ !ಆದರೆ ಶೂನ್ಯಕ್ಕೆ ಇಳಿಯುವುದು ಡಿಎ !

ಇದರ ಹೊರತಾಗಿ, ಅರ್ಹ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆಯಂತಹ ಇತರ ಅನೇಕ ವಿದ್ಯಾರ್ಥಿವೇತನ ಯೋಜನೆಗಳು ಲಭ್ಯವಿದೆ. ಈ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೆ ಮಾಸಿಕ 2,500 ರೂ. ಮತ್ತು ಹೆಣ್ಣು ಮಕ್ಕಳಿಗೆ ಮಾಸಿಕ 3,000 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಆಯಾ ನಿಯಂತ್ರಕ ಸಂಸ್ಥೆಗಳು ಅನುಮೋದಿಸಿದ ಪಠ್ಯಕ್ರಮದ ಅವಧಿಯನ್ನು ಅವಲಂಬಿಸಿ 1 ರಿಂದ 5 ವರ್ಷಗಳವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.  

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News