PMFBY Claim: ಈ ಕಾರಣಕ್ಕಾಗಿ ಬ್ಲಾಕ್ ಲಿಸ್ಟ್ ಆಗಲಿದೆ ಐಸಿಐಸಿಐ ಲಂಬಾರ್ಡ್, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಆಡಳಿತ

ICICI Lombard: ಮಹಾರಾಷ್ಟ್ರದ ಅಕೋಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನೀಮಾ ಅರೋರಾ ಅವರ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಜಿಲ್ಲೆಯ ಐಸಿಐಸಿಐ ಕಂಪನಿಯ ಕಚೇರಿಗಳಲ್ಲಿ ಸಾಕಷ್ಟು ಉದ್ಯೋಗಿಗಳೂ ಇಲ್ಲದಿರುವುದು ಕಂಡುಬಂದಿದೆ. ಹೀಗಾಗಿ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.  

Written by - Nitin Tabib | Last Updated : May 18, 2023, 11:52 AM IST
  • ಏತನ್ಮಧ್ಯೆ, ವಿಷಯಕ್ಕೆ ಸಂಬಂಧಿಸಿದಂತೆ ಕಂಪನಿಯ ಸ್ಪಷ್ಟೀಕರಣ ಕೋರಿದಾಗ, ತಾವು ಅಧಿಕಾರಿಗಳೊಂದಿಗೆ ಮಾತನಾಡುತ್ತಿದೆ ಎಂದು ಅದರ ವಕ್ತಾರರು ಹೇಳಿದ್ದಾರೆ.
  • ಕಂಪನಿಯ ವಕ್ತಾರರು, "ನಾವು ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಮತ್ತು PMFBY ಕಾರ್ಯಾಚರಣೆಯ ಮಾರ್ಗಸೂಚಿಗಳ
  • ಪ್ರಕಾರ ಕ್ಲೈಮ್‌ಗಳ ತ್ವರಿತ ಪರಿಹಾರ ಮತ್ತು ಇತ್ಯರ್ಥವನ್ನು ಖಚಿತಪಡಿಸಿಕೊಳ್ಳಲು ನಮ್ಮ ಸಂಪೂರ್ಣ ಸಹಕಾರವನ್ನು ನೀಡುತ್ತೇವೆ" ಎಂದು ಹೇಳಿದ್ದಾರೆ.
PMFBY Claim: ಈ ಕಾರಣಕ್ಕಾಗಿ ಬ್ಲಾಕ್ ಲಿಸ್ಟ್ ಆಗಲಿದೆ ಐಸಿಐಸಿಐ ಲಂಬಾರ್ಡ್, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಆಡಳಿತ title=

ICIC Lombard Black List proposal to Maharashtra Govt: ರೈತರಿಗೆ ಬೆಳೆ ವಿಮೆ ಪಾವತಿ ವಿಳಂಬಕ್ಕಾಗಿ ಐಸಿಐಸಿಐ ಲೊಂಬಾರ್ಡ್ ಅನ್ನು ಕಪ್ಪುಪಟ್ಟಿಗೆ ಸೇರಿಸಲು ಮಧ್ಯ ಮಹಾರಾಷ್ಟ್ರದ ಅಕೋಲಾ ಜಿಲ್ಲಾಡಳಿತ ಶಿಫಾರಸು ಮಾಡಿದೆ. ಈ ಕುರಿತು ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಬೆಳೆ ವಿಮೆ ಮಾಡಲು ಖಾಸಗಿ ಕಂಪನಿಯನ್ನು ನೇಮಿಸಲಾಗಿದೆ, ಆದರೆ ಪ್ರಕೃತಿ ವಿಕೋಪದ ನಂತರ ರೈತರ ಪರಿಹಾರದ ಹಕ್ಕುಗಳನ್ನು ಇತ್ಯರ್ಥಪಡಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಜಿಲ್ಲಾಧಿಕಾರಿ ನೀಮಾ ಅರೋರಾ ಮಾಹಿತಿ ನೀಡಿದ್ದಾರೆ.

ವಿಮಾ ಕಂಪನಿಯ ಕೆಲಸಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ಬಂದಿವೆ: ಡಿಎಂ
ಜಿಲ್ಲಾ ಮ್ಯಾಜಿಸ್ಟ್ರೇಟ್ ನೀಮಾ ಅರೋರಾ ಅವರ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಜಿಲ್ಲೆಯ ಐಸಿಐಸಿಐ ಕಂಪನಿಯ ಕಚೇರಿಗಳಲ್ಲಿ ಸಾಕಷ್ಟು ಉದ್ಯೋಗಿಗಳೂ ಇಲ್ಲದಿರುವುದು ಕಂಡುಬಂದಿದೆ. ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸೋಮವಾರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿರುವುದಾಗಿ ಸುದ್ದಿಗಾರರಿಗೆ ಅವರು ಮಾಹಿತಿಯನ್ನು ನೀಡಿದ್ದಾರೆ. ಕಂಪನಿಯು ತನ್ನ ಯಾವುದೇ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬ ಆರೋಪವೂ ಇದೆ. ಇದರಿಂದ ರೈತರು ಬೆಳೆ ಕೈಕೊಟ್ಟಾಗ ಸರಿಯಾದ ಸಮಯಕ್ಕೆ ವಿಮೆ ಹಣ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ-Farmers Scheme: ದೇಶದ ಪಶುಪಾಲಕರಿಗೆ ಕೇಂದ್ರ ಸರ್ಕಾರ ನೀಡುತ್ತಿದೆ 3 ಲಕ್ಷ ರೂ.ಧನಸಹಾಯ!

ICICI ಲೊಂಬಾರ್ಡ್‌ನ 10 ಉದ್ಯೋಗಿಗಳ ವಿರುದ್ಧ ಮೊಕದ್ದಮೆ
ರಾಜ್ಯ ಕೃಷಿ ಇಲಾಖೆಯು ಮಾರ್ಚ್ 21 ರಂದು ಐಸಿಐಸಿಐ ಲೊಂಬಾರ್ಡ್‌ನ 10 ಉದ್ಯೋಗಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 (ವಂಚನೆ) ಮತ್ತು 465 (ನಕಲಿ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ-Share Market: ಸ್ಟಾಕ್ ಮಾರ್ಕೆಟ್ ನಿಂದ ಹೊರಬೀಳಲಿವೆ ಈ 7 ಷೇರುಗಳು, ಹಾನಿಯಿಂದ ಪಾರಾಗಲು ಇಂದೇ ಈ ಕೆಲಸ ಮಾಡಿ

ICICI ಲೊಂಬಾರ್ಡ್ ಹೇಳಿಕೆ
ಏತನ್ಮಧ್ಯೆ, ವಿಷಯಕ್ಕೆ ಸಂಬಂಧಿಸಿದಂತೆ ಕಂಪನಿಯ ಸ್ಪಷ್ಟೀಕರಣ ಕೋರಿದಾಗ, ತಾವು ಅಧಿಕಾರಿಗಳೊಂದಿಗೆ ಮಾತನಾಡುತ್ತಿದೆ ಎಂದು ಅದರ ವಕ್ತಾರರು ಹೇಳಿದ್ದಾರೆ. ಕಂಪನಿಯ ವಕ್ತಾರರು, "ನಾವು ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಮತ್ತು PMFBY ಕಾರ್ಯಾಚರಣೆಯ ಮಾರ್ಗಸೂಚಿಗಳ ಪ್ರಕಾರ ಕ್ಲೈಮ್‌ಗಳ ತ್ವರಿತ ಪರಿಹಾರ ಮತ್ತು ಇತ್ಯರ್ಥವನ್ನು ಖಚಿತಪಡಿಸಿಕೊಳ್ಳಲು ನಮ್ಮ ಸಂಪೂರ್ಣ ಸಹಕಾರವನ್ನು ನೀಡುತ್ತೇವೆ" ಎಂದು ಹೇಳಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News