Pension Scheme News : ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಕೇಂದ್ರ ನೌಕರರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಕೆಲವು ರಾಜ್ಯಗಳಲ್ಲಿಯೂ ಇತ್ತೀಚೆಗೆ ಸರ್ಕಾರಿ ನೌಕರರು ಒಪಿಎಸ್ ಮರು ಜಾರಿಗೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಸರ್ಕಾರಿ ನೌಕರರ ಬೇಡಿಕೆಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಂಡು ಬಿಜೆಪಿಯೇತರ ಆಡಳಿತವಿರುವ ಛತ್ತೀಸ್‌ಗಢ, ರಾಜಸ್ಥಾನ, ಜಾರ್ಖಂಡ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಿದೆ. ಒಪಿಎಸ್ ಮರುಜಾರಿಯ ನಂತರ, ನಿವೃತ್ತ ನೌಕರರು ಆರ್ಥಿಕವಾಗಿ ಲಾಭ ಪಡೆದಿದ್ದಾರೆ. ಇನ್ನೊಂದೆಡೆ ರಾಜಕೀಯ ಪಕ್ಷಗಳೂ ಇದರಲ್ಲಿ ತಮ್ಮ ರಾಜಕೀಯ ಲಾಭವನ್ನು ಕಂಡು ಕೊಂಡಿವೆ.
ಹಳೆಯ ಪಿಂಚಣಿಯನ್ನು ಮರುಜಾರಿಗೊಳಿಸುವ ಭರವಸೆ :
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಹಳೆಯ ಪಿಂಚಣಿಯನ್ನು ಮತ್ತೆ ಜಾರಿಗೆ ತರುವುದಾಗಿ ಚುನಾವಣಾ ಭರವಸೆ ನೀಡಿತ್ತು. ಇದಾದ ನಂತರ ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ತಾವು ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ. ಈಗ ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚಟುವಟಿಕೆಗಳು ತೀವ್ರಗೊಂಡಿವೆ. ಹಳೆಯ ಪಿಂಚಣಿ ಯೋಜನೆ ಮರು ಜಾರಿ ಬೇಡಿಕೆ ಕೂಡಾ ಮತ್ತೆ ಜೋರಾಗಿದೆ.
ಇದನ್ನೂ ಓದಿ : ರೈಲಿನಲ್ಲಿ ಪ್ರಯಾಣಿಸುವಾಗ ಊಟ ತಿಂಡಿ, ಬೆಡ್ ಶೀಟ್, ದಿಂಬು ಎಲ್ಲವೂ ಉಚಿತವಾಗಿ ಸಿಗಬೇಕಾದರೆ ಹೀಗೆ ಮಾಡಿ
ಹಳೆಯ ಪಿಂಚಣಿ ಯೋಜನೆಯೇ ಪ್ರಮುಖ ಅಸ್ತ್ರ :
ಬಿಜೆಪಿ ಸೋತ ಹಿಮಾಚಲ ಪ್ರದೇಶದಂತಹ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡುವುದೇ ದೊಡ್ಡ ಅಸ್ತ್ರವಾಗಿತ್ತು. ಈ ಕುರಿತು ಮಾತನಾಡಿದ ಅಮಿತ್ ಶಾ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಗೆ ಬೇಡಿಕೆ ಇಡುತ್ತಿರುವುದು ನಿಜ. ಆದರೆ ಅದನ್ನು ಮರು ಜಾರಿ ಮಾಡುವ ಮೊದಲು, ನಾವು ಸಂಪನ್ಮೂಲಗಳ ಲಭ್ಯತೆ ಮತ್ತು ಬಜೆಟ್ ನಿರ್ಬಂಧಗಳನ್ನು ನೋಡಬೇಕಾಗುತ್ತದೆ. ಈ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದರು. ಸಮಿತಿಯಿಂದ ಬರುವ ವರದಿಯ ಆಧಾರದ ಮೇಲೆ ಪಿಂಚಣಿ ವಿಚಾರವನ್ನು ನಿರ್ಧರಿಸಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.
ವರ್ಷಾಂತ್ಯದ ವೇಳೆಗೆ ಎನ್‌ಪಿಎಸ್‌ನಲ್ಲಿ ಬದಲಾವಣೆ :
ವರ್ಷಾಂತ್ಯದೊಳಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ (ಎನ್‌ಪಿಎಸ್) ಬದಲಾವಣೆಗಳನ್ನು ಮಾಡಬಹುದು ಎಂದು ಇತ್ತೀಚೆಗೆ ಮಾಧ್ಯಮ ವರದಿಯಲ್ಲಿ ಹೇಳಲಾಗಿದೆ. ನಿವೃತ್ತಿಯ ನಂತರ ನೌಕರರು ಕನಿಷ್ಠ 40 ರಿಂದ 45 ರಷ್ಟು ವೇತನವನ್ನು ಪಿಂಚಣಿಯಾಗಿ ಪಡೆಯುವಂತೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಉನ್ನತ ಮಟ್ಟದ ಸಮಿತಿ ಈ ಶಿಫಾರಸು ಮಾಡಿದೆ ಎನ್ನಲಾಗಿದೆ.
ಇದನ್ನೂ ಓದಿ : ವೈಯಕ್ತಿಕ ಸಾಲ ತೆಗೆದುಕೊಳ್ಳುವ ಬದಲು ಇಲ್ಲಿಂದ ಹಣ ಪಡೆದುಕೊಳ್ಳಿ, ಹೊರೆ ಕಮ್ಮಿಯಾಗುತ್ತೆ!
ಆದರೆ ಈ ಬಗ್ಗೆ ಸರ್ಕಾರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದು. ಹಳೆಯ ಪಿಂಚಣಿ ಯೋಜನೆಯಡಿ ನೌಕರರಿಗೆ ಕೊನೆಯ ವೇತನದ ಶೇ 50ರಷ್ಟನ್ನು ಪಿಂಚಣಿಯಾಗಿ ನೀಡಲು ಅವಕಾಶವಿದೆ. ರಾಜಸ್ಥಾನ, ಹಿಮಾಚಲ ಪ್ರದೇಶ, ಪಂಜಾಬ್, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ನಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲಾಗಿದೆ. ಪ್ರಸ್ತುತ ಜಾರಿಯಲ್ಲಿರುವ ಮಾರುಕಟ್ಟೆ ಸಂಬಂಧಿತ ಪಿಂಚಣಿ ಯೋಜನೆಯನ್ನು 2004 ರಲ್ಲಿ ಪ್ರಾರಂಭಿಸಲಾಯಿತು. ಇದರಲ್ಲಿ ನೌಕರರು ಮೂಲ ವೇತನದ ಶೇ.10ರಷ್ಟು ಹಾಗೂ ಸರಕಾರ ಶೇ.14ರಷ್ಟು ಕೊಡುಗೆ ನೀಡಬೇಕು. ಆದರೆ ಹಳೆಯ ಪಿಂಚಣಿಯಲ್ಲಿ ಉದ್ಯೋಗಿ ಯಾವುದೇ ರೀತಿಯ ಕೊಡುಗೆಯನ್ನು ನೀಡುವ ಅಗತ್ಯ ಇರುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.