Ration card Holder Ayushman Card : ಪಡಿತರ ಚೀಟಿದಾರರ ಅನುಕೂಲಕ್ಕಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಮತ್ತೊಂದು ಹೆಜ್ಜೆಯನ್ನಿಟ್ಟು, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಸರ್ಕಾರ ಮತ್ತೊಂದು ಸೌಲಭ್ಯವನ್ನು ಕಡ್ಡಾಯಗೊಳಿಸಿದೆ. ಎಲ್ಲಾ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆಗಾಗಿ ಆಯುಷ್ಮಾನ್ ಕಾರ್ಡ್ಗಳನ್ನು ಮಾಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಜಿಲ್ಲಾ ಮತ್ತು ತಹಸೀಲ್ ಮಟ್ಟದಲ್ಲಿ ವಿಶೇಷ ಅಭಿಯಾನವೂ ನಡೆಯುತ್ತಿದೆ. ಅಭಿಯಾನದಡಿ ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ಮಾಡಿಸುವ ಗುರಿ ಹೊಂದಲಾಗಿದೆ.
ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿದೆ ಅಭಿಯಾನ :
ಸರ್ಕಾರದ ವತಿಯಿಂದ ಜನ ಸುವಿಧಾ ಕೇಂದ್ರಗಳಲ್ಲೂ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ. ಪಡಿತರ ಚೀಟಿಯನ್ನು ತೋರಿಸುವ ಮೂಲಕ ಜನ್ ಸುವಿಧಾ ಕೇಂದ್ರದಲ್ಲಿ ಆಯುಷ್ಮಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು. ಈ ಅಭಿಯಾನವನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದೆ. ಅಭಿಯಾನದ ಅಡಿಯಲ್ಲಿ, ಎಲ್ಲಾ ಅಂತ್ಯೋದಯ ಕಾರ್ಡ್ ಹೊಂದಿರುವವರ ಆಯುಷ್ಮಾನ್ ಕಾರ್ಡ್ಗಳನ್ನು ಮಾಡಲಾಗುವುದು.
ಇದನ್ನೂ ಓದಿ : Vegetable Price Today: ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ! ಹೀಗಿದೆ ನೋಡಿ ದರ ವಿವರ
ಆಯುಷ್ಮಾನ್ ಕಾರ್ಡ್ ಹೊಂದಿಲ್ಲದ ಅಂತ್ಯೋದಯ ಕಾರ್ಡ್ ದಾರರು ಇಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಸಂಬಂಧಪಟ್ಟ ಇಲಾಖೆಗೆ ಭೇಟಿ ನೀಡುವ ಮೂಲಕ ತಮ್ಮ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಅರ್ಹ ಫಲಾನುಭವಿ, ಕಾರ್ಡ್ ಪಡೆದ ನಂತರ ಅಂತ್ಯೋದಯ ಪಡಿತರ ಚೀಟಿಯನ್ನು ಜನಸೇವಾ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಆಯುಷ್ಮಾನ್ ಪ್ಯಾನಲ್ ನಲ್ಲಿರುವ ಖಾಸಗಿ ಆಸ್ಪತ್ರೆ ಅಥವಾ ಜಿಲ್ಲಾಸ್ಪತ್ರೆಯಲ್ಲಿ ತೋರಿಸಿ ಕುಟುಂಬದ ಎಲ್ಲಾ ಸದಸ್ಯರಿಗೂ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳಬಹುದು.
ಚಿಕಿತ್ಸೆಗಾಗಿ ಅಲೆದಾಡಬೇಕಾಗಿಲ್ಲ :
ಈಗಾಗಲೇ ಯೋಜನೆಯಲ್ಲಿ ಹೆಸರು ನೊಂದಾಯಿಸಿಕೊಂಡಿರುವ ಫಲಾನುಭವಿಗಳ ಕಾರ್ಡ್ಗಳನ್ನು ಮಾತ್ರ ಈಗ ಮಾಡಲಾಗುತ್ತಿದೆ. ಅಂತ್ಯೋದಯ ಕಾರ್ಡ್ ದಾರರು ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಎದುರಾದಲ್ಲಿ ಚಿಕಿತ್ಸೆಗಾಗಿ ಅಲೆದಾಡದಂತೆ ನೋಡಿಕೊಳ್ಳುವುದು ಸರ್ಕಾರದ ಯೋಜನೆಯಾ ಉದ್ದೇಶ.
ಇದನ್ನೂ ಓದಿ : Gold Price Today : ಮತ್ತೆ ಏರಿಕೆಯಾಯಿತು ಚಿನ್ನದ ಬೆಲೆ , ಬೆಳ್ಳಿ ಕೂಡಾ ಬಲು ಭಾರ
ಅಂತ್ಯೋದಯ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಈ ಕಾರ್ಡ್ ಮೂಲಕ, ಫಲಾನುಭವಿಯು ಪ್ರತಿ ತಿಂಗಳು ಕೈಗೆಟುಕುವ ಬೆಲೆಯಲ್ಲಿ ಆಹಾರ ಪದಾರ್ಥಗಳನ್ನು ಪಡೆಯುವುದು ಸಾಧ್ಯವಾಗುತ್ತದೆ. ಇದರ ಜೊತೆಗೆ ಇದೀಗ ಉತ್ತರಪ್ರದೇಶದ ಯೋಗಿ ಸರ್ಕಾರವು ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಯುಷ್ಮಾನ್ ಕಾರ್ಡ್ ಅನ್ನು ಕಡ್ದಾಯಗೊಳಿಸುವ ಬಗ್ಗೆ ಆದೇಶಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.