ಮೈಸೂರು ಪೇಂಟ್ಸ್ ಕಾರ್ಖಾನೆಗೆ ಸದ್ಯದಲ್ಲೇ ಬ್ರ್ಯಾಂಡ್ ವರ್ಚಸ್ಸು: ಸಚಿವ ಎಂ ಬಿ ಪಾಟೀಲ

ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಇಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯ ಸಭೆ ನಡೆಸಿದರು.

Written by - Prashobh Devanahalli | Edited by - Bhavishya Shetty | Last Updated : Mar 11, 2024, 08:29 PM IST
    • ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟು ಹೆಚ್ಚಳಕ್ಕೆ ಆದ್ಯತೆ
    • ಲೋಕಸಭಾ ಚುನಾವಣೆ ಬಂದಿರುವುದರಿಂದ ಶಾಯಿ ತಯಾರಿಕೆಗೆ ಬೇಡಿಕೆ
    • ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸಮ್ಮುಖದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿ ಸಭೆ
ಮೈಸೂರು ಪೇಂಟ್ಸ್ ಕಾರ್ಖಾನೆಗೆ ಸದ್ಯದಲ್ಲೇ ಬ್ರ್ಯಾಂಡ್ ವರ್ಚಸ್ಸು: ಸಚಿವ ಎಂ ಬಿ ಪಾಟೀಲ title=
Minister MB Patil

ಬೆಂಗಳೂರು: ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಇಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯ ಸಭೆ ನಡೆಸಿದರು.

ಇದನ್ನೂ ಓದಿ: Rishabh Pant Girl Friend : ಊರ್ವಶಿ ಅಲ್ಲ.. ಕ್ರಿಕೆಟರ್ ರಿಷಬ್ ಪಂತ್ ಮನಸೋತ ಹಾಟ್‌ ಸುಂದರಿ ಇವರೇ!

ಬಳಿಕ ಮಾತನಾಡಿದ ಅವರು, ವಿಶ್ವೇಶ್ವರಯ್ಯನವರ ದಿವಾನಗಿರಿಯ ಕಾಲದಲ್ಲಿ ಆರಂಭವಾದ ಬಣ್ಣ ಮತ್ತು ಅರಗಿನ ಕಾರ್ಖಾನೆಯು ಸದ್ಯಕ್ಕೆ ವಾರ್ಷಿಕ 34-35 ಕೋಟಿ ರೂ. ವಹಿವಾಟು ನಡೆಸುತ್ತಿದೆ. ಈಗ ಲೋಕಸಭಾ ಚುನಾವಣೆ ಬಂದಿರುವುದರಿಂದ ಶಾಯಿ ತಯಾರಿಕೆಗೆ ಬೇಡಿಕೆ ಬಂದಿದ್ದು, ಈ ವರ್ಷ ವಹಿವಾಟು 77 ಕೋಟಿ ರೂ. ತಲುಪಲಿದೆ. ಆದರೆ, ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಉದ್ದಿಮೆ ಹೀಗಿದ್ದರೆ ಸಾಲುವುದಿಲ್ಲ. ಆದ್ದರಿಂದ, ಈ ಕಾರ್ಖಾನೆಗೆ ಮತ್ತಷ್ಟು ಕಸುವು ತುಂಬಲಾಗುವುದು ಎಂದರು.

ಮನೆ ಗೋಡೆ ಬಣ್ಣಗಳನ್ನು ತಯಾರಿಸಲು ಸೂಚಿಸಲಾಗಿದೆ. ಮುಕ್ತ ಮಾರುಕಟ್ಟೆ ಅಲ್ಲದೆ, ಸರಕಾರಿ ಕಟ್ಟಡಗಳು, ಶಾಲಾ- ಕಾಲೇಜು, ಹಾಸ್ಟೆಲ್ ಗಳಿಗೆ  ಕಾಲಕಾಲಕ್ಕೆ ಬೇಕಾಗುವ ಬಣ್ಣ, ಎಮಲ್ಶನ್ ಇತ್ಯಾದಿಗಳನ್ನು ಈ ಕಾರ್ಖಾನೆಯಲ್ಲೇ ತಯಾರಿಸುವ ಚಿಂತನೆ ನಡೆದಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Diabetes Diet ಆಗಿ ಸೇವಿಸಿ ಈ ಸಣ್ಣ ತರಕಾರಿ ! ತಿಂದ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ ಬ್ಲಡ್ ಶುಗರ್

ಇದಕ್ಕಾಗಿ, ಬಣ್ಣಗಳ ಉದ್ಯಮದಲ್ಲಿ ಪಳಗಿರುವ ಪರಿಣತರೊಬ್ಬರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಸಭೆಯಲ್ಲಿ ಅನುಮತಿ ನೀಡಲಾಗಿದೆ. ಈ ಮೂಲಕ `ಮೈಸೂರು ಪೇಂಟ್ಸ್’ ಅನ್ನು ಬ್ರ್ಯಾಂಡ್ ಆಗಿ ಬೆಳೆಸಿ, ಖಾಸಗಿ ಕಂಪನಿಗಳಿಗೆ ಸಡ್ಡು ಹೊಡೆಯಲಾಗುವುದು. ಇದಕ್ಕಾಗಿ ವೈಜ್ಞಾನಿಕವಾಗಿ ಮಾರುಕಟ್ಟೆಯನ್ನೂ ವಿಸ್ತರಿಸಿ, ಸ್ಪರ್ಧಾತ್ಮಕ ಬೆಲೆಯಲ್ಲಿ ಪೇಂಟ್ ಸಿಗುವಂತೆ ಮಾಡಲಾಗುವುದು. ಈಗ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ ಉತ್ಪನ್ನಗಳು ಮತ್ತು ವಹಿವಾಟನ್ನು ವಿಸ್ತರಿಸಿರುವಂತೆ ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆಯನ್ನೂ ಹೊಸ ಸ್ತರಕ್ಕೆ ಕೊಂಡೊಯ್ಯಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News