ನವದೆಹಲಿ : ಬಿಹಾರ ಸಚಿವ ಸಂಪುಟ ಹೊಸ ನಿರ್ಧಾರ ಕೈಗೊಂಡಿದೆ. ನೌಕರರ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರದ ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಆಯೋಗ ರಚನೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ :
ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಬದಲಾವಣೆ ಕುರಿತು ಅಪರ ಮುಖ್ಯ ಕಾರ್ಯದರ್ಶಿ ಎಸ್.ಸಿದ್ಧಾರ್ಥ್ ಮಾತನಾಡಿ, ಈ ಹಿಂದೆ ಪಂಚಾಯತ್, ಬ್ಲಾಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಹೊಸ ನಿಯಮದ ಪ್ರಕಾರ ಸರ್ಕಾರ ಆಯೋಗದ ಮೂಲಕ ಶಿಕ್ಷಕರನ್ನು ನೇಮಿಸಲಿದೆ. ಇದೀಗ ಹೊಸ ಪದ್ಧತಿಯ ಆಧಾರದ ಮೇಲೆ ಪ್ರಾಥಮಿಕದಿಂದ ಹಿರಿಯ ಮಾಧ್ಯಮಿಕ ಹಂತದವರೆಗೆ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : Arecanut price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ!
ಒಂದೂವರೆ ಲಕ್ಷ ಶಿಕ್ಷಕರ ನೇಮಕ :
ಮುಂಬರುವ ಸಮಯದಲ್ಲಿ ಬಿಹಾರದಲ್ಲಿ ಒಂದೂವರೆ ಲಕ್ಷ ಶಿಕ್ಷಕರನ್ನು ನೇಮಿಸಲಾಗುವುದು. ಹೊಸ ನಿಯಮದ ಪ್ರಕಾರ, ಗುತ್ತಿಗೆ ಆಧಾರದ ಮೇಲೆ ಯಾವುದೇ ನೇಮಕಾತಿ ನಡೆಯುವುದಿಲ. ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಶಿಕ್ಷಕರು ಆಯೋಗ ನಡೆಸುವ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಕಾಯಂ ಶಿಕ್ಷಕರಾಗಬಹುದು ಎಂದರು.
ತುಟ್ಟಿಭತ್ಯೆ ಶೇ.38ರಿಂದ 42ಕ್ಕೆ ಏರಿಕೆ :
ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ರಾಜ್ಯ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ 4ರಷ್ಟು ಹೆಚ್ಚಿಸಲು ಕೂಡಾ ನಿರ್ಧರಿಸಲಾಗಿದೆ. ಈ ಹೆಚ್ಚಳದ ನಂತರ, ನೌಕರರ ತುಟ್ಟಿ ಭತ್ಯೆ ಶೇ.38ರಿಂದ ಶೇ.42ಕ್ಕೆ ಏರಿಕೆಯಾಗಿದೆ. ಉದ್ಯೋಗಿಗಳು ಜನವರಿ 1, 2023 ರಿಂದ ಹೆಚ್ಚಿದ ಇದರ ಪ್ರಯೋಜನವನ್ನು ಪಡೆಯುತ್ತಾರೆ. ತುಟ್ಟಿ ಭತ್ಯೆ ಹೆಚ್ಚಳದ ಲಾಭ ರಾಜ್ಯ ಸರ್ಕಾರದ ಪಿಂಚಣಿದಾರರಿಗೂ ಸಿಗಲಿದೆ. ಉದ್ಯೋಗಿಗಳಿಗೆ ಏಪ್ರಿಲ್ ವೇತನದ ಜೊತೆಗೆ ಮೂರು ತಿಂಗಳ ಡಿಎ ಸಿಗುತ್ತದೆ.
ಇದನ್ನೂ ಓದಿ : Gold Silver Price Today: ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ.. ಚಿನ್ನ ಕೊಳ್ಳಲು ಇದೇ ಗುಡ್ ಟೈಮ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.