CM Siddaramaiah: ರಾಜ್ಯದಲ್ಲಿ ಚುಣಾವಣೆಗೂ ಮುಂಚೆ ಸಿದ್ದರಾಮಯ್ಯ ಸರ್ಕಾರ, ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಒಂದು ಗೃಹಲಕ್ಷ್ಮಿ ಯೋಜನೆ, ಈ ಯೋಜನೆಯಿಂದ ಹಲವಾರು ಮಹಿಳೆಯರಿಗೆ ಆರ್ಥಿಕವಾಗಿ ಸಹಾಯವಾಗುತ್ತಿತ್ತು. ಆದರೆ, ಆರಂಭವಾದ ಮೊದಲಿನಲ್ಲಿ ಸರಿಯಾದ ಸಮಸಯಕ್ಕೆ ಖಾತೆ ಸೇರುತ್ತಿದ್ದ ಗೃಹಲಕ್ಷ್ಮಿ ಹಣ ಇದೀಗ ಸರಿಯಾದ ಸಮಯಕ್ಕೆ ಖಾತೆ ಸೇರದಿರುವುದನ್ನು ನೋಡಿ, ಈ ಯೋಜನೆ ಶೀಘ್ರವೇ ನಿಲ್ಲಲಿದೆ ಎಂದು ರಾಜ್ಯದ ಜನರು ಅಭಿಪ್ರಾಯ ಪಟ್ಟಿದ್ದರು. ಇದೀಗ ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಅವರು ಈ ಕುರಿತಾದ ಮಹತ್ವವಾದ ಮಾಹಿತಿಯನ್ನು ಕೊಟ್ಟಿದ್ದಾರೆ.
ಇತ್ತೀಚೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಿತು. ಇದೇ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಅವರ ನೇತ್ರತ್ವದಲ್ಲಿ ಘೋಷಣೆಯಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು, ಸುವರ್ಣ ಸೌದಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿದ್ದರು. ಗೃಹಲಕ್ಷ್ಮಿ ಹಣದಿಂದ ತಮಗೆ ತುಂಬಾ ಸಹಾಯವಾಗುತ್ತಿದೆ, ಈ ಯೋಜನೆಯಲ್ಲಿ ಬರುತ್ತಿರುವ ಹಣದಿಂದ ನಾವು ನಮ್ಮ ಸ್ವಂತ ವ್ಯಾಪಾರವನ್ನು ಆರಂಭಿಸಿದ್ದೇವೆ ಎಂದು ಫಲಾನುಭವಿಗಳು ಮಾತನಾಡಿ ಸಿಎಂ ಸಿದ್ದರಾಮಯ್ಯನವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ನಿಂತುಹೋಗುತ್ತೆ ಎಂಬ ಮಾತುಗಳು ಕೇಳಿ ಬರುತ್ತಿರುವ ಕುರಿತು ಸಿಎಂ ಮಾತನಾಡಿದ್ದು, ಗೃಹಲಕ್ಷ್ಮಿ ಯೋಜನೆ ಯಾವುದೇ ಕಾರಣಕ್ಕು ನಿಲ್ಲುವುದಿಲ್ಲ. ನಾವು ಯಾವುದೇ ಕಾರಣದಕ್ಕೂ ಗ್ಯಾರಂಟಿ ಯೋಜನೆಗಳಿಗೆ ಬ್ರೇಕ್ ಹಾಕುವುದಿಲ್ಲ. ಗೃಹಲಕ್ಷ್ಮಿ ಯೋಜನೆಯಿಂದ ಸಾಕಷ್ಟು ಕುಟುಂಬಗಳಿಗೆ ಸಹಾಯವಾಗುತ್ತಿದೆ. ಮಹಿಳೆಯರು ನನ್ನನ್ನು ಬಂದು ಭೇಟಿ ಮಾಡಿ ಗೃಹಲಕ್ಷ್ಮಿ ಯೋಜನೆಯಿಂದ ತಮಗಾದ ಸಹಾಯದ ಕುರಿತು ಹೇಳುತ್ತಿರುವಾಗ ನನಗೆ ತುಂಬಾ ಸಂತೋಷವಾಯಿತು. ವಿರೋಧಿ ಪಕ್ಷದವರು ಸುಕಾ ಸುಮ್ಮನೆ, ಇಲ್ಲ ಸಲ್ಲದ್ದನ್ನು ಪ್ರಚಾರ ಮಾಡುತ್ತಾರೆ. ಅದರಿಂದ ಫಲಾನುಭವಿಗಳು ತಲೆ ಕೆಡಸಿಕೊಳ್ಳುವುದು ಬೇಡ ಎಂದಿದ್ದಾರೆ. ಈ ಮೂಲಕ ಗೃಹಲಕ್ಷ್ಮಿ ಹಣಕ್ಕೆ ಬ್ರೇಕ್ ಬೀಳಲಿದೆ ಎಂದುಕೊಂಡವರಿಗೆ ಸಿಎಂ ಸಿದ್ದರಾಮಯ್ಯ ಈ ರೀತಿಯಾದ ಕ್ಲಾರಿಟಿ ಕೊಟ್ಟಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.