ಪೆಟ್ರೋಲ್ ಕಾರುಗಳ ಬೆಲೆಯಲ್ಲಿಯೇ ಸಿಗುವುದು ಎಲೆಕ್ಟ್ರಿಕ್ ವಾಹನ : ಕೇಂದ್ರ ಸಚಿವ ಗಡ್ಕರಿ ಮಾಹಿತಿ

ಹೆಚ್ಚುತ್ತಿರುವ ಮಾಲಿನ್ಯದ ಮಟ್ಟ ಮತ್ತು ಪೆಟ್ರೋಲ್ ಬೆಲೆಯನ್ನು ಗಮನದಲ್ಲಿಟ್ಟುಕೊಂಡು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಬೆಲೆಯನ್ನು ಕಡಿಮೆ ಮಾಡಲು ಸರ್ಕಾರವು ಯೋಜನೆಯನ್ನು ರೂಪಿಸುತ್ತಿದೆ.

Written by - Ranjitha R K | Last Updated : May 26, 2023, 01:16 PM IST
  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
  • ಈ ಇಡೀ ವರ್ಷದಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಕಡಿಮೆಯಾಗಿದೆ
  • ಜನ ಎಲೆಕ್ಟ್ರಿಕ್ ವಾಹನಗಳತ್ತ ವಾಲುತ್ತಿದ್ದಾರೆ.
ಪೆಟ್ರೋಲ್ ಕಾರುಗಳ ಬೆಲೆಯಲ್ಲಿಯೇ  ಸಿಗುವುದು ಎಲೆಕ್ಟ್ರಿಕ್ ವಾಹನ  : ಕೇಂದ್ರ ಸಚಿವ ಗಡ್ಕರಿ ಮಾಹಿತಿ  title=

ನವದೆಹಲಿ : ಕಳೆದ ಒಂದು ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ವರ್ಷ ಮೇ 22 ರಂದು ಕೇಂದ್ರ ಸರ್ಕಾರ ತೈಲದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಲೀಟರ್‌ಗೆ 8 ರೂ. ಇಳಿಕೆಯಾಗಿತ್ತು. ಈ ಇಡೀ ವರ್ಷದಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಕಡಿಮೆಯಾಗಿದೆ. ಪ್ರಸ್ತುತ, ಕಚ್ಚಾ ತೈಲವು ಬ್ಯಾರೆಲ್‌ಗೆ 75ಡಾಲರ್ ನಷ್ಟಿದೆ. ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಯಿಂದಾಗಿ ಜನ ಎಲೆಕ್ಟ್ರಿಕ್ ವಾಹನಗಳತ್ತ ವಾಲುತ್ತಿದ್ದಾರೆ.  ಆದರೆ ಹಲವು ಬಾರಿ ದುಬಾರಿ ವೆಚ್ಚ ಮತ್ತು ನಿರ್ವಹಣೆಯಿಂದಾಗಿ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ.

ಎಲೆಕ್ಟ್ರಿಕ್ ವಾಹನಗಳ ಬೆಲೆಯನ್ನು ಕಡಿಮೆ ಮಾಡಲು  ಪ್ಲಾನ್ : 
ಹೆಚ್ಚುತ್ತಿರುವ ಮಾಲಿನ್ಯದ ಮಟ್ಟ ಮತ್ತು ಪೆಟ್ರೋಲ್ ಬೆಲೆಯನ್ನು ಗಮನದಲ್ಲಿಟ್ಟುಕೊಂಡು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಬೆಲೆಯನ್ನು ಕಡಿಮೆ ಮಾಡಲು ಸರ್ಕಾರವು ಯೋಜನೆಯನ್ನು ರೂಪಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ (ಇವಿ) ಬೆಲೆಗಳು ಪೆಟ್ರೋಲ್ ಕಾರುಗಳಿಗೆ ಸಮನಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ ಪೆಟ್ರೋಲ್ ಕಾರುಗಳಿಗಿಂತ ಡೀಸೆಲ್ ಮತ್ತು ಸಿಎನ್‌ಜಿ ಕಾರುಗಳು ದುಬಾರಿಯಾಗಿದೆ.  

ಇದನ್ನೂ ಓದಿ : ಈ ದಿನ ಚಾಲ್ತಿಗೆ ಬರುವುದು 75 ರೂಪಾಯಿ ಮುಖ ಬೆಲೆಯ ನಾಣ್ಯ : ಹಣಕಾಸು ಸಚಿವಾಲಯದ ಅಧಿಸೂಚನೆ ಪ್ರಕಟ

 ಪೆಟ್ರೋಲ್ ಕಾರುಗಳಿಗೆ ಸಮಾನವಾಗಿರುತ್ತದೆ ಎಲೆಕ್ಟ್ರಿಕ್ ವಾಹನದ ಬೆಲೆ :
ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಕಳೆದ ವರ್ಷ ಕಾರ್ಯಕ್ರಮವೊಂದರಲ್ಲಿ ಎಲೆಕ್ಟ್ರಿಕ್ ವಾಹನದ ಬೆಲೆ ಪೆಟ್ರೋಲ್ ಕಾರುಗಳಿಗೆ ಸಮಾನವಾಗುವ ದಿನ ದೂರವಿಲ್ಲ ಎಂದು ಹೇಳಿದ್ದರು. ದೇಶಾದ್ಯಂತ ಎಲೆಕ್ಟ್ರಿಕ್ ಬಸ್‌ಗಳನ್ನು ಓಡಿಸಲು ಸರ್ಕಾರವು ವಿವರವಾದ ಯೋಜನೆಯನ್ನು ಹೊಂದಿದೆ ಎಂದು ಗಡ್ಕರಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕ್ಷಿಪ್ರ ಗತಿಯಲ್ಲಿ ಕೆಲಸ ಕಾರ್ಯಗಳನ್ನು ಕೂಡಾ ನಡೆಸುತ್ತಿದೆ.  

ಒಂದು ವರದಿಯ ಪ್ರಕಾರ, ಎಲೆಕ್ಟ್ರಿಕ್ ವಾಹನದ ಪ್ರತಿಯೊಂದು ವರ್ಗದ ವಾಹನಗಳ ಮಾರಾಟದಲ್ಲಿ ಶೇಕಡಾ 800 ರಷ್ಟು  ಏರಿಕೆ ಕಂಡಿದೆ. ಒಂದು ಅಂಕಿ ಅಂಶದ ಪ್ರಕಾರ ಪ್ರಸ್ತುತ ಪ್ರತಿ ವರ್ಷ 25 ರಿಂದ 30 ಲಕ್ಷ ಎಲೆಕ್ಟ್ರಿಕ್ ಕಾರುಗಳು ನೋಂದಣಿಯಾಗುತ್ತಿವೆ. ದೇಶದಲ್ಲಿ ಹೈಡ್ರೋಜನ್ ಕಾರುಗಳ ಕೆಲಸವೂ ವೇಗವಾಗಿ ನಡೆಯುತ್ತಿದೆ.

ಇದನ್ನೂ ಓದಿ : Good News: ಖಾಸಗಿ ಉದ್ಯೋಗಿಗಳಿಗೆ 25 ಲಕ್ಷ ರೂ.ವರೆಗೆ ತೆರಿಗೆ ವಿನಾಯ್ತಿ ನೀಡಿದ ಮೋದಿ ಸರ್ಕಾರ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News