Modi Govt Dasara Gift: ಇಂದಿನಿಂದ ಶುಭ ನವರಾತ್ರಿ ಆರಂಭವಾಗಲಿದೆ. ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದು, ದೇಶದ ಕೋಟ್ಯಾಂತರ ರೈತರಿಗೆ ದಸರಾ ಉಡುಗೊರೆ ನೀಡುತ್ತಿದೆ.
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಯಾಗಿದ್ದರೆ ಈ ಸುದ್ದಿ ನಿಮಗೆ ಮಹತ್ವದ್ದಾಗಿದೆ. 18ನೇ ಕಂತಿನ ಪಿಎಂ ಕಿಸಾನ್ ನಿಧಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು ಈಗಾಗಲೇ ಇ-ಕೆವೈಸಿ ಪೂರ್ಣಗೊಳಿಸಿರುವ ರೈತರ ಖಾತೆಗೆ ಶೀಘ್ರದಲ್ಲೇ ಹಣ ಜಮೆ ಆಗಲಿದೆ.
ಇದನ್ನೂ ಓದಿ- ಬ್ಯಾಂಕ್‌ನಲ್ಲಿ ಅನಾವಶ್ಯಕವಾಗಿ ನಿಮ್ಮ ಸಮಯ ವ್ಯರ್ಥ ಮಾಡುತ್ತಿದ್ದಾರಾ? ಯೋಚಿಸಬೇಡಿ ಈ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ
ರೈತರಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ವಾರ್ಷಿಕವಾಗಿ 6 ಸಾವಿರ ರೂಪಾಯಿ ಸಹಾಯಧನವನ್ನು ನೀಡುವ ಕೇಂದ್ರ ಸರ್ಕಾರದ ಈ ಮಹಾತ್ವಾಕಾಂಕ್ಷೆಯ ಯೋಜನೆಯಡಿ ಇದುವರೆಗೂ 17 ಕಂತುಗಳನ್ನು ಬಿಡುಗಡೆ ಮಾಡಿದೆ. ಇದೀಗ ಪಿಎಂ ಕಿಸಾನ್ ಯೋಜನೆಯಡಿ 18ನೇ ಕಂತಿಗಾಗಿ ಕಾದು ಕುಳಿತಿರುವ ರೈತರಿಗೆ ದಸರಾ ಹಬ್ಬಕ್ಕೂ ಮೊದಲೇ ಖಾತೆಗೆ ಹಣ ಸೇರಲಿದೆ.
ಇದನ್ನೂ ಓದಿ- ಅಕ್ಟೋಬರ್ ಹೊಸ ನಿಯಮಗಳು: ಇಂದಿನಿಂದ ಬದಲಾಗಲಿದೆ ಈ ರೂಲ್ಸ್, ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ
ಪಿಎಂ ಕಿಸಾನ್‌ನ ಅಧಿಕೃತ ವೆಬ್ಸೈಟ್ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ ಅಕ್ಟೋಬರ್ 05ರಂದು ಪಿಎಂ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಆದಾಗ್ಯೂ, ಈ ಹಣ ನಿಮ್ಮ ಖಾತೆ ಸೇರಬೇಕೆಂದರೆ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇದಲ್ಲದೆ, ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಗೆ ಲಿಂಕ್ ಆಗಿರಬೇಕು.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಇ-ಕೆವೈಸಿ ಪಪೂರ್ಣಗೊಳಿಸಲು ಹಂತ-ಹಂತದ ಪ್ರಕ್ರಿಯೆ:-
ಹಂತ-1: ಮೊದಲಿಗೆ ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ https://pmkisan.gov.in/ ಗೆ ಲಾಗಿನ್ ಆಗಿ.
ಹಂತ-2: ಮುಖಪುಟದ ಬಲಭಾಗದಲ್ಲಿ ಕಾಣುವ e-KYC ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ-3: ನಿಗದಿತ ಜಾಗದಲ್ಲಿ ಆಧಾರ್ ಸಂಖ್ಯೆ ನಮೂದಿಸಿ ಸರ್ಚ್ ಬಟನ್ ಕ್ಲಿಕ್ ಮಾಡಿ.
ಹಂತ- 4: ಮುಂದಿನ ಪುಟದಲ್ಲಿ ವಿವರಗಳು ತೆರೆದುಕೊಳ್ಳುತ್ತವೆ. ಅಗತ್ಯ ವಿವರಗಳನ್ನು ಭರ್ತಿ ಮಾಡಿ ಓಟಿಪಿ ಸಹಾಯದಿಂದ ಪ್ರಕ್ರಿಯೆ ಪೂರ್ಣಗೊಳಿಸಿ.
ಆ್ಯಪ್ ಮೂಲಕ ಇ-ಕೆವೈಸಿ:
ವೆಬ್‌ಸೈಟ್ ಭೇಟಿ ನೀಡದೆಯೂ ಕೂಡ ಪಿಎಂ ಕಿಸಾನ್ ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸಬಹುದು. ಪಿಎಂ ಕಿಸಾನ್ ಆ್ಯಪ್‌ನಲ್ಲಿ ಫೇಸ್ ಅಥೆಂಟಿಕೇಷನ್ ಮಾಡುವ ಮೂಲಕ ರೈತರು ಈ ಕೆಲಸವನ್ನು ಸುಲಭವಾಗಿ ಮಾಡಬಹುದು.
ಇವೆರಡೂ ಸಾಧ್ಯವಾಗದಿದ್ದರೆ ನಿಮ್ಮ ಹತ್ತಿರದ ಸೇವಾ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ಸ್ ಸಹಾಯದಿಂದ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.