ದಾವೋಸ್: ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕದಲ್ಲಿ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಪ್ರಥಮ ಬಾರಿಗೆ 2 ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ.
ಮೆ: ಲುಲು ಗ್ರೂಪ್ ಇಂಟರ್‍ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.
ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ 2 ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಅಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹ ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ: ದೆಹಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಬಗ್ಗೆ ನಿಮಗೆಷ್ಟು ಗೊತ್ತು?
ಇದೇ ಸಂದರ್ಭದಲ್ಲಿ ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವ ಸಂಸ್ಥೆಯ ವಿವರ
ಮೆ: ಲುಲು ಗ್ರೂಪ್ ಇಂಟರ್ನ್ಯಾಷನಲ್
I am pleased to announce that @IKEAIndia will be opening their flagship store in Nagasandra in June 2022. We are also in talks with the organisation to encourage local manufacturing, thus boosting employment and economic growth. #KarnatakaAtDavos #BuildForTheWorld @wef pic.twitter.com/SXQDlri96N
— Basavaraj S Bommai (@BSBommai) May 25, 2022
ಮೆ: ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ. 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ರೆನ್ಯೂ ಪವರ್ ಪ್ರೈ.ಲಿ.
ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು 2 ಹಂತಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ. ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.
2ನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ 2 ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ ಸಂಸ್ಥೆಗಳ ವಿವರ
ಸೀಮೆನ್ಸ್ ಸಂಸ್ಥೆ
I am blessed to be born & educated in Karnataka. Blessed that I represent my state & lead it. We have a rich culture & heritage. God has endowed Karnataka with nature’s bounty. We are blessed with rich bio-diversity, having 10 Agro-climatic zones & 300 days of sunshine. #Davos22 pic.twitter.com/ThRp4aOCtq
— Basavaraj S Bommai (@BSBommai) May 25, 2022
ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.
ಇದನ್ನೂ ಓದಿ: 7th Pay Commission: ಸರ್ಕಾರಿ ನೌಕರರ ಕುಟುಂಬ ಸದಸ್ಯರಿಗೊಂದು ಭಾರಿ ನೆಮ್ಮದಿಯ ಸುದ್ದಿ
ದಸ್ಸಾಲ್ಸ್ ಸಿಸ್ಟಮ್ಸ್
ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ, ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ, ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದೆ.
ನೆಸ್ಟ್ಲೆ ಸಂಸ್ಥೆ
ನಂಜನಗೂಡಿನಲ್ಲಿ ನೆಸ್ಟ್ಲೆಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದೆ.
ಮೆಗಾ ಡಾಟಾ ಸೆಂಟರ್
ಭಾರ್ತಿ ಎಂಟರ್ ಪ್ರೈಸಸ್‍ನ ಅಧ್ಯಕ್ಷ ಹಾಗೂ ಸಿಇಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಐಕಿಯ ಸ್ಟೋರ್
ಇಂಗ್ಕಾ ಗ್ರೂಪ್ (ಐಕಿಯ) ಸಿಇಓ ಜೆಸ್ಪರ್ ಬ್ರಾಡಿನ್ ಅವರು ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಜೂನ್‍ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಇದೇ ಸಂದರ್ಭದಲ್ಲಿ ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತು ಸಹ ಚರ್ಚಿಸಲಾಯಿತು.
ಆಕ್ಸಿಸ್ ಬ್ಯಾಂಕ್
ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಸಲಹೆ ನೀಡಲಾಯಿತು.
ಇದನ್ನೂ ಓದಿ: Watch: ರಾಹುಲ್ ಗಾಂಧಿಗೆ ಕೌಂಟರ್ ನೀಡಿದ ಭಾರತೀಯ ಅಧಿಕಾರಿ.!
ನೋಕಿಯಾ ಸಂಸ್ಥೆ
ಕರ್ನಾಟಕದಲ್ಲಿ ಟೆಲಿಕಾಂ ಉತ್ಪನ್ನಗಳ ಉತ್ಪಾದನೆಯ ಅವಕಾಶಗಳನ್ನು ಬಳಸಿಕೊಳ್ಳಲು ನೋಕಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಸಲಹೆ ನೀಡಲಾಯಿತು.
ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್‍ನಲ್ಲಿ ಹೀರೋ ಮೋಟೋಕಾರ್ಪ್, ಎಬಿ ಇನ್ ಬೇವ್ ಸಂಸ್ಥೆ, ಅರ್ಸೆಲರ್ ಮಿತ್ತಲ್, ಅದಾನಿ ಗ್ರೂಪ್, ಜಾನ್ಸನ್ ಕಂಟ್ರೋಲ್ಸ್‍ನ ಸಿಇಓ ಜಾರ್ಜ್ ಒಲಿವರ್, ಹನಿವೆಲ್ ಕಂಪೆನಿ, ಐಬಿಎಂ, ಬೈಜೂಸ್, ಮೀಶೋ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗವಹಿಸಿ ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಚರ್ಚಿಸಿ, ರಾಜ್ಯದಲ್ಲಿ ಪರಿಸರ ಹಾಗೂ ಮಣ್ಣಿನ ಸಂರಕ್ಷಣೆ ಕುರಿತು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ, ಬಿಟಿ, ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮುಂತಾದ ಹಿರಿಯ ಅಧಿಕಾರಿಗಳು ರಾಜ್ಯದ ತಂಡದಲ್ಲಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.