Dollar vs Rupee: ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯದ ಬಗ್ಗೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ವರ್ಷದ ಆರಂಭದಲ್ಲಿ ಉಕ್ರೇನ್‌ನ ಮೇಲೆ ರಷ್ಯಾದ ದಾಳಿಯ ನಂತರ ಹೆಚ್ಚಿದ ಭೌಗೋಳಿಕ ರಾಜಕೀಯ ಉದ್ವಿಗ್ನತೆಯು ಡಾಲರ್ ವಿರುದ್ಧ ಇತರ ಕರೆನ್ಸಿಗಳ ಸ್ಥಾನವನ್ನು ದುರ್ಬಲಗೊಳಿಸಿತು. ಅದೇ ರೀತಿ ಹಣದುಬ್ಬರವನ್ನು ನಿಯಂತ್ರಿಸಲು ಅನೇಕ ದೇಶಗಳ ಕೇಂದ್ರ ಬ್ಯಾಂಕುಗಳು ಬಡ್ಡಿದರಗಳನ್ನು ಹೆಚ್ಚಿಸಿವೆ.

Written by - Puttaraj K Alur | Last Updated : Sep 25, 2022, 01:05 PM IST
  • ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ
  • ಆರ್‌ಬಿಐ- ಹಣಕಾಸು ಸಚಿವಾಲಯ ರೂಪಾಯಿ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ
  • ವಿಶ್ವದ ಇತರ ಕರೆನ್ಸಿಗಳಿಗೆ ಹೋಲಿಸಿದ್ರೆ ರೂಪಾಯಿ ಬಲಶಾಲಿಯಾಗಿದೆ ಎಂದ ನಿರ್ಮಲಾ ಸೀತಾರಾಮನ್
Dollar vs Rupee: ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯದ ಬಗ್ಗೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು? title=
ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ

ನವದೆಹಲಿ: ಕಳೆದ ಕೆಲವು ದಿನಗಳಿಂದ ರೂಪಾಯಿ ಕುಸಿತ ಕಾಣುತ್ತಿದೆ. ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯದ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ಅವರು, ‘ವಿಶ್ವದ ಇತರ ಕರೆನ್ಸಿಗಳಿಗೆ ಹೋಲಿಸಿದರೆ ಯುಎಸ್ ಡಾಲರ್ ಎದುರು ರೂಪಾಯಿ ಬಲಶಾಲಿಯಾಗಿದೆ’ ಅಂತಾ ಹೇಳಿದ್ದಾರೆ.

ಡಾಲರ್ ಎದುರು ರೂಪಾಯಿ ಮೌಲ್ಯವು ದಾಖಲೆಯ ಮಟ್ಟಕ್ಕೆ ಕುಸಿದ ನಂತರ ಭಾರತೀಯ ಕರೆನ್ಸಿಯ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಸೀತಾರಾಮನ್, ‘ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ಹಣಕಾಸು ಸಚಿವಾಲಯವು ರೂಪಾಯಿಯ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: PM Kisan: ನವರಾತ್ರಿಯಲ್ಲಿ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ, ಖಾತೆಗೆ 2 ಸಾವಿರ ರೂ. ಬರಲಿದೆ

ರೂಪಾಯಿ ತನ್ನ ಸ್ಥಾನ ಉಳಿಸಿಕೊಂಡಿದೆ

‘ಪ್ರಸ್ತುತ ಕರೆನ್ಸಿ ಏರಿಳಿತದ ಸ್ಥಿತಿಯಲ್ಲಿ ಯಾವುದೇ ಒಂದು ಕರೆನ್ಸಿ ತನ್ನ ಸ್ಥಾನವನ್ನು ದೊಡ್ಡ ಪ್ರಮಾಣದಲ್ಲಿ ಉಳಿಸಿಕೊಂಡಿದ್ದರೆ ಅದು ಭಾರತೀಯ ರೂಪಾಯಿ ಮಾತ್ರ. ನಾವು ಈ ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದ್ದೇವೆ’ ಅಂತಾ ಹೇಳಿದ್ದಾರೆ. ರೂಪಾಯಿಯ ಬೆಲೆ ದೊಡ್ಡ ಮಟ್ಟದ ಕುಸಿತದ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಅವರು, ‘ಪ್ರಸ್ತುತ ಕುಸಿತದ ಅವಧಿಯಲ್ಲಿ ಡಾಲರ್ ಎದುರು ಇತರ ಕರೆನ್ಸಿಗಳ ಸ್ಥಿತಿಯನ್ನು ಅಧ್ಯಯನ ಮಾಡುವ ಅಗತ್ಯವಿದೆ’ ಎಂದು ತಿಳಿಸಿದ್ದಾರೆ.

ರೂಪಾಯಿ ಸ್ಥಿರ ಕುಸಿತ

ಶುಕ್ರವಾರ ಡಾಲರ್ ಎದುರು ರೂಪಾಯಿ ಮೌಲ್ಯ 81.09ಕ್ಕೆ ತಲುಪಿತ್ತು. ಕಳೆದ ಕೆಲವು ತಿಂಗಳುಗಳಲ್ಲಿ ರೂಪಾಯಿ ಮೌಲ್ಯದಲ್ಲಿ ನಿರಂತರ ಕುಸಿತ ಕಂಡುಬಂದಿದೆ. ಗುರುವಾರ ರೂಪಾಯಿ ಒಂದೇ ದಿನದಲ್ಲಿ 83 ಪೈಸೆಗಳಷ್ಟು ಕುಸಿತ ಕಂಡಿತ್ತು. ಇದು ಕಳೆದ 7 ತಿಂಗಳಲ್ಲೇ ಒಂದೇ ದಿನದಲ್ಲಿ ಆಗಿರುವ ಅತಿದೊಡ್ಡ ಕುಸಿತವಾಗಿದೆ.

ಇದನ್ನೂ ಓದಿ: ಆಶ್ರಯ ಮನೆಗಳ ಹಂಚಿಕೆಯಲ್ಲಿ ತಾರತಮ್ಯ; ಬಡವರಿಗೆ ಸೇರಬೇಕಿದ್ದ ಮನೆಗಳು ಶಾಸಕರ ಬೆಂಬಲಿಗರ ಪಾಲು?

ಕರೆನ್ಸಿಗಳ ಮೇಲೆ ಒತ್ತಡ

ವರ್ಷದ ಆರಂಭದಲ್ಲಿ ಉಕ್ರೇನ್ ಮೇಲೆ ರಷ್ಯಾದ ದಾಳಿಯ ನಂತರ ಹೆಚ್ಚಿದ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಡಾಲರ್ ವಿರುದ್ಧ ಇತರ ಕರೆನ್ಸಿಗಳ ಸ್ಥಾನವನ್ನು ದುರ್ಬಲಗೊಳಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದಲ್ಲದೇ ಏರುತ್ತಿರುವ ಹಣದುಬ್ಬರ ನಿಯಂತ್ರಣಕ್ಕೆ ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳ ಕೇಂದ್ರೀಯ ಬ್ಯಾಂಕ್‍ಗಳು ಬಡ್ಡಿ ದರ ಹೆಚ್ಚಿಸಿರುವುದು ಕರೆನ್ಸಿಗಳ ಮೇಲೆ ಮತ್ತಷ್ಟು ಒತ್ತಡ ಹೆಚ್ಚಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News