Krishi Ashirvaad Yojana : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗಾಗಿ ವಿವಿಧ ಯೋಜನೆಗಳನ್ನು ನಡೆಸುತ್ತಿವೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವುದು ಈ ಯೋಜನೆಗಳ ಉದ್ದೇಶವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೆ ತಂದಿದೆ. ಅದೇ ರೀತಿ ಕೃಷಿ ಆಶೀರ್ವಾದ ಯೋಜನೆಯನ್ನು ಜಾರ್ಖಂಡ್ ಸರ್ಕಾರ ನಡೆಸುತ್ತಿದೆ. ಇದರಡಿ ರೈತರಿಗೆ ವಾರ್ಷಿಕ 5000 ರೂಪಾಯಿಗಳನ್ನು ನೀಡಲಾಗುತ್ತಿದೆ.
ಕೃಷಿ ಆಶೀರ್ವಾದ ಯೋಜನೆ :
ಕೃಷಿ ಆಶೀರ್ವಾದ ಯೋಜನೆಯು ಜಾರ್ಖಂಡ್ ಸರ್ಕಾರವು ನಡೆಸುತ್ತಿರುವ ಯೋಜನೆಯಾಗಿದೆ. ಇದರಡಿ 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಪ್ರತಿ ಎಕರೆಗೆ 5000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಖಾರಿಫ್ ಹಂಗಾಮಿನ ಕೃಷಿಗೆ ಮುನ್ನ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸಲಾಗುವುದು. 5 ಎಕರೆ ಜಮೀನು ಹೊಂದಿರುವ ರೈತರು ಗರಿಷ್ಠ 25,000 ರೂ. ಪಡೆಯುತ್ತಾರೆ. ರಾಜ್ಯದಲ್ಲಿ ಪಿಎಂ ಕಿಸಾನ್ ನಿಧಿಯ ಲಾಭ ಪಡೆಯುವ ರೈತರಿಗೆ ಕನಿಷ್ಠ 11,000 ರೂ. ಮತ್ತು ಗರಿಷ್ಠ 31,000 ರೂ. ಸಿಗುತ್ತದೆ.
ಇದನ್ನೂ ಓದಿ : PhonePe ಬಳಸಿ ಲೋನ್ ಪಾವತಿಸಲು ಈ ಸಿಂಪಲ್ ಟಿಪ್ಸ್ ಅನುಸರಿಸಿ
ಒಬ್ಬ ರೈತ ಒಂದು ಎಕರೆ ಅಥವಾ ಅದಕ್ಕಿಂತ ಕಡಿಮೆ ಜಮೀನು ಹೊಂದಿದ್ದರೆ, ಖಾರಿಫ್ ಹಂಗಾಮಿನ ಕಟಾವಿಗೆ ಮುಂಚಿತವಾಗಿ ಸರ್ಕಾರದಿಂದ 5000 ರೂ. ಪಡೆಯುತ್ತಾನೆ. ಪಿಎಂ ಕಿಸಾನ್ ಅಡಿಯಲ್ಲಿ ಈಗಾಗಲೇ ವಾರ್ಷಿಕ 6000 ರೂ.ಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಈ ಮೂಲಕ ವರ್ಷದಲ್ಲಿ ಒಟ್ಟು 11,000 ರೂ. ಪಡೆಯುವುದು ಸಾಧ್ಯವಾಗುತ್ತದೆ. ಅದೇ ರೀತಿ 5 ಎಕರೆ ಕೃಷಿ ಭೂಮಿ ಹೊಂದಿರುವ ರೈತನ ಖಾತೆಗೆ 25 ಸಾವಿರ ರೂ. ರಾಜ್ಯ ಸರ್ಕಾರದಿಂದ ಮತ್ತು ಆರು ಸಾವಿರ ಕೇಂದ್ರ ಸರ್ಕಾರದಿಂದ ಹೀಗೆ ಒಟ್ಟು 31 ಸಾವಿರ ರೂ. ಬಂದು ಸೇರುತ್ತದೆ.
ಯೋಜನೆಗೆ ಸಂಬಂಧಿಸಿದ ಷರತ್ತುಗಳು :
- 22 ಲಕ್ಷ 47 ಸಾವಿರ ರೈತರಿಗೆ ಸರ್ಕಾರದ ಈ ಯೋಜನೆಯ ಲಾಭವನ್ನು ನೀಡಲಾಗುವುದು.
- ಸಣ್ಣ ಮತ್ತು ಅತಿ ಸಣ್ಣ ರೈತರು ಮಾತ್ರ ಕೃಷಿ ಆಶೀರ್ವಾದ್ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸಬಹುದು.
- 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಭೂಮಿಯನ್ನು ಸಾಗುವಳಿ ಮಾಡುವ ರೈತರಿಗೆ ಯೋಜನೆಯ ಲಾಭವನ್ನು ನೀಡಲಾಗುವುದು.
ಇದನ್ನೂ ಓದಿ : Arecanut today price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.