ನವದೆಹಲಿ : Budget 2022 : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitharaman) ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ (Budget 2022) ಭಾಷಣ ಆರಂಭವಾಗುತ್ತಿದ್ದಂತೆಯೇ, ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 9.2% ರಷ್ಟಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆ ಮೂಲಕ ಹೂಡಿಕೆಯನ್ನು ಉತ್ತೇಜಿಸಲಾಗುವುದು ಎಂದು ಅವರು ಹೇಳಿದರು.
LIC ಯ IPO ಕುರಿತು ಮಾಹಿತಿ :
ಬಜೆಟ್ (Budget 2022) ಭಾಷಣದ ವೇಳೆ ಹಣಕಾಸು ಸಚಿವರು ಎಲ್ ಐಸಿಯ ಐಪಿಒ (LIC IPO) ಬಗ್ಗೆಯೂ ಮಾಹಿತಿ ನೀಡಿದ್ದಾರೆ. 2022-23ರ ಹೊಸ ಹಣಕಾಸು ವರ್ಷದಲ್ಲಿ ಎಲ್ಐಸಿಯ ಐಪಿಒ ತರಲಾಗುವುದು ಎಂದಿದ್ದಾರೆ. 60 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : Budget 2022: ದೇಶದ ಯುವಕರಿಗೆ ಭಾರಿ ನೆಮ್ಮದಿಯ ಸುದ್ದಿ ಪ್ರಕಟಿಸಿದ ಮೋದಿ ಸರ್ಕಾರ, 60 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ
ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ :
ಇದಕ್ಕೂ ಮುನ್ನ ಮಂಗಳವಾರ ಬೆಳಗ್ಗೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ (Central cabinet) ಸಾಮಾನ್ಯ ಬಜೆಟ್ಗೆ ಅನುಮೋದನೆ ನೀಡಲಾಯಿತು. ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರೈಲ್ವೆ, ಸಂಪರ್ಕ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದರು.
ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ನಾಲ್ಕನೇ ಬಜೆಟ್ :
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Niramala sitharaman) ನಾಲ್ಕನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ತಮಿಳುನಾಡಿನ ಮಧುರೈ ಮೂಲದ ನಿರ್ಮಲಾ ಸೀತಾರಾಮನ್, ಬಿಜೆಪಿ ವಕ್ತಾರೆ ಸ್ಥಾನದಿಂದ ಹಿಡಿದು, ಸಚಿವೆಯಾಗುವವರೆಗೆ ಬಹಳ ಶ್ರಮ ವಹಿಸಿದ್ದಾರೆ. ನಿರ್ಮಲಾ ಸೀತಾರಾಮನ್ , ಲಂಡನ್ನ ಅಗ್ರಿಕಲ್ಚರಲ್ ಇಂಜಿನಿಯರ್ಸ್ ಅಸೋಸಿಯೇಷನ್ನಲ್ಲಿ ಅರ್ಥಶಾಸ್ತ್ರಜ್ಞರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ : LPG Price today: ಬಜೆಟ್ಗೂ ಮುನ್ನ LPG ಬೆಲೆಯಲ್ಲಿ ಇಳಿಕೆ! ಇಂದಿನ ದರ ತಿಳಿದುಕೊಳ್ಳಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.