Fuel Rates Hiked Again: ದಾಖಲೆಯ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶದಾದ್ಯಂತ ಇಂಧನ ದರವನ್ನು ಮತ್ತೆ ಹೆಚ್ಚಳ ಮಾಡಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿವೆ.

Written by - Puttaraj K Alur | Last Updated : Oct 16, 2021, 11:48 AM IST
  • ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ಮತ್ತಷ್ಟು ಹೊರೆ
  • ಶನಿವಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 35 ಪೈಸೆಯಷ್ಟು ಹೆಚ್ಚಳ
  • ಮುಂಬೈನಲ್ಲಿ ಪೆಟ್ರೋಲ್ ಬೆಲೆ 111 ರೂ. & ಬೆಂಗಳೂರಲ್ಲಿ ಡೀಸೆಲ್ ಬೆಲೆ 100 ರೂ. ತಲುಪಿದೆ
Fuel Rates Hiked Again: ದಾಖಲೆಯ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ  title=
ಇಂಧನ ದರದಲ್ಲಿ ಮತ್ತೆ ಏರಿಕೆಯಾಗಿದೆ

ನವದೆಹಲಿ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಿ ಪರಿಣಮಿಸಿದೆ. ಶನಿವಾರವೂ ಕೂಡ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ 35 ಪೈಸೆಯಷ್ಟು ಏರಿಕೆ ಕಂಡಿದೆ. ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ದೇಶದ ಜನಸಾಮಾನ್ಯರು ನಿರಂತರವಾಗಿ ಏರಿಕೆಯಾಗುತ್ತಿರುವ ಇಂಧನ ದರದಿಂದ ತತ್ತರಿಸಿ ಹೋಗಿದ್ದಾರೆ.  

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶದಾದ್ಯಂತ ಇಂಧನ ದರವನ್ನು ಮತ್ತೆ ಹೆಚ್ಚಳ ಮಾಡಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 35 ಪೈಸೆ ಏರಿಕೆಯಾಗಿದ್ದು, 105.49 ರೂ.ಗೆ ತಲುಪಿದೆ. ಅದೇ ರೀತಿ ಪ್ರತಿ ಲೀಟರ್ ಡೀಸೆಲ್ ದರವು 35 ಪೈಸೆ ಏರಿಕೆಯಾಗಿದ್ದು, 94.22 ರೂ. ತಲುಪಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 36 ಪೈಸೆ ಏರಿಕೆಯಾಗಿದ್ದು, 109.16 ರೂ.ಗೆ ತಲುಪಿದೆ. ಅದೇ ರೀತಿ ಪ್ರತಿ ಲೀಟರ್ ಡೀಸೆಲ್ ದರವು 37 ಪೈಸೆ ಏರಿಕೆಯಾಗಿ, ಶತಕ(100) ಭಾರಿಸಿದೆ.

ಇದನ್ನೂ ಓದಿ: Post Office ಈ ಯೋಜನೆಗಳಲ್ಲಿ ಒಮ್ಮೆ ಹೂಡಿಕೆ ಮಾಡಿ ; ಇದರಿಂದ ಪ್ರತಿ ತಿಂಗಳು ಹಣ ಗಳಿಸಿಬಹುದು!

ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 111.43ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 102.15 ರೂ.ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 106.10ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರವು 97.33 ರೂ.ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 102.80ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 98.69 ರೂ.ಗೆ ಏರಿಕೆಯಾಗಿದೆ.

ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.

ಇದನ್ನೂ ಓದಿ: Money Earning Ideas : ನಿಮ್ಮ ಬಳಿ ಈ ಹಳೆಯ 1 ರೂ. ನೋಟು ಇದ್ದರೆ, ನೀವು 1 ಲಕ್ಷ ರೂ. ಗಳಿಸಬಹುದು! ಹೇಗೆ ಇಲ್ಲಿದೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol Diesel Price)ಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News