Gold-Silver Rate: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ₹ 65,300ಕ್ಕೆ ಇಳಿದ ಬೆಳ್ಳಿ ದರ!

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,870 ರೂ.

Last Updated : Mar 24, 2021, 12:28 PM IST
  • ಮೂರ್ನಾಲ್ಕು ದಿನಗಳಿಂದ ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ.
  • ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,870 ರೂ.
  • ಬೆಳ್ಳಿ ಬೆಲೆ ಮತ್ತೆ ಭಾರೀ ಇಳಿಕೆಯಾಗಿದ್ದು, ನಿನ್ನೆ 66,000 ರೂ. ಇದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 65,300 ರೂ.
Gold-Silver Rate: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ₹ 65,300ಕ್ಕೆ ಇಳಿದ ಬೆಳ್ಳಿ ದರ! title=

ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ. ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು  ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,870 ರೂ. ಇದ್ದುದು ಇಂದು 45,690 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 42,040 ರೂ. ಇದ್ದುದು ಇಂದು 41,890 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದ್ದು, ನಿನ್ನೆ 66,000 ರೂ. ಇದ್ದ ಬೆಳ್ಳಿ ಬೆಲೆ ಇಂದು 65,300ಕ್ಕೆ ಇಳಿಕೆಯಾಗಿದೆ.

ಭಾರತದಲ್ಲಿ ಚಿನ್ನದ ಬೆಲೆ(Gold Rate) ಇಂದು ಕಡಿಮೆಯಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 43,790 ರೂ. ಇದ್ದುದು 42,990 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 44,790 ರೂ. ಇದ್ದುದು ಇಂದು 43,990 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 45,690 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 41,890 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

SBI: ಹಿರಿಯ ನಾಗರಿಕರಿಗೆ ಹೋಳಿ ಉಡುಗೊರೆ ನೀಡಿದ ಎಸ್‌ಬಿಐ, ಈ ಯೋಜನೆ ಜೂನ್ 30 ರವರೆಗೆ ವಿಸ್ತರಣೆ

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ(Delhi), ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 47,000 ರೂ. ದಾಟಿದೆ.

ಏ.1ರಿಂದ Income Tax ಗೆ ಸಂಬಂಧಿಸಿದ ಈ 5 ನಿಯಮಗಳಲ್ಲಿ ಬದಲಾವಣೆ.!

ಭಾರತದಲ್ಲಿ ಬೆಳ್ಳಿ ಬೆಲೆ(Silver Rate) ಮತ್ತೆ ಭಾರೀ ಇಳಿಕೆಯಾಗಿದ್ದು, ನಿನ್ನೆ 66,000 ರೂ. ಇದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 65,300 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು 66,500 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 70,000 ರೂ. ದಾಟಿದೆ.

Gold-Silver Rate: ಚಿನ್ನ ಖರೀದಿಸಲು ಒಳ್ಳೆಯ ಸಮಯ; ಬಂಗಾರದ ಬೆಲೆಯಲ್ಲಿ ಇಳಿಕೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News