Gold-Silver Rat: ಚಿನ್ನದ ಬೆಲೆ ಮತ್ತೆ ಭಾರೀ ಏರಿಕೆ; ಬೆಳ್ಳಿ ಬೆಲೆಯಲ್ಲಿ ಹೆಚ್ಚಳ!

24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,690 ರೂ. ಇದ್ದುದು ಇಂದು 45,820 ರೂ. ಆಗಿದೆ.

Last Updated : Mar 25, 2021, 12:25 PM IST
  • ಭಾರತದಲ್ಲಿ ನಿನ್ನೆ ಕಡಿಮೆಯಿದ್ದ ಚಿನ್ನದ ಬೆಲೆ ಮತ್ತೆ ಹೆಚ್ಚಾಗಿದೆ.
  • 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,690 ರೂ. ಇದ್ದುದು ಇಂದು 45,820 ರೂ. ಆಗಿದೆ.
  • 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 41,890 ರೂ. ಇದ್ದುದು ಇಂದು 42,000 ರೂ. ಆಗಿದೆ.
Gold-Silver Rat: ಚಿನ್ನದ ಬೆಲೆ ಮತ್ತೆ ಭಾರೀ ಏರಿಕೆ; ಬೆಳ್ಳಿ ಬೆಲೆಯಲ್ಲಿ ಹೆಚ್ಚಳ! title=

ಬೆಂಗಳೂರು: ಭಾರತದಲ್ಲಿ ನಿನ್ನೆ ಕಡಿಮೆಯಿದ್ದ ಚಿನ್ನದ ಬೆಲೆ ಮತ್ತೆ ಹೆಚ್ಚಾಗಿದೆ. ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,690 ರೂ. ಇದ್ದುದು ಇಂದು 45,820 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 41,890 ರೂ. ಇದ್ದುದು ಇಂದು 42,000 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ನಿನ್ನೆ 65,300 ರೂ. ಇದ್ದ ಬೆಳ್ಳಿ ಬೆಲೆ ಇಂದು 65,700ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಹೆಚ್ಚಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ(Carat Gold Rate) ನಿನ್ನೆ 42,990 ರೂ. ಇದ್ದುದು 44,030 ರೂ.ಗೆ ಹೆಚ್ಚಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 43,990 ರೂ. ಇದ್ದುದು ಇಂದು 45,030 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 45,820 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 42,000 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 47,000 ರೂ. ದಾಟಿದೆ.

ATM ವಹಿವಾಟ ವಿಫಲವಾದ್ರೆ ₹ 25 ದಂಡ: ಬ್ಯಾಲೆನ್ಸ್ ಚೆಕ್ ಮಾಡಿದ್ರೂ ಬೀಳುತ್ತೆ ಫೈನ್!

ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಭಾರೀ ಇಳಿಕೆಯಾಗಿದ್ದು, ನಿನ್ನೆ 65,300 ರೂ. ಇದ್ದ ಬೆಳ್ಳಿ ಬೆಲೆ(Silver Rate) ಇಂದು 1 ಕೆಜಿಗೆ 65,700 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು 65,700 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,000 ರೂ. ದಾಟಿದೆ.

ಉದ್ಯೋಗಿಗಳಿಗೆ ಸಿಹಿ ಸುದ್ದಿ: PF 'ತೆರಿಗೆ' ಮುಕ್ತ ಹೂಡಿಕೆ ಮಿತಿ ಹೆಚ್ಚಳ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News