SSLC ಪಾಸಾದವರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಪ್ರತಿ ತಿಂಗಳು ಸಿಗಲಿದೆ 8,000 ರೂ.!

Pradhan Mantri Kaushal Vikas Yojana: ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯ ಮೂಲಕ ಲಕ್ಷಾಂತರ ಯುವಕರಿಗೆ ಮನೆಯಲ್ಲಿ ಕುಳಿತು ಆನ್ಲೈನ್‌ ತರಬೇತಿ ನೀಡಲಾಗುತ್ತದೆ. ಇದಕ್ಕೆ ಎಲ್ಲಾ ಯುವಕರು ʼಸ್ಕಿಲ್ ಇಂಡಿಯಾ ಡಿಜಿಟಲ್‌ʼನಲ್ಲಿ ಪ್ರಾಯೋಗಿಕ ಕೋರ್ಸ್‌ಗೆ ಸೇರಬೇಕು.

Written by - Puttaraj K Alur | Last Updated : Aug 21, 2024, 04:02 PM IST
  • ನಿರುದ್ಯೋಗಿ ಯುವಕರಿಗಾಗಿ ಕೇಂದ್ರ ಸರ್ಕಾರವು ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆ ಪ್ರಾರಂಭಿಸಿದೆ.
  • ಇದನ್ನು ಕೇಂದ್ರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು ನಿರ್ವಹಿಸುತ್ತಿದೆ
  • ಈ ಯೋಜನೆಯು ದೇಶದ ನಿರುದ್ಯೋಗಿ ಯುವಕರಿಗೆ ಉಚಿತ ತರಬೇತಿ ಕೋರ್ಸ್‌ಗಳನ್ನು ಒದಗಿಸುತ್ತದೆ
SSLC ಪಾಸಾದವರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಪ್ರತಿ ತಿಂಗಳು ಸಿಗಲಿದೆ 8,000 ರೂ.! title=
ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆ

Pradhan Mantri Kaushal Vikas Yojana: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನಿರುದ್ಯೋಗಿ ಯುವಜರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ʼಪ್ರಧಾನ ಮಂತ್ರಿ ಕೌಶಲ್ಯ ವಿಕಾಸ್ ಅಭಿವೃದ್ಧಿ ಯೋಜನೆʼ ಜಾರಿಗೆ ತಂದಿದ್ದು, ಈ ಮೂಲಕ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತಿದೆ.

ʼಪಿಎಂ ಕೌಶಲ್ಯ ವಿಕಾಸ ಯೋಜನೆʼಯ ಮೂಲಕ ಹೆಚ್ಚಿನ ಸಂಖ್ಯೆಯ ನಿರುದ್ಯೋಗಿ ಯುವಕರಿಗೆ ಸರ್ಕಾರವು ತರಬೇತಿ ನೀಡುತ್ತಿದೆ. ಇದರಿಂದ ಅವರಿಗೆ ಉದ್ಯೋಗದ ಹಾದಿ ಸುಲಭವಾಗುತ್ತದೆ. ನೀವು ಸಹ ಭಾರತದ ಪ್ರಜೆಯಾಗಿದ್ದರೆ ಮತ್ತು ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸುವ ಮೂಲಕ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಲು ಬಯಸಿದರೆ ಈ ಯೋಜನೆಯಡಿ ಹೆಸರು ನೋಂದಾಯಿಸಿಕೊಳ್ಳಬಹುದು.

ಇದನ್ನೂ ಓದಿ: ಯಶವಂತಪುರ ನಿಲ್ದಾಣದ ಪ್ಲಾಟ್​ಫಾರಂಗಳು ಒಂದು ತಿಂಗಳು ಬಂದ್: ಭಾಗಶಃ ರದ್ದಾದ ರೈಲುಗಳ ವಿವರ

ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆ 2024

ನಿರುದ್ಯೋಗಿ ಯುವಕರಿಗಾಗಿ ಕೇಂದ್ರ ಸರ್ಕಾರವು ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದನ್ನು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು ನಿರ್ವಹಿಸುತ್ತಿದೆ. ಈ ಯೋಜನೆಯು ದೇಶದ ನಿರುದ್ಯೋಗಿ ಯುವಕರಿಗೆ ಉಚಿತ ತರಬೇತಿ ಕೋರ್ಸ್‌ಗಳನ್ನು ಒದಗಿಸುತ್ತದೆ. ಇದರಿಂದ ಅವರು ಕೌಶಲ್ಯಗಳನ್ನು ಪಡೆಯುವ ಮೂಲಕ ತಮ್ಮ ಜೀವನೋಪಾಯವನ್ನು ಭದ್ರಪಡಿಸಿಕೊಳ್ಳಬಹುದು. ಈ ಯೋಜನೆಯ ಮೂಲಕ ಸುಮಾರು 40 ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುತ್ತದೆ.

ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯ ಮೂಲಕ ಲಕ್ಷಾಂತರ ಯುವಕರಿಗೆ ಮನೆಯಲ್ಲಿ ಕುಳಿತು ಆನ್ಲೈನ್‌ ತರಬೇತಿ ನೀಡಲಾಗುತ್ತದೆ. ಇದಕ್ಕೆ ಎಲ್ಲಾ ಯುವಕರು ʼಸ್ಕಿಲ್ ಇಂಡಿಯಾ ಡಿಜಿಟಲ್‌ʼನಲ್ಲಿ ಪ್ರಾಯೋಗಿಕ ಕೋರ್ಸ್‌ಗೆ ಸೇರಬೇಕು. ಅಲ್ಲಿ ಪ್ರತಿಯೊಬ್ಬ ಯುವಕರಿಗೆ ತಿಂಗಳಿಗೆ 8,000 ರೂ. ನೀಡಲಾಗುತ್ತದೆ. ತರಬೇತಿ ಹೊರತಾಗಿ ಈ ಯೋಜನೆಯ ಮೂಲಕ ಸರ್ಕಾರವು ಪ್ರಮಾಣಪತ್ರವನ್ನು ನೀಡುತ್ತದೆ. ಇದರಿಂದ ಫಲಾನುಭವಿ ಸುಲಭವಾಗಿ ಉದ್ಯೋಗಾವಕಾಶಗಳನ್ನು ಪಡೆಯಬಹುದು. ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ನಿರುದ್ಯೋಗಿ ಯುವಕರು ಮನೆಯಲ್ಲೇ ಕುಳಿತು ಆನ್ಲೈನ್‌ ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.  

ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಗೆ ಅರ್ಹತೆ

  • ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು.
  • ದೇಶದ ನಿರುದ್ಯೋಗಿ ಯುವಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ.
  • ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
  • ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ SSLC ಉತ್ತೀರ್ಣರಾಗಿರಬೇಕು.

ಅಗತ್ಯ ದಾಖಲೆಗಳು

  • ಆಧಾರ್‌ ಕಾರ್ಡ್
  • ಗುರುತಿನ ಚೀಟಿ
  • ಶೈಕ್ಷಣಿಕ ಅರ್ಹತೆ ದಾಖಲೆಗಳು
  • ನಿವಾಸ ಪ್ರಮಾಣ ಪತ್ರ
  • ಮೊಬೈಲ್‌ ಸಂಖ್ಯೆ
  • ಪಾಸ್‌ಪೋರ್ಟ್‌ ಛಾಯಾಚಿತ್ರ
  • ಬ್ಯಾಂಕ್‌‌ ಪಾಸ್‌ಬುಕ್

ಅರ್ಜಿ ಸಲ್ಲಿಕೆ ಪ್ರಕ್ರಿಯೆ

  • ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮೊದಲು ನೀವು ಅಧಿಕೃತ ವೆಬ್‌ಸೈಟ್‌ https://www.pmkvyofficial.org/home-page ಗೆ ಭೇಟಿ ನೀಡಬೇಕು.
  • ನಂತರ ವೆಬ್‌ಸೈಟ್‌ ಮುಖಪುಟವು ನಿಮ್ಮ ಮುಂದೆ ತೆರೆಯುತ್ತದೆ. 
  • ವೆಬ್‌ಸೈಟ್‌ ಮುಖಪುಟದಲ್ಲಿ ನೀವು PMKVY ಆನ್ಲೈನ್‌ ನೋಂದಣಿ ಫಾರ್ಮ್‌ ತೆರೆಯುತ್ತದೆ.
  • ನೀವು ಫಾರ್ಮ್‌ನಲ್ಲಿ ಕೇಳಲಾದ ಮಾಹಿತಿಯನ್ನು ನಮೂದಿಸಬೇಕು. 
  • ನಂತರ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು.
  • ಕೊನೆಯದಾಗಿ ನೀವು Submit ಆಯ್ಕೆಯ ಮೇಲೆ ಕ್ಲಿಕ್‌ ಮಾಡಬೇಕು.

ಈ ರೀತಿ ನೀವು ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಇದನ್ನೂ ಓದಿ: DA ಬಗ್ಗೆ ಸರ್ಕಾರದ ಸ್ಪಷ್ಟ ನಿರ್ಧಾರ!ತುಟ್ಟಿಭತ್ಯೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಹುದೊಡ್ಡ ನಿರಾಸೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News