Ration card updateʼs: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್ ಜೋಡಣೆ ಮಾಡಿಲ್ಲ. ಹೀಗೆ ಮಾಡಲು ವಿಫಲವಾದರೆ ಪಡಿತರ ಚೀಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುತ್ತದೆ.
ಇದನ್ನೂ ಓದಿ: ಒಂದು ಕಾಲದಲ್ಲಿ ಮುಖೇಶ್ ಅಂಬಾನಿಗಿಂತಲೂ ಸಿರಿವಂತನಾಗಿದ್ದ ಅನಿಲ್ ಅಂಬಾನಿ ಬಳಿ ಈಗ ಉಳಿದುಕೊಂಡಿರುವ ಆಸ್ತಿ ಎಷ್ಟು ಗೊತ್ತಾ ?
ಹೀಗಾಗಿ ತಮ್ಮ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದವರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ದಿನಾಂಕವನ್ನು ವಿಸ್ತರಿಸಿದೆ. ಇದನ್ನು ಮೊದಲು ಜೂನ್ 30ಕ್ಕೆ ನಿಗದಿಪಡಿಸಲಾಗಿತ್ತು.
ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರವು ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. ಹೀಗಾಗಿ ಯಾರ್ಯಾರು ಇದುವರೆಗೆ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡಿಲ್ಲವೋ ಕೂಡಲೇ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಇದನ್ನೂ ಓದಿ: ಕಳೆದುಹೋದ ನಿಮ್ಮ ಫೋನ್ನಲ್ಲಿರುವ.. GPay-Phonepay UPI ಐಡಿ ನಿಷ್ಕ್ರಿಯಗೊಳಿಸುವುದು ಹೇಗೆ..?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.