Gruha Lakshmi Scheme: ಜೂನ್ ತಿಂಗಳ 'ಗೃಹಲಕ್ಷ್ಮಿ' ಹಣ ಬರದಿದ್ರೆ ಇಂದೇ ಈ ಕೆಲಸ ಮಾಡಿ

Gruha Lakshmi Scheme: ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಹಣ ಬಾರದಿದ್ದರೆ ತಕ್ಷಣವೇ ನಿಮ್ಮ ದಾಖಲೆಗಳಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಬೇಕು.

Written by - Puttaraj K Alur | Last Updated : Aug 12, 2024, 06:33 PM IST
  • ಜೂನ್ ತಿಂಗಳ 2,000 ಖಾತೆಗೆ ಜಮಾ ಆಗದ ಯಜಮಾನಿಯರಿಗೆ ಸರ್ಕಾರದ ಸಿಹಿಸುದ್ದಿ
  • ಸಾಕಷ್ಟು ಜನರು ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರೂ ಸಹ ಆಧಾರ್‌ ಸೀಡಿಂಗ್ ಮಾಡಿಕೊಂಡಿಲ್ಲ
  • ಖಾತೆಗೆ ಸಂಬಂಧಿಸಿದ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿದ್ರೆ ಹಣ ಜಮಾ ಆಗಲಿದೆ
Gruha Lakshmi Scheme: ಜೂನ್ ತಿಂಗಳ 'ಗೃಹಲಕ್ಷ್ಮಿ' ಹಣ ಬರದಿದ್ರೆ ಇಂದೇ ಈ ಕೆಲಸ ಮಾಡಿ title=
ಗೃಹಲಕ್ಷ್ಮಿ ಯೋಜನೆ

Gruha Lakshmi Scheme: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ʼಗೃಹಲಕ್ಷ್ಮಿʼ ಯೋಜನೆಯು ಒಂದು. ಈಗಾಗಲೇ ಜೂನ್‌ ತಿಂಗಳ ಹಣವನ್ನು ಸರ್ಕಾರ ಬ್ಯಾಂಕಿನಲ್ಲಿ ಜಮಾ ಮಾಡಿದೆ. ಆದರೆ ಹಂತ ಹಂತವಾಗಿ ಮಹಿಳೆಯರ ಖಾತೆಗೆ ಆ ಹಣ ಜಮಾ ಆಗಲಿದೆ. ಈ ಬಗ್ಗೆ ಈಗಾಗಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಹ ಸ್ಪಷ್ಟನೆ ನೀಡಿದ್ದಾರೆ. 

ಜೂನ್ ತಿಂಗಳ ಕಂತಿನ 2,000 ರೂ. ಹಣ ಖಾತೆಗೆ ಜಮಾ ಆಗದ ಯಜಮಾನಿಯರಿಗೆ ಸರ್ಕಾರವು ಸಿಹಿಸುದ್ದಿ ನೀಡಿದೆ. ಮುಖ್ಯ ದಾಖಲೆಗಳನ್ನು ಸರಿಪಡಿಸಿದರೆ ನಿಮ್ಮ ಖಾತೆಗೂ ಹಣ ಬರಲಿದೆ. ಹೌದು, ಸಾಕಷ್ಟು ಜನರು ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರೂ ಸಹ ಆಧಾರ್‌ ಸೀಡಿಂಗ್ ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. 

ಇದನ್ನೂ ಓದಿ: ಘಟಪ್ರಭಾ ನದಿಯಿಂದ ಪ್ರವಾಹ: ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಗೃಹಲಕ್ಷ್ಮಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಹಣ ಬಾರದಿದ್ದರೆ ತಕ್ಷಣವೇ ನಿಮ್ಮ ದಾಖಲೆಗಳಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಬೇಕು. ನಿಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌, ಆಧಾರ್‌ ಕಾರ್ಡ್‌ ಜೊತೆಗೆ ರೇಷನ್‌ ಕಾರ್ಡ್‌ ಲಿಂಕ್‌ ಆಗದಿದ್ರೆ, ಇಲ್ಲಾ ಆಧಾರ್‌ ಸೀಡಿಂಗ್‌ ಮಾಡಿಸದಿದ್ರೆ ಕೂಡಲೇ ಈ ಕೆಲಸ ಮಾಡಿಸಿಕೊಳ್ಳಬೇಕು.

ಇದನ್ನೂ ಓದಿ: CP Yogeshwar: ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಎಂದ ಸಿಪಿ ಯೋಗೇಶ್ವರ್‌

ನಿಮ್ಮ ಬ್ಯಾಂಕ್‌ ಖಾತೆಯಲ್ಲಿ ಯಾವುದೇ ರೀತಿಯ ದೋಷಗಳಿದ್ದಲ್ಲಿ, ಕೂಡಲೇ ಬ್ಯಾಂಕ್‌ನಲ್ಲಿ ಹೊಸದಾಗಿ ಖಾತೆ ತೆರೆಯಬೇಕು. ಈ ಮೂಲಕ ಆ ಬ್ಯಾಂಕ್‌ ಖಾತೆಯನ್ನು ಗೃಹಲಕ್ಷ್ಮಿ ಯೋಜನೆಗೆ ಲಿಂಕ್‌ ಮಾಡಿದ್ರೆ ಬಾಕಿ ಉಳಿದಿರುವ ಎಲ್ಲಾ ಹಣವು ನಿಮ್ಮ ಹೊಸ ಖಾತೆಗೆ ಜಮಾ ಅಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News