Gruha Lakshmi Scheme: ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ʼಗೃಹಲಕ್ಷ್ಮಿʼ ಯೋಜನೆಯನ್ನು ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಟುಂಬ ನಿರ್ವಹಣೆಯಲ್ಲಿ ಮನೆಯ ಯಜಮಾನಿಯ ಪಾತ್ರ ಬಹುದೊಡ್ಡದು. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಗಲಿ ಎಂದು ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿತಿಂಗಳು 2,000 ರೂ. ಜಮಾ ಮಾಡಲು ಯೋಜನೆಯನ್ನು ಅನುಷ್ಠಾನಗೊಳಿಸಿದೆ.
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ʼಗೃಹಲಕ್ಷ್ಮಿʼ ಯೋಜನೆ ಬಗ್ಗೆ ಘೋಷಿಸಿತ್ತು. ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿತ್ತು. ಅದರಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾಣಕ್ಕೆ ತರಲು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದರು.
ಇದನ್ನೂ ಓದಿ: ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!
ʼಗೃಹಲಕ್ಷ್ಮಿʼ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಯೋಜನೆಗಳಲ್ಲಿ ಒಂದಾಗಿರುವ ʼಗೃಹಲಕ್ಷ್ಮಿʼ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳವಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ(ಗ್ರಾಮ್ ಒನ್, ಬೆಂಗಳೂರು ಒನ್ & ಬಾಪೂಜಿ ಕೇಂದ್ರ) ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಚಾಲನೆ ನೀಡಿದ ಕೇವಲ 7 ದಿನಗಳಲ್ಲೇ 50 ಲಕ್ಷಕ್ಕೂ ಅಧಿಕ ಫಲಾನುಭವಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು.
ಗೃಹಲಕ್ಷ್ಮಿ ಯೋಜನೆಗೆ ಯಾರು ಅರ್ಹರು?
ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ(AAP), ಬಿಪಿಎಲ್(BPL) ಮತ್ತು ಎಪಿಎಲ್(APL) ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಗೆ ಅರ್ಹ ಫಲಾನುಭವಿಗಳಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ.
ಇದನ್ನೂ ಓದಿ: Daily GK Quiz: "ಡಿಸ್ಕವರಿ ಆಫ್ ಇಂಡಿಯಾ" ಕೃತಿಯನ್ನು ಬರೆದವರು ಯಾರು?
ಗೃಹಲಕ್ಷ್ಮಿ ಯೋಜನೆ ಇವರಿಗೆ ಸಿಗುವುದಿಲ್ಲ
ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಂತವರಿಗೆ ಈ ಯೋಜನೆಯ ಸೌಲಭ್ಯ ಸಿಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ GST ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅವರಿಗೂ ಈ ಯೋಜನೆಯ ಲಾಭ ಸಿಗುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.