Airavata Club Class 2.0 Bus: ರಾಜ್ಯದ KSRTC ಪ್ರಯಾಣಿಕರಿಗೆ ಮತ್ತೊಂದು ಐಶಾರಾಮಿ ಸುಖಕರ ಪ್ರಯಾಣವನ್ನು ಒದಗಿಸಿಕೊಡಲು ವೇದಿಕೆ ಸಿದ್ಧವಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಐರಾವತ ಕ್ಲಬ್ ಕ್ಲಾಸ್ 2.0 KSRTCಗೆ ಸೇರ್ಪಡೆಯಾಗಲಿದೆ. ಬಳಿಕ ಶೀಘ್ರವೇ ರಸ್ತೆಗೆ ಇಳಿದು ಪ್ರಯಾಣಿಕರಿಗೆ ಹೈಟೆಕ್ ಪ್ರಯಾಣದ ಅನುಭವ ನೀಡಲಿವೆ.
ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸು), KSRTC ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಮತ್ತು KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರು ಬಸ್‌ಗಳ ಪರಿವೀಕ್ಷಣೆ ನಡೆಸಿದರು.
ಐರಾವತ 2.0 ಮಾದರಿಯ 20 ಬಸ್ಸುಗಳನ್ನು KSRTCಯು ಈ ತಿಂಗಳ ಕೊನೆಯ ವಾರದಲ್ಲಿ ತನ್ನ ವಾಹನಗಳ ಸಮೂಹಕ್ಕೆ ಸೇರ್ಪಡೆಗೊಳಿಸಲಿದೆ. ಒಂದು ಬಸ್ಸಿನ ದರ 1.78 ಕೋಟಿ ರೂ. ಇದ್ದು, ನಿಗಮದಲ್ಲಿ ಒಟ್ಟು 443 ಬಸ್ಸುಗಳು ಐಷಾರಾಮಿ ಬಸ್ಸುಗಳಿವೆ.
ಇದನ್ನೂ ಓದಿ: "ಕರ್ನಾಟಕ ಮರ್ಯಾದೆ ತೆಗೆದವರು ಈಗ ನೈತಿಕತೆಯ ಪಾಠ ಮಾಡುತ್ತಿದ್ದಾರೆ"
ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ)ಯ ಬಸ್ ಗಳನ್ನು ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದೆ.
ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ 20 ಬಸ್ಸುಗಳನ್ನು ಕೆ ಎಸ್ ಆರ್ ಟಿ ಸಿ ಯು ಈ ತಿಂಗಳ ಕೊನೆಯ ವಾರದಲ್ಲಿ ವಾಹನಗಳ ಸಮೂಹಕ್ಕೆ ಸೇರ್ಪಡೆಗೊಳಿಸಲಿದೆ.
ಕರ್ನಾಟಕವು ವಿವಿಧ… pic.twitter.com/KMdqKMAMLM
— Ramalinga Reddy (@RLR_BTM) October 7, 2024
ಈ ಬಸ್ಸಿನ ವಿಶೇಷತೆಗಳು:
* ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ.
* ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ.
* ನವೀನ ತಂತ್ರಜ್ಙಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್ ಕೆಎಂಪಿಎಲ್ ನೀಡುತ್ತದೆ.
*ಒಟ್ಟಾರೆ ಬಸ್ಸಿನ ಉದ್ದದಲ್ಲಿ 3.5% ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಾಗಿದೆ.
* ಒಟ್ಟಾರೆ ಬಸ್ಸಿನ ಎತ್ತರದಲ್ಲಿ 5.6% ಹೆಚ್ಚಳ ಇರುವುದರಿಂದ ಹೆಚ್ಚಿನ ಹೆಡ್ ರೂಂ ಇರುತ್ತದೆ.
* ವಿಂಡ್‌ಶೀಲ್ಡ್ ಗಾಜು 9.5%ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್‌ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ.
* ವಿಶಾಲ ಲಗೇಜ್ ಸ್ಥಳಾವಕಾಶವಿದ್ದು, ಹಿಂದಿನ ಬಸ್‌ಗಳಿಗೆ ಹೋಲಿಸಿದ್ದಲ್ಲಿ ಶೇ.20ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯವಿರುತ್ತದೆ. ಇದು ಹೆಚ್ಚಿನ ಲಗೇಜ್ ಸ್ಥಳಾವಕಾಶವಿರುವ ಮೊದಲ ಬಸ್ ಆಗಿದೆ.
* USB + C ಟೈಪ್‌ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿದೆ.
* ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾನಿಯಂತ್ರಣಾ ವ್ಯವಸ್ಥೆ ಇರುತ್ತದೆ.
* ಉನ್ನತ ದರ್ಜೆ/ವಿನ್ಯಾಸದ ಆಸನಗಳು ಮತ್ತು ಸಾಮಗ್ರಿಗಳ ಬಳಕೆಯಿಂದ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಸೌಕರ್ಯ.
* ವಿಶಾಲವಾದ ಪ್ಯಾಂಟೋಗ್ರಾಫಿಕ್ ವಿನ್ಯಾಸದಿಂದ ವಾಹನದ ನಿರ್ವಹಣೆ ಕೈಗೊಳ್ಳಲು ಸುಲಭವಾಗಿರುತ್ತದೆ.
* ಹಿಂಭಾಗದಲ್ಲಿ fog light ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಇರುತ್ತದೆ.
* ಸುಲಭವಾಗಿ ಕೈಗೆಟುಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ಗಳನ್ನು ಹೊಂದಿದ್ದು, ಚಾಲಕರಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ.
* ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಅಳವಡಿಸಿದ್ದು, ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ. ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪುಗಳಿದ್ದು, 30 ನಾಜ಼ಲ್‌ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡದ ಸಂದರ್ಭದಲ್ಲಿ ನೀರು ಸಿಂಪಡಿಸಲು ಪ್ರಾರಂಭವಾಗುತ್ತದೆ.
* ಚಾಲಕರು ಪಾದಚಾರಿಯನ್ನು ಪ್ರಯಾಣಿಕರ ಬಾಗಿಲಿನಿಂದ ಸುಲಭವಾಗಿ ನೋಡಬಹುದಾಗಿದ್ದು, ಪಾದಾಚಾರಿಗಳಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ.
ಇದನ್ನೂ ಓದಿ: ಆಸ್ಪತ್ರೆಯಲ್ಲಿ 24 ಗಂಟೆಗಳ ಕಾಲ ತಡೆರಹಿತ ಕಾರ್ಯಕ್ರಮ
ವಿಶೇಷವೆಂದರೆ ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಈ ಸಂದರ್ಭದಲ್ಲಿ KSRTC ನಿರ್ದೇಶಕಿ (ಸಿಬ್ಬಂದಿ & ಭದ್ರತಾ) ಡಾ.ಕೆ.ನಂದಿನಿ ದೇವಿ, ನಿಗಮದ ಹಿರಿಯ ಅಧಿಕಾರಿಗಳು ಮತ್ತು ವೋಲ್ವೋ ಕಂಪನಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.