Petrol-Diesel Price Hike: ಪೆಟ್ರೋಲ್ , ಡಿಸೇಲ್ ಬೆಲೆಯಲ್ಲಿ ಭಾರೀ ಏರಿಕೆ ..! ಕಾರಣ ಹೇಳಿದ ಇಂಡಿಯನ್ ಆಯಿಲ್

ರಷ್ಯಾ-ಉಕ್ರೇನ್ ಯುದ್ಧದಿಂದಾಗಿ, ಪಾಶ್ಚಿಮಾತ್ಯ ದೇಶಗಳು ರಷ್ಯಾದ ಮೇಲೆ ನಿರ್ಬಂಧಗಳನ್ನು ಹೇರುತ್ತಿವೆ. ಇದರಿಂದಾಗಿ ತೈಲ ಮತ್ತು ಅನಿಲದ ಬೆಲೆಗಳು ಸಹ ಹೆಚ್ಚಾಗುತ್ತಿವೆ. 

Written by - Ranjitha R K | Last Updated : Mar 16, 2022, 09:21 AM IST
  • ಮತ್ತೊಮ್ಮೆ ಸಾರ್ವಜನಿಕರಿಗೆ ದೊಡ್ಡ ಹೊಡೆತ
  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಭಾರೀ ಏರಿಕೆ
  • ಭಾರತದಲ್ಲೂ 20 ರಿಂದ 25 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ
Petrol-Diesel Price Hike: ಪೆಟ್ರೋಲ್ , ಡಿಸೇಲ್ ಬೆಲೆಯಲ್ಲಿ ಭಾರೀ ಏರಿಕೆ ..! ಕಾರಣ ಹೇಳಿದ ಇಂಡಿಯನ್ ಆಯಿಲ್ title=
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಭಾರೀ ಏರಿಕೆ (file photo)

ನವದೆಹಲಿ :  ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಂಗಸಂಸ್ಥೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ (Petrol diesel price hike). ನೆರೆಯ ರಾಷ್ಟ್ರ ಶ್ರೀಲಂಕಾದ ಆರ್ಥಿಕ ಸ್ಥಿತಿ ನಿರಂತರವಾಗಿ ಹದಗೆಡುತ್ತಿದೆ. ಈ ಅನುಕ್ರಮದಲ್ಲಿ ಈಗ ಮತ್ತೊಮ್ಮೆ ಇಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ (Petrol diesel price hike). ಇಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 254 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಲೀಟರ್‌ಗೆ 214 ರೂ. ಆಗಿದೆ.  ಒಂದೇ ತಿಂಗಳಲ್ಲಿ ಮೂರು ಬಾರಿ  ಬೆಲೆ ಏರಿಕೆ ಮಾಡಲಾಗಿದೆ. 

ಇನ್ನೂ ಹೆಚ್ಚಾಗಲಿದೆ ಬೆಲೆ : 
ರಷ್ಯಾ-ಉಕ್ರೇನ್ ಯುದ್ಧದಿಂದಾಗಿ (Russi Ukraine war), ಪಾಶ್ಚಿಮಾತ್ಯ ದೇಶಗಳು ರಷ್ಯಾದ ಮೇಲೆ ನಿರ್ಬಂಧಗಳನ್ನು ಹೇರುತ್ತಿವೆ. ಇದರಿಂದಾಗಿ ತೈಲ ಮತ್ತು ಅನಿಲದ ಬೆಲೆಗಳು ಸಹ ಹೆಚ್ಚಾಗುತ್ತಿವೆ. ಕಚ್ಚಾ ತೈಲದ ಬೆಲೆಯೂ ನಿರಂತರವಾಗಿ ಹೊಸ ದಾಖಲೆಗಳತ್ತ ಸಾಗುತ್ತಿದೆ (Petrol diesel price hike). 

ಇದನ್ನೂ ಓದಿ :  7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ಶಾಕ್ !

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಹೆಚ್ಚುತ್ತಿದೆ. ಶ್ರೀಲಂಕಾದ ವಿದೇಶಿ ವಿನಿಮಯ ಕೇವಲ 2.31 ಅರಬ್ ಡಾಲರ್. ಈ ಕಾರಣದಿಂದ ಅಗತ್ಯ ವಸ್ತುಗಳಿಗಾಗಿ  ಪಾವತಿಸುವಲ್ಲಿ ಕೂಡಾ ಶ್ರೀಲಂಕಾ (Sreelanka) ಸಮಸ್ಯೆಗಳನ್ನು ಎದುರಿಸುತ್ತಿದೆ. ಹೆಚ್ಚುತ್ತಿರುವ ಕಚ್ಚಾ ತೈಲದ ಬೆಲೆಯಿಂದಾಗಿ ಶ್ರೀಲಂಕಾ ಸರ್ಕಾರದ ಸಂಕಷ್ಟಗಳು ಹೆಚ್ಚಾಗುತ್ತಿರುವಂತೆ ಕಾಣುತ್ತಿದೆ.  ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮವು ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ (Russia Ukarine war effects).

ಭಾರತದಲ್ಲೂ ಬೆಲೆ ಹೆಚ್ಚಾಗಲಿದೆ :
ನೆರೆಯ ದೇಶದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಭಾರತದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗುವ ನಿರೀಕ್ಷೆಯಿದೆ (Petrol diesel price hike). ಆದರೆ, ಇಲ್ಲಿನ ತೈಲ ಕಂಪನಿಗಳು ನವೆಂಬರ್ 3ರಿಂದ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದೀಗ  ಐದು ರಾಜ್ಯಗಳ ಚುನಾವಣೆಗಳು ಮುಗಿದಿವೆ (Five state election). ಹೀಗಿರುವಾಗ ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 20 ರಿಂದ 25 ರೂಪಾಯಿ ಹೆಚ್ಚಾಗಬಹುದು ಎನ್ನಲಾಗಿದೆ. 

ಇದನ್ನೂ ಓದಿ : Bank Loan: ಸಾಲ ಪಡೆಯುವ ನಿಯಮಗಳನ್ನು ಬದಲಾಯಿಸಿದ RBI ! ಗ್ರಾಹಕರಿಗೆ ನೇರ ಲಾಭ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News