International Women's Day 2024: ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೋಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರ ದೇಶಾದ್ಯಂತದ ಮಹಿಳೆಯರಿಗೆ ಗುಡ್ ನ್ಯೂಸ್ ಪ್ರಕಟಿಸಿದೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ನಿರ್ಧಾರಗಳಲ್ಲಿ ದೇಶದ 10 ಕೋಟಿಗೂ ಹೆಚ್ಚು ಮಹಿಳೆಯರಿಗೆ ಭಾರಿ ನೆಮ್ಮದಿಯ ಸುದ್ದಿಯನ್ನು ಸರ್ಕಾರ ಪ್ರಕಟಿಸಿದೆ, ಕೇಂದ್ರದ ಮೋದಿ ಸರ್ಕಾರವು ಉಜ್ವಲ ಯೋಜನೆಯ ಸಬ್ಸಿಡಿ ಅವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಇದಕ್ಕೆ ಗುರುವಾರ ಕೇಂದ್ರ ಸಚಿವ ಸಂಪುಟದ ಅನುಮೋದನೆ ದೊರೆತಿದೆ. ಉಜ್ವಲಾ ಯೋಜನೆಯಡಿ ಬಡ ಮಹಿಳೆಯರಿಗೆ ಎಲ್‌ಪಿಜಿ ಸಿಲಿಂಡರ್‌ನ ಮೇಲಿನ 300 ರೂಪಾಯಿ ಸಬ್ಸಿಡಿಯನ್ನು ಏಪ್ರಿಲ್ 1 ರಿಂದ ಆರಂಭಗೊಂದು ಮುಂದಿನ ಹಣಕಾಸು ವರ್ಷಕ್ಕೆ ಒಂದು ವರ್ಷದ ಅವಧಿಗಾಗಿ ವಿಸ್ತರಿಸುವುದಾಗಿ ಸರ್ಕಾರ ಗುರುವಾರ ಘೋಷಿಸಿದೆ. (Business News In Kananda)
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸರ್ಕಾರವು ತಲಾ 14.2 ಕೆಜಿಯ 12 ಸಿಲಿಂಡರ್‌ಗಳ ಮೇಲಿನ ಸಬ್ಸಿಡಿಯನ್ನು 200 ರೂ.ನಿಂದ 300 ರೂ.ಗೆ ಹೆಚ್ಚಿಸಿತ್ತು ಎಂಬುದು ಇಲ್ಲಿ ಉಲ್ಲೇಖನೀಯ. ಈ ಸಬ್ಸಿಡಿ ಪ್ರಸಕ್ತ ಹಣಕಾಸು ವರ್ಷಕ್ಕೆ ಮಾತ್ರ ಸೀಮಿತವಾಗಿತ್ತು ಮತ್ತು ಅದರ ಅವಧಿ ಮಾರ್ಚ್ 31 ರಂದು ಮುಕ್ತಾಯಗೊಳ್ಳಬೇಕಿತ್ತು. ಆದರೆ, ಸರ್ಕಾರದ ಇಂದಿನ ನಿರ್ಧಾರದಿಂದ ಉಜ್ವಲಾ ಯೋಜನೆಯಡಿ, ಈ ಸಬ್ಸಿಡಿ ಮಾರ್ಚ್ 2025 ರವರೆಗೆ ಮುಂದುವರೆಯಲಿದೆ.
ಇದರಿಂದ ಸರ್ಕಾರದ ಮೇಲೆ 12,000 ಕೋಟಿ ರೂ.ಭಾರ ಬೀಳಲಿದೆ
ಈ ಸಬ್ಸಿಡಿಯನ್ನು 2024-25ರವರೆಗೆ ವಿಸ್ತರಿಸಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಇಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಈ ಕ್ರಮದಿಂದ ಸುಮಾರು 10 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಸರಕಾರಕ್ಕೆ 12,000 ಕೋಟಿ ರೂ. ವಾರ್ಷಿಕ ಹೊರೆ ಬೀಳಲಿದೆ.
ಇದನ್ನೂ ಓದಿ-Salary Hike: ಬಂದೇ ಬಿಟ್ತು ಗುಡ್ ನ್ಯೂಸ್, ಸರ್ಕಾರಿ ನೌಕರ ತುಟ್ಟಿಭತ್ಯೆಯಲ್ಲಿ ಶೇ. 4 ರಷ್ಟು ಹೆಚ್ಚಳ
ಉಜ್ವಲ ಯೋಜನೆಯನ್ನು 2016 ರಲ್ಲಿ ಆರಂಭಿಸಲಾಗಿದೆ
ಲಿಕ್ವಿಡ್ ಪೆಟ್ರೋಲಿಯಂ ಗ್ಯಾಸ್, ಶುದ್ಧ ಅಡುಗೆ ಇಂಧನವನ್ನು ಗ್ರಾಮೀಣ ಮತ್ತು ಹಿಂದುಳಿದ ಬಡ ಕುಟುಂಬಗಳಿಗೆ ಒದಗಿಸಲು, ಬಡ ಕುಟುಂಬಗಳ ವಯಸ್ಕ ಮಹಿಳೆಯರಿಗೆ ಠೇವಣಿ-ಮುಕ್ತ ಎಲ್ಪಿಜಿ ಸಂಪರ್ಕಗಳನ್ನು ಒದಗಿಸಲು ಸರ್ಕಾರವು ಮೇ 2016 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಆರಂಭಿಸಿತ್ತು.
ಇದನ್ನೂ ಓದಿ-Free LPG Cylinder: ಜನ ಸಾಮಾನ್ಯರಿಗೆ ಸಂಬಂಧಿಸಿದ ಈ ಯೋಜನೆಯ ಬಗ್ಗೆ ಹೊರಬೀಳಲಿದೆಯಾ ಗುಡ್ ನ್ಯೂಸ್!
ಕಳೆದ ವರ್ಷ ಸಹಾಯಧನ ಹೆಚ್ಚಿಸಲಾಗಿತ್ತು
ಉಜ್ವಲ ಯೋಜನೆಯ ಅಡಿ ಫಲಾನುಭವಿಗಳು ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯುತ್ತಾರೆ, ಆದರೆ ಇದಕ್ಕಾಗಿ ಗ್ಯಾಸ್ ಸಿಲಿಂಡರ್ ರಿಫಿಲ್ ಮಾರುಕಟ್ಟೆಯಿಂದ ಮಾಡಿಕೊಳ್ಳಬೇಕು. ಗ್ಯಾಸ್ ಬೆಲೆಯಲ್ಲಿ ಏರಿಕೆಯಾದ ನಂತರ, ಮೇ 2022 ರಲ್ಲಿ ಉಜ್ವಲ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡಲು ಸರ್ಕಾರ ನಿರ್ಧರಿಸಿತ್ತು. ಇದನ್ನು ಅಕ್ಟೋಬರ್ 2023 ರಲ್ಲಿ 300 ರೂ.ಗೆ ಹೆಚ್ಚಿಸಲಾಗಿದ್ದು, ಮುಂದಿನ ಒಂದು ವರ್ಷ ಕೂಡ ಇದು ಮುಂದುವರೆಯಲಿದೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ