Karnataka Budget 2022: ರಾಜ್ಯದ ಮುಖ್ಯಮಂತ್ರಿಗಳಾಗಿರುವ ಬಸವರಾಜ್ ಬೊಮ್ಮಾಯಿ (CM Basavaraj Bommai) ಇಂದು ಆರ್ಥಿಕ ವರ್ಷ 2022-23ನೆ (Karnataka Budget 2022-23) ಸಾಲಿನ ಸುದೀರ್ಘ ಮತ್ತು ಒಟ್ಟು ₹ 204586.68 ವೆಚ್ಚದ ಮತ್ತು ₹ - 14699.14 ಕೊರತೆಯ ಬಜೆಟ್ ಅನ್ನು ಮಂಡಿಸಿದ್ದಾರೆ.
ತಮ್ಮ ಬಜೆಟ್ (Bommai Budget 2022) ಭಾಷಣದಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ (Budget 2022 For Quality Education), 'ಎಲ್ಲಾ ದುರ್ಬಲವರ್ಗದ ಜನರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಏಳಿಗೆಯಾಗಬೇಕು ಎಂಬುದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದಿದ್ದಾರೆ. ಈ ವರ್ಗಗಳ ಜನರ ಅವಶ್ಯಕತೆಗಳನ್ನು ಆಧರಿಸಿ, ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಆರೋಗ್ಯ, ಶಿಕ್ಷಣ ಹಾಗೂ ಪೌಷ್ಟಿಕತೆಯ ವಿಚಾರದಲ್ಲಿ ಹೆಚ್ಚಿನ ಮಹತ್ವ ನೀಡಿ, ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ'
ಗುಣಮಟ್ಟದ ಶಿಕ್ಷಣಕ್ಕೆ ಬೊಮ್ಮಾಯಿ ಕೊಡುಗೆಗಳು ಕೆಳಗಿನಂತಿವೆ
• ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.
• ಹೋಬಳಿ ಮಟ್ಟದಲ್ಲಿ "ಮಾದರಿ ಶಾಲೆ"ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ.
• ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ.
• ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.
ಇದನ್ನೂ ಓದಿ-Bengaluru Crime : ತೀಟೆ ತೀರದ ತಾತನ ಕಥೆ ಕೇಳಿ ಥಂಡಾ ಹೊಡೆದ ಪೊಲೀಸರು!
• ‘ನೋಡಿ ಕಲಿ ಮಾಡಿ ತಿಳಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ.
• Karnataka Institute of Technology ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ; ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ.
• ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ.
ಇದನ್ನೂ ಓದಿ-Karnataka Budget 2022: ಸ್ವಸಹಾಯ ಸಂಘಗಳು ಹಾಗೂ ಮಹಿಳೆಯರ ಉದ್ಯೋಗಕ್ಕೆ ಬಜೆಟ್ ಕೊಡುಗೆ ಏನು?
'ರಾಜ್ಯದ ಒಟ್ಟು 93 ತಾಲ್ಲೂಕುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು, 100 ತಾಲೂಕುಗಳಲ್ಲಿ ಆರೋಗ್ಯ ಸೇವೆಯನ್ನು ಬಲಪಡಿಸಲು ಮತ್ತು 102 ತಾಲ್ಲೂಕುಗಳಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಿಸಲು ಒಟ್ಟಾರೆ 3000 ಕೋಟಿ ರೂ. ವೆಚ್ಚದಲ್ಲಿ ಫಲಿತಾಂಶ ಕೇಂದ್ರಿತ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು' ಹೇಳಿದ್ದಾರೆ.
ಇದನ್ನೂ ಓದಿ-Karnataka Budget : ಬೊಮ್ಮಾಯಿ ಬಜೆಟಿನಲ್ಲಿ ಆರೋಗ್ಯ ಭಾಗ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.