Karnataka Budget 2024: ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುವುದು ಎಂದು ಆಯವ್ಯಯ ಮಂಡನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು ಎಂದು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ, ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿ- Indian Cricketers: ಸ್ವಂತ ಬ್ಯುಸಿನೆಸ್ ಹೊಂದಿರುವ ಭಾರತೀಯ ಕ್ರಿಕೇಟಿಗರು ಯಾರೆಲ್ಲಾ ಗೊತ್ತೇ?
ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ:
ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ತಿಳಿಸಿದ್ದಾರೆ. ಅವುಗಳೆಂದರೆ...
>> Asset Monetisation, ವಸತಿ ಸೆಸ್ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪಿಸಲಾಗುವುದು.
>> ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ ಮಾಡುವುದು.
>> ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು.
ಇದನ್ನೂ ಓದಿ- Karnataka Budget 2024: ರಾಜ್ಯ ರೈತರಿಗಾಗಿ "ರೈತ ಸಮೃದ್ಧಿ ಯೋಜನೆ" ಜಾರಿ
ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆ:
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ಸಿಎಂ ತಮ್ಮ ಬಜೆಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.