ಕಾನೂನಿನ ಪ್ರಕಾರವೇ ಜಿಂದಾಲ್ ಗೆ ಜಮೀನು: ಎಂ ಬಿ ಪಾಟೀಲ

ಆರು ತಿಂಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ (Global Investors Conference) ನಡೆಯಲಿದೆ. ಜಿಂದಾಲ್ ರಾಜ್ಯದಲ್ಲಿ 90 ಸಾವಿರ ಕೋಟಿ ರೂಪಾಯಿ ಹೂಡಿದ್ದು, 50 ಸಾವಿರ ಉದ್ಯೋಗ ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಸರಕಾರದ ಕಡೆಯಿಂದ ಹೂಡಿಕೆದಾರರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಅವರು ಪ್ರತಿಪಾದಿಸಿದ್ದಾರೆ.

Written by - Yashaswini V | Last Updated : Aug 23, 2024, 03:34 PM IST
  • ಸರಕಾರವು ಉದ್ಯಮಿಗಳಿಗೆ ಜಮೀನು ಕೊಡುತ್ತದೆ.
  • ಅದರಲ್ಲಿ ಹತ್ತು ವರ್ಷಗಳಲ್ಲಿ ಶೇ 51ರಷ್ಟು ಭೂಮಿಯನ್ನು ಅವರು ಬಳಸಿಕೊಂಡು, ಕಂಪನಿಯನ್ನು ಸಕ್ರಿಯವಾಗಿ ಇಟ್ಟಿರಬೇಕು.
  • ಆಗ ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗುತ್ತದೆ.
ಕಾನೂನಿನ ಪ್ರಕಾರವೇ ಜಿಂದಾಲ್ ಗೆ ಜಮೀನು: ಎಂ ಬಿ ಪಾಟೀಲ title=

ಬೆಂಗಳೂರು: ಜಿಂದಾಲ್ ಉಕ್ಕು ಕಂಪನಿಗೆ (Jindal Steel Company) ಕೋರ್ಟ್ ನಿರ್ದೇಶನ ಮತ್ತು ಅದನ್ನು ಅನುಸರಿಸಿ ಹೊರಡಿಸಿದ ಸರಕಾರಿ ಆದೇಶ ಹಾಗೂ ಸಂಪುಟ ಸಭೆಯ ನಿರ್ಣಯದಂತೆಯೇ ಕಾನೂನಿಗೆ ಅನುಸಾರವಾಗಿ 3,677 ಎಕರೆ ಭೂಮಿಯನ್ನು ಗುತ್ತಿಗೆ ಮಾರಾಟ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಸರಕಾರದ್ದು ಎಳ್ಳಷ್ಟೂ ತಪ್ಪಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌ ಬಿ ಪಾಟೀಲ ಶುಕ್ರವಾರ ಇಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌ ಬಿ ಪಾಟೀಲ (Large and Medium Industries Minister MB Patil) ಅವರು, 'ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಖಾನೆ ಹೊಂದಿರುವ ಜಿಂದಾಲ್ ಕಂಪನಿಗೆ ನಾವೇನೂ ರಿಯಾಯಿತಿ ಕೊಟ್ಟಿಲ್ಲ. ಮಾರುಕಟ್ಟೆ ಬೆಲೆ ಹಿಂದೆ ಏನಿದೆಯೋ ಅದನ್ನು ನಿಗದಿಪಡಿಸಿದ್ದೇವೆ. ಕಂಪನಿ ಕೂಡ ಸರಕಾರದ ಷರತ್ತುಗಳನ್ನು ಪಾಲಿಸಿದೆ. ರಾಜ್ಯದಲ್ಲಿ ಇರುವ ಒಂದು ಲಕ್ಷ ಕೈಗಾರಿಕೆಗಳಿಗೆ ಯಾವ ನಿಯಮ ಹೇಳಿದ್ದೇವೋ ಅದನ್ನೇ ಜಿಂದಾಲ್ ಗೂ ಅನ್ವಯಿಸಲಾಗಿದೆ. ವಾಸ್ತವವಾಗಿ ಒಂಬತ್ತು ವರ್ಷಗಳ‌ ಕಾಲ ಇದನ್ನು ವೃಥಾ ಎಳೆದಾಡಿದ್ದೇವೆ' ಎಂದಿದ್ದಾರೆ.

ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ (Global Investors Conference) ನಡೆಯಲಿದೆ. ಜಿಂದಾಲ್ ರಾಜ್ಯದಲ್ಲಿ 90 ಸಾವಿರ ಕೋಟಿ ರೂಪಾಯಿ ಹೂಡಿದ್ದು, 50 ಸಾವಿರ ಉದ್ಯೋಗ ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಸರಕಾರದ ಕಡೆಯಿಂದ ಹೂಡಿಕೆದಾರರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ- ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ; ದಾಖಲೆ ಇಟ್ಟ ಹೆಚ್.ಡಿ.ಕುಮಾರಸ್ವಾಮಿ

ಸರಕಾರವು ಉದ್ಯಮಿಗಳಿಗೆ ಜಮೀನು ಕೊಡುತ್ತದೆ. ಅದರಲ್ಲಿ ಹತ್ತು ವರ್ಷಗಳಲ್ಲಿ ಶೇ 51ರಷ್ಟು ಭೂಮಿಯನ್ನು ಅವರು ಬಳಸಿಕೊಂಡು, ಕಂಪನಿಯನ್ನು ಸಕ್ರಿಯವಾಗಿ ಇಟ್ಟಿರಬೇಕು. ಆಗ ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗುತ್ತದೆ. ಇದರಲ್ಲಿ ಜಿಂದಾಲ್ ಎಲ್ಲೂ ಎಡವಿಲ್ಲ ಎಂದು ಅವರು ನುಡಿದರು.

ನಾವು ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿಂದ ಕೈಗಾರಿಕಾ ಕ್ಷೇತ್ರದಲ್ಲಿ ಭಾರೀ ಪೈಪೋಟಿ (Heavy Competition in Industrial Sector) ಎದುರಿಸುತ್ತಿದ್ದೇವೆ. ಎಷ್ಟೋ ರಾಜ್ಯಗಳು ಉದ್ದಿಮೆಗಳಿಗೆ ಉಚಿತವಾಗಿ ಭೂಮಿ ಕೊಡುತ್ತಿವೆ. ಹಿಂದೆ ಜಿಂದಾಲ್ ಕಂಪನಿಗೆ ಭೂಮಿಯನ್ನು ಲೀಸ್ ಕಂ ಸೇಲ್ ಮಾಡಲು ಕೆಲವರು ಯಾಕೆ ವಿರೋಧಿಸಿದರೋ ಗೊತ್ತಿಲ್ಲ ಎಂದು ಅವರು ವಿವರಿಸಿದ್ದಾರೆ.

ಹಿಂದೆ ನಾವು ಜಿಂದಾಲ್ ವಿರುದ್ಧವೇನೂ ಪ್ರತಿಭಟಿಸಿಲ್ಲ. ಆಗ ನಾವು ಜನಾರ್ದನ ರೆಡ್ಡಿ ವಿರುದ್ಧವಷ್ಟೇ ದನಿ ಎತ್ತಿದ್ದೆವು. ಜತೆಗೆ ಈಗ ಜಿಂದಾಲ್ ಗೆ ಕೊಡುತ್ತಿರುವ ಭೂಮಿಯಲ್ಲಿ ಗಣಿಗಾರಿಕೆಯೇನೂ ನಡೆಯುತ್ತಿರಲಿಲ್ಲ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಇದನ್ನೂ ಓದಿ- ರೈಲ್ವೇ ನಿಲ್ದಾಣ ಕಾಮಗಾರಿ: ಬೆಂಗಳೂರಿನ ಈ ರೈಲು ನಿಲ್ದಾಣದಲ್ಲಿ 92 ದಿನಗಳ ಕಾಲ ರೈಲು ನಿಲುಗಡೆ ಬಂದ್!

ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ: 
ಮುಡಾ ಹಗರಣದ (MUDA Scam) ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ ಎಂದು ಎಂ‌ ಬಿ ಪಾಟೀಲ ಹೇಳಿದ್ದಾರೆ.

ಮುಡಾ ಹಗರಣದ ನೆಪದಲ್ಲಿ ಸರಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನೋಡುತ್ತಿವೆ. ಆದರೆ ಅವರು ತಲೆ ಕೆಳಗೆ ಮಾಡಿಕೊಂಡು ನಿಂತರೂ ಅದು ಸಾಧ್ಯವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರದಲ್ಲಿ ಕೆಲವು ಸಲಹೆ ಸೂಚನೆ ನೀಡಲಿದೆ ಎಂದು ಅವರು ನುಡಿದಿದ್ದಾರೆ.

ಟಿ ಜೆ ಅಬ್ರಹಾಂ ನೀಡಿದ ದೂರಿನ ಮೇರೆಗೆ ತರಾತುರಿಯಲ್ಲಿ ಕ್ರಮ ಕೈಗೊಂಡ ರಾಜ್ಯಪಾಲರು, ಶಶಿಕಲಾ‌ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಎಚ್ ಡಿ ಕುಮಾರಸ್ವಾಮಿ ವಿಚಾರದಲ್ಲಿ ವರ್ಷಗಳೇ ಉರುಳಿದರೂ ಏಕೆ ಸುಮ್ಮನಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News