LPG Cylinder Price: ಫೆಬ್ರವರಿ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಶಾಕ್! ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ

LPG Cylinder Price: ಫೆಬ್ರವರಿ ತಿಂಗಳ ಮೊದಲನೇ ದಿನವೇ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಮಾರುಕಟ್ಟೆ ಕಂಪನಿಗಳು, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯನ್ನು ಘೋಷಿಸಿವೆ. ಈ ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ. 

Written by - Yashaswini V | Last Updated : Feb 1, 2024, 07:51 AM IST
  • ತೈಲ ಮಾರುಕಟ್ಟೆ ಕಂಪನಿಗಳಿಂದ ವಾಣಿಜ್ಯ ಎಲ್‌ಪಿಜಿ ಬೆಲೆ ಪರಿಷ್ಕರಣೆ
  • ಎಲ್‌ಪಿ‌ಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಹೆಚ್ಚಳ
  • 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರ ಏರಿಕೆ
LPG Cylinder Price: ಫೆಬ್ರವರಿ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಶಾಕ್!  ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ  title=

LPG Cylinder Price: ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಗುರುವಾರ (ಫೆಬ್ರವರಿ 01, 2024)  ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಪರಿಷ್ಕರಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 14 ರೂ.ಗಳಷ್ಟು ಹೆಚ್ಚಿಸಲಾಗಿದೆ.  ಈ ಹೊಸ ದರಗಳು ಇಂದಿನಿಂದ (ಗುರುವಾರ, 01 ಫೆಬ್ರವರಿ) ಜಾರಿಗೆ ಬರಲಿವೆ. 

ಬೆಲೆ ಏರಿಕೆಯ ನಂತರ, ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ 1,769.50 ರೂ.ಆಗಿರಲಿದೆ. 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ನ ಬೆಲೆ ಕೋಲ್ಕತ್ತಾದಲ್ಲಿ 1887 ರೂ., ಮುಂಬೈನಲ್ಲಿ 1723.50ರೂ. ಹಾಗೂ ಚೆನ್ನೈನಲ್ಲಿ 1937 ರೂ.ಗಳಿಗೆ ತಲುಪಿದೆ. 

ಇದನ್ನೂ ಓದಿ- Credit Card: ಕ್ರೆಡಿಟ್ ಕಾರ್ಡ್ ಅನ್ನು ಈ ರೀತಿ ಬಳಸಿದರೆ ಸಿಗುತ್ತೆ ಹೆಚ್ಚಿನ ಪ್ರಯೋಜನ

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಬದಲಾವಣೆ ಇಲ್ಲ: 
ಆದಾಗ್ಯೂ, ಗೃಹ ಬಳಕೆ ಎಲ್‌ಪಿ‌ಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಗಮನಾರ್ಹವಾಗಿ, ಆಗಸ್ಟ್ 30, 2023 ರಿಂದ ಗೃಹಬಳಕೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಸ್ಥಳೀಯ ತೆರಿಗೆಗಳ ಕಾರಣದಿಂದಾಗಿ ದೇಶೀಯ ಅಡುಗೆ ಅನಿಲದ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. 

ಇದನ್ನೂ ಓದಿ- Union Budget 2024: ದೇಶಾದ್ಯಂತದ ಈ ರೈತರಿಗೆ ಪಿಎಂ ಕಿಸಾನ್ ಯೋಜನೆ ಅಡಿ ವಾರ್ಷಿಕ ₹12000 ಸಿಗುವ ನಿರೀಕ್ಷೆ!

ವಿಮಾನಯಾನ ಸಂಸ್ಥೆಗಳಿಗೆ ಸಮಾಧಾನದ ಸುದ್ದಿ! 
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಇಂದು ವಿಮಾನ ಇಂಧನದ ಬೆಲೆಯನ್ನು ಕಡಿಮೆ ಮಾಡಿದೆ. ವಿಮಾನ ಇಂಧನ ದರಗಳು ಪ್ರತಿ ಲೀಟರ್‌ಗೆ ಸುಮಾರು 1221 ರೂ.ಗಳಷ್ಟು ಇಳಿಕೆಯಾಗಿದೆ.ಇಂದಿನಿಂದಲೇ ಹೊಸ ದರಗಳು ಜಾರಿಗೆ ಬರಲಿವ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News