Old Pension Scheme Update: ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಪ್ರಕಟ, ನೀವು ಕೇಳಿ ಸಂತಸಗೊಳ್ಳುವಿರಿ!

Old Pension Scheme Latest Update: ದೇಶಾದ್ಯಂತ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯ ಕುರಿತು ಒಂದು ಮಹತ್ವದ ಅಪ್ಡೇಟ್ ಪ್ರಕಟಗೊಂಡಿದೆ. ಪ್ರಸ್ತುತ, ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿಗೊಳಿಸುವ ಹೊರೆ ಕೇಂದ್ರ ಸರ್ಕಾರದ ಮೇಲೆ ಹೆಚ್ಚುತ್ತಿದೆ. ಇದರ ಅನುಷ್ಠಾನದ ಬಗ್ಗೆಯೂ ಸರ್ಕಾರ ಸುಳಿವು ನೀಡಿದೆ.  

Written by - Nitin Tabib | Last Updated : Apr 12, 2023, 09:41 PM IST
  • ನೌಕರರ ಪಿಂಚಣಿ ವ್ಯವಸ್ಥೆಯನ್ನು ಪರಿಶೀಲಿಸಲು ಹಣಕಾಸು ಸಚಿವಾಲಯವು ಸಮಿತಿಯನ್ನು ರಚಿಸಿದೆ.
  • ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್ ನೇತೃತ್ವದಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ.
  • ಸರ್ಕಾರಿ ನೌಕರರಿಗೆ ಅನ್ವಯವಾಗುವ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (ಎನ್‌ಪಿಎಸ್) ಅಸ್ತಿತ್ವದಲ್ಲಿರುವ ರಚನೆಯಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆ ಇದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಈ ಸಮಿತಿಯು ಸಲಹೆ ನೀಡಲಿದೆ.
Old Pension Scheme Update: ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಪ್ರಕಟ, ನೀವು ಕೇಳಿ ಸಂತಸಗೊಳ್ಳುವಿರಿ! title=
ಹಳೆ ಪಿಂಚಣಿ ಯೋಜನೆ ಅಪ್ಡೇಟ್ !

Old Pension News: ದೇಶಾದ್ಯಂತ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯ ಬಗ್ಗೆ ಮಹತ್ವದ ಅಪ್ಡೇಟ್ ಪ್ರಕಟಗೊಂಡಿದೆ. ಪ್ರಸ್ತುತ, ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿಗೊಳಿಸುವ ಹೊರೆ ಕೇಂದ್ರ ಸರ್ಕಾರದ ಮೇಲೆ ಹೆಚ್ಚುತ್ತಿದೆ. ಇದರ ಅನುಷ್ಠಾನದ ಬಗ್ಗೆಯೂ ಸರ್ಕಾರ ಸುಳಿವು ನೀಡಿದೆ. ಹಳೆಯ ಪಿಂಚಣಿ ವ್ಯವಸ್ಥೆಗೆ ಸಂಬಂಧಿಸಿದಂತೆ ಇದೀಗ  ಹಣಕಾಸು ಸಚಿವಾಲಯದಿಂದ ಮಹತ್ವದ ಸುದ್ದಿ ಹೊರಬೀಳುತ್ತಿದೆ. ಅಂತಿಮವಾಗಿ ಸರ್ಕಾರ ಈ ವ್ಯವಸ್ಥೆಯನ್ನು ಯಾವಾಗ ಜಾರಿಗೆ ತರಬಹುದು ಎಂಬುದನ್ನೂ ತಿಳಿದುಕೊಳ್ಳೋಣ ಬನ್ನಿ,

ಮಾಹಿತಿ ನೀಡಿದ ಹಣಕಾಸು ಸಚಿವಾಲಯ
ನೌಕರರ ಪಿಂಚಣಿ ವ್ಯವಸ್ಥೆಯನ್ನು ಪರಿಶೀಲಿಸಲು ಹಣಕಾಸು ಸಚಿವಾಲಯವು ಸಮಿತಿಯನ್ನು ರಚಿಸಿದೆ. ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್ ನೇತೃತ್ವದಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ. ಸರ್ಕಾರಿ ನೌಕರರಿಗೆ ಅನ್ವಯವಾಗುವ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (ಎನ್‌ಪಿಎಸ್) ಅಸ್ತಿತ್ವದಲ್ಲಿರುವ ರಚನೆಯಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆ ಇದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಈ ಸಮಿತಿಯು ಸಲಹೆ ನೀಡಲಿದೆ.

2004 ಕ್ಕಿಂತ ಮೊದಲು ನೇಮಕಗೊಂಡ ನೌಕರರಿಗೆ ಈ ವ್ಯವಸ್ಥೆ ಅನ್ವಯಿಸುತ್ತದೆ
2004 ಕ್ಕಿಂತ ಮೊದಲು ಸರ್ಕಾರಿ ಸೇವೆಗೆ ನೇಮಕಗೊಂಡ ನೌಕರರಿಗೆ ಹಳೆಯ ಪಿಂಚಣಿ ಪದ್ಧತಿಯ ಲಾಭವನ್ನು ನೀಡಲಾಗುತ್ತಿದೆ. ಮತ್ತೊಂದೆಡೆ 2004ರ ಜನವರಿಯಿಂದ ಸರಕಾರಿ ಸೇವೆಗೆ ನೇಮಕಗೊಂಡ  ನೌಕರರು ಹೊಸ ಪಿಂಚಣಿ ವ್ಯವಸ್ಥೆಯ ಲಾಭ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರವಲ್ಲದೆ ದೇಶದ 5 ರಾಜ್ಯ ಸರ್ಕಾರಗಳು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿವೆ.

ಇದನ್ನೂ ಓದಿ-Good News: 40 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಭಾರಿ ಸಂತಸದ ಸುದ್ದಿ, ಸರ್ಕಾರ ಕೈಗೊಂಡಿದೆ ಈ ನಿರ್ಧಾರ!

ಯಾವ ರಾಜ್ಯಗಳಲ್ಲಿ OPS ಅನ್ನು ಜಾರಿಗೆ ತರಲಾಗಿದೆ?
ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜಸ್ಥಾನ ಪಾತ್ರವಾಗಿದೆ. ಇದರ ನಂತರ, ಪಂಜಾಬ್, ಛತ್ತೀಸ್‌ಗಢ, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ ಸರ್ಕಾರಗಳು ಸಹ ಇದರ ಅನುಷ್ಠಾನವನ್ನು ಘೋಷಿಸಿವೆ.

ಇದನ್ನೂ ಓದಿ-7th Pay Commission: ಸರ್ಕಾರಿ ನೌಕರರಿಗೆ ಬಂಬಾಟ್ ಲಾಟರಿ, ಏಪ್ರಿಲ್ 30 ರಂದು ಖಾತೆಗೆ ಬರಲಿವೆ 1.20 ಲಕ್ಷ ರೂ.ಗಳು!

ಆಗಸ್ಟ್ ಒಳಗೆ ಹಳೆಯ ಪಿಂಚಣಿ ಯೋಜನೆಯನ್ನು ಆರಿಸಿ
ಸರ್ಕಾರಿ ಉದ್ಯೋಗಿಯಾಗಿರುವವರು ಹಳೆಯ ಪಿಂಚಣಿ ಯೋಜನೆಯನ್ನು ಆಯ್ಕೆ ಮಾಡಬಹುದು. ಅವರು 31 ಆಗಸ್ಟ್ 2023 ರವರೆಗೆ ಈ ಪಿಂಚಣಿ ಆಯ್ಕೆ ಮಾಡುವ ಆಯ್ಕೆಯನ್ನು ಹೊಂದಿದ್ದಾರೆ. ಇದರೊಂದಿಗೆ ಆಗಸ್ಟ್ 31 ರವರೆಗೆ ಹಳೆಯ ಪಿಂಚಣಿ ಯೋಜನೆ (OPS) ಆಯ್ಕೆಯನ್ನು ಆಯ್ಕೆ ಮಾಡದ ಅರ್ಹ ಉದ್ಯೋಗಿಗಳನ್ನು ಹೊಸ ಪಿಂಚಣಿ ಯೋಜನೆಗೆ ಸೇರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News