ಪಡಿತರ ಚೀಟಿದಾರರಿಗೆ ಶಾಕ್ ಕೊಟ್ಟ ಮೋದಿ ಸರ್ಕಾರ!

Ration Card Latest News: ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ ಇದೆ.  ಕೇಂದ್ರ ಸರ್ಕಾರ 70 ಲಕ್ಷ ಪಡಿತರ ಚೀಟಿದಾರರನ್ನು ಶಂಕಿತರ ಪಟ್ಟಿಗೆ ಸೇರಿಸಿದೆ. ಇವುಗಳಲ್ಲಿ ಶೇ 60ರಿಂದ 70ರಷ್ಟು ಕಾರ್ಡ್‌ಗಳನ್ನು ರದ್ದುಗೊಳಿಸಬಹುದು ಎಂದು ಹೇಳಲಾಗುತ್ತಿದೆ. 

Written by - Yashaswini V | Last Updated : Aug 9, 2022, 11:37 AM IST
  • 2013ರಿಂದ 2021ರ ನಡುವೆ 4.74 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ.

    ಅದೇ ರೀತಿ ಈ ಬಾರಿ 70 ಲಕ್ಷ ಪಡಿತರ ಚೀಟಿದಾರರನ್ನು ಶಂಕಿತರ ಪಟ್ಟಿಯಲ್ಲಿ ಇರಿಸಲಾಗಿದೆ.
  • ಅನುಮಾನಾಸ್ಪದ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವವರು ಎನ್‌ಎಫ್‌ಎಸ್‌ಎ ಅಡಿಯಲ್ಲಿ ಪಡಿತರ ಪಡೆಯಲು ಅರ್ಹರೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ
ಪಡಿತರ ಚೀಟಿದಾರರಿಗೆ ಶಾಕ್ ಕೊಟ್ಟ ಮೋದಿ ಸರ್ಕಾರ! title=
Ration card

ಪಡಿತರ ಚೀಟಿ ಲೇಟೆಸ್ಟ್ ಸುದ್ದಿ: ಪಡಿತರ ಚೀಟಿದಾರರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೇಂದ್ರದ ಮೋದಿ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಲಾಭ ಪಡೆದ 70 ಲಕ್ಷ ಪಡಿತರ ಚೀಟಿದಾರರನ್ನು ಶಂಕಿತರ ಪಟ್ಟಿಗೆ ಸೇರಿಸಿದೆ. ಇದರ ವಿವರಗಳನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, 2013ರಿಂದ 2021ರ ನಡುವೆ 4.74 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ಅದೇ ರೀತಿ ಈ ಬಾರಿ 70 ಲಕ್ಷ ಪಡಿತರ ಚೀಟಿದಾರರನ್ನು ಶಂಕಿತರ ಪಟ್ಟಿಯಲ್ಲಿ ಇರಿಸಲಾಗಿದೆ. ಈ ಬಗ್ಗೆ ಸರಿಯಾದ ಮಾಹಿತಿ ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ. ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವವರು ಎನ್‌ಎಫ್‌ಎಸ್‌ಎ ಅಡಿಯಲ್ಲಿ ಪಡಿತರ ಪಡೆಯಲು ಅರ್ಹರೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ- Hyundai Car Discount Offers : ರಕ್ಷಾಬಂಧನದ ಹಿನ್ನೆಲೆಯಲ್ಲಿ ಕಾರುಗಳ ಮೇಲೆ ಭಾರೀ ರಿಯಾಯಿತಿ

ವಾಸ್ತವವಾಗಿ, ಕಳೆದ 9 ವರ್ಷಗಳಲ್ಲಿ ರದ್ದಾದ 4.74 ಕೋಟಿ ಪಡಿತರ ಚೀಟಿಗಳಿಂದ ಸುಮಾರು 19 ಕೋಟಿ ಜನರು ಪ್ರಯೋಜನ ಪಡೆದಿದ್ದಾರೆ ಎಂದು ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದರು. ಈ ಪಡಿತರ ಚೀಟಿಗಳನ್ನು ರದ್ದುಪಡಿಸಿದ ನಂತರ, ಅವುಗಳ ಬದಲಿಗೆ ಹೊಸ ಪಡಿತರ ಚೀಟಿಯನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಈ ಪ್ರಕ್ರಿಯೆ ಕುರಿತು ಮಾತನಾಡಿದ ಅವರು, ಇಂದು ಒಬ್ಬ ವ್ಯಕ್ತಿಯು ಸರ್ಕಾರದ ಪಡಿತರ ಯೋಜನೆಗೆ ಅರ್ಹರಾಗಬಹುದು. ಆದರೆ ನಾಳೆ ಆರ್ಥಿಕ ಪರಿಸ್ಥಿತಿಯ ಸುಧಾರಣೆಯಿಂದಾಗಿ  ಅವರು ಸರ್ಕಾರದ ಕೆಲವು ಯೋಜನೆಯನ್ನು ಪಡೆಯಲು ಅರ್ಹರಾಗಿರುವುದಿಲ್ಲ. ಅಂತಹವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಿ ಆ ಜಾಗದಲ್ಲಿ ಅರ್ಹರಿಗೆ ಅವಕಾಶ ನೀಡುವುದು ಇದರ ಉದ್ದೇಶವಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ- RBI: ಆರ್‌ಬಿಐನ ಈ ನಿರ್ಧಾರದಿಂದ 8 ಬ್ಯಾಂಕ್‌ಗಳಿಗೆ ದೊಡ್ಡ ಹೊಡೆತ!

ಆಹಾರ ಸಚಿವಾಲಯವು ಹಂಚಿಕೊಂಡ ಅಂಕಿಅಂಶಗಳ ಪ್ರಕಾರ , 2016 ರಲ್ಲಿ ಅತಿ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ. ಕಳೆದ 9 ವರ್ಷಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 4.74 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ. 2016ರಲ್ಲಿ 84 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳು ರದ್ದಾಗಿವೆ. ಕಳೆದ 9 ವರ್ಷಗಳಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, 2020 ಮತ್ತು 2021 ರಲ್ಲಿ 46 ಲಕ್ಷ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ. 9 ವರ್ಷಗಳಲ್ಲಿ ಗರಿಷ್ಠ 4.74 ಕೋಟಿ ಪಡಿತರ ಚೀಟಿಗಳು ರದ್ದಾಗಿವೆ. ಈ ಅವಧಿಯಲ್ಲಿ ಉತ್ತರ ಪ್ರದೇಶ ರಾಜ್ಯ ಒಂದರಲ್ಲೇ 1.73 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ಇದಾದ ನಂತರ ಪಶ್ಚಿಮ ಬಂಗಾಳದಲ್ಲಿ 68.62 ಲಕ್ಷ ಮತ್ತು ಮಹಾರಾಷ್ಟ್ರದಲ್ಲಿ 42.66 ಲಕ್ಷ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News