Six Airbags to be Made Mandatory for Cars: ವಾಹನ ಚಾಲಕರಿಗೊಂದು ಸಂತಸದ ಸುದ್ದಿ ಪ್ರಕಟವಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ವಾಹನದ ಎಲ್ಲಾ ಸೀಟುಗಳಲ್ಲಿ ಏರ್‌ಬ್ಯಾಗ್ ಕಡ್ಡಾಯಗೊಳಿಸುವ ನಿಯಮವನ್ನು ಶೀಘ್ರದಲ್ಲೇ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಹಲವು ದಿನಗಳ ಬಳಿಕ ಕೇಂದ್ರ ಸಚಿವರ ಈ ಹೇಳಿಕೆ ಬಂದಿರುವುದು ಇಲ್ಲಿ ಉಲ್ಲೇಖನೀಯ. ಏಕೆಂದರೆ, ಈ ಹಿಂದೆಯೂ ಕೂಡ ಅವರು ಕಾರು ಉತ್ಪಾದಕ ಕಂಪನಿಗಳಿಗೆ ಮೋಟಾರು ವಾಹನಗಳಲ್ಲಿ ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಒದಗಿಸುವುದನ್ನು ಸರ್ಕಾರ ಕಡ್ಡಾಯಗೊಳಿಸುವುದಾಗಿ ಘೋಷಿಸಿದ್ದರು.
ಲೋಕಸಭೆಯಲ್ಲಿ ಈ ಕುರಿತು ಪ್ರಶ್ನಿಸಲಾಗಿದೆ
ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಈ ಏರ್ ಬ್ಯಾಗ್ ವಿಷಯವನ್ನು ಪ್ರಸ್ತಾಪಿಸಿ ಪ್ರಶ್ನಿಸಿದ ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ಅವರು “ಪ್ರತಿ ವರ್ಷ 1.50 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಾರೆ. ಕಾರಿನಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ನಿಯಮವನ್ನು ತರಲು ಸರ್ಕಾರ ನಿರ್ಧರಿಸಿದೆ. ಈ ವರ್ಷದ ಅಕ್ಟೋಬರ್‌ನಲ್ಲಿ ಕರಡು ಅಧಿಸೂಚನೆಯ ದತ್ತಾಂಶ ಬರಲಿದೆ, ಆದರೆ ಅದನ್ನು ಬಿಡುಗಡೆ ಮಾಡಲಾಗಿಲ್ಲ. ವಾಹನ ತಯಾರಕರು ತಮ್ಮ ವಾಹನಗಳಲ್ಲಿ ಈ ವೈಶಿಷ್ಟ್ಯವನ್ನು ಪರಿಚಯಿಸಲು ಅಧಿಸೂಚನೆಯನ್ನು ಯಾವಾಗ ನಿರೀಕ್ಷಿಸಬಹುದು? ಎಂದಿದ್ದಾರೆ.
ಇದನ್ನೂ ಓದಿ-ಪಡಿತರ ಚೀಟಿದಾರರಿಗೆ ಶಾಕ್ ಕೊಟ್ಟ ಮೋದಿ ಸರ್ಕಾರ!
ಯೋಜನೆಯ ವಿವರಣೆ ನೀಡಿದ ನಿತೀನ್ ಗಡ್ಕರಿ
ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕಾರುಗಳಲ್ಲಿ ಏರ್‌ಬ್ಯಾಗ್ ಕಡ್ಡಾಯವಾಗಿ ಅಳವಡಿಸಬೇಕು. ಆದರೆ ಹಿಂದಿನ ಸೀಟಿನಲ್ಲಿ ಕುಳಿತುಕೊಳ್ಳುವವರಿಗೆ ಇದು ಕಡ್ಡಾಯವಾಗಿಲ್ಲ. ಆದರೆ ಸರ್ಕಾರ ಇದೀಗ ಎಲ್ಲಾ ಪ್ರಯಾಣಿಕರಿಗೆ ಏರ್‌ಬ್ಯಾಗ್‌ಗಳನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ, ಅಂದರೆ, ಹಿಂದಿನ ಸೀಟಿನಲ್ಲಿ ಕುಳಿತುಕೊಳ್ಳುವವರಿಗೂ ಕೂಡ ಏರ್‌ಬ್ಯಾಗ್‌ಗಳನ್ನು ಅಳವಡಿಸಬೇಕು. ಒಂದೇ ಏರ್‌ಬ್ಯಾಗ್‌ಗೆ ಕೇವಲ 800 ರೂಪಾಯಿ ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ, ಆದರೆ ಯಾವಾಗ ಮಾಹಿತಿಯನ್ನು ನೀಡಲಾಗುವುದು ಎಂಬುದನ್ನು ಮಾತ್ರ ಅವರು ಹೇಳಿಲ್ಲ.
ಇದನ್ನೂ ಓದಿ-Hyundai Car Discount Offers : ರಕ್ಷಾಬಂಧನದ ಹಿನ್ನೆಲೆಯಲ್ಲಿ ಕಾರುಗಳ ಮೇಲೆ ಭಾರೀ ರಿಯಾಯಿತಿ
ಈ ಮೊದಲು ಕೂಡ ಚರ್ಚೆ ನಡೆದಿತ್ತು
ಇದಕ್ಕೂ ಮುನ್ನ ನಿತಿನ್ ಗಡ್ಕರಿ ಅವರು ಸರ್ಕಾರ ನಿಗದಿಪಡಿಸಿದ ಸುರಕ್ಷತಾ ಮಾನದಂಡಗಳ ಪ್ರಕಾರ ಎಲೆಕ್ಟ್ರಿಕ್ ವೆಹಿಕಲ್ (ಇವಿ) ತಯಾರಿಸಬೇಕು ಎಂದು ಸದನದಲ್ಲಿ ಹೇಳಿದ್ದರು. ಭಾರತದಲ್ಲಿ ಪ್ರತಿ ವರ್ಷ ಐದು ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಸುಮಾರು 1.5 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಇದಲ್ಲದೇ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹಲವು ವೇದಿಕೆಗಳು ಘೋಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.