ದೇಶದಲ್ಲಿ ತೈಲ ಬೆಲೆಯಲ್ಲಿ ಏರಿಳಿತ: ಇಂದಿನ ಇಂಧನ ದರ ಇಂತಿದೆ

ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್​​ಗೆ 111.09 ರೂಪಾಯಿಯಂತೆ ಮಾರಾಟವಾಗುತ್ತಿದೆ. ಡೀಸೆಲ್ ಬೆಲೆ ಒಂದು ಲೀಟರ್​ಗೆ 94.79 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. 

Written by - Bhavishya Shetty | Last Updated : Apr 25, 2022, 08:38 AM IST
  • ದೇಶದಲ್ಲಿ ತೈಲ ಬೆಲೆಯಲ್ಲಿ ಏರಿಳಿತ
  • ಬೆಂಗಳೂರಿನಲ್ಲಿ ಪೆಟ್ರೋಲ್‌ ಬೆಲೆ 111.09 ರೂ.
  • ಇಲ್ಲಿದೆ ಮಹಾನಗರಗಳ ತೈಲ ದರ ಪಟ್ಟಿ
ದೇಶದಲ್ಲಿ ತೈಲ ಬೆಲೆಯಲ್ಲಿ ಏರಿಳಿತ: ಇಂದಿನ ಇಂಧನ ದರ ಇಂತಿದೆ title=
Fuel Price

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕೆಲವು ಕಡೆಗಳಲ್ಲಿ ಇಳಿಕೆ ಕಂಡಿದೆ. ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆ ಇಂದು ಕೊಂಚ ತಗ್ಗಿದೆ ಎನ್ನಬಹುದು. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್​​ಗೆ 111.09 ರೂಪಾಯಿಯಂತೆ ಮಾರಾಟವಾಗುತ್ತಿದೆ. ಡೀಸೆಲ್ ಬೆಲೆ ಒಂದು ಲೀಟರ್​ಗೆ 94.79 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. 

ಇದನ್ನು ಓದಿ: Gold Price Today: ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ...ಇಲ್ಲಿದೆ ಇಂದಿನ ಹಳದಿಲೋಹದ ಬೆಲೆ

ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌ ದರ ಇಂತಿದೆ. ಮಂಗಳೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.29 ರೂಪಾಯಿ ಇದ್ದು, ಡೀಸೆಲ್ ದರ ಒಂದು ಲೀಟರ್​ಗೆ 94.03 ರೂಪಾಯಿಯಿದೆ. 

ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 110.61 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 94.35 ರೂಪಾಯಿ ಇದೆ. ಶಿವಮೊಗ್ಗದಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್​ಗೆ 112.74 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 96.19 ರೂಪಾಯಿ ಇದೆ. ದಾವಣಗೆರೆಯಲ್ಲಿ ಪೆಟ್ರೋಲ್ ಲೀಟರ್​ಗೆ 113.09 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 96.46 ರೂಪಾಯಿ ಇದೆ. ಮೈಸೂರು, ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ಕಳೆದ ದಿನಕ್ಕಿಂತ ತೈಲಬೆಲೆಯಲ್ಲಿ ಕೊಂಚ ದರ ಏರಿಕೆ ಕಂಡುಬಂದಿದೆ.      

ಮಹಾನಗರಗಳು ಪೆಟ್ರೋಲ್ ದರ ಡೀಸೆಲ್ ದರ
ನವದೆಹಲಿ     105.41 ರೂ.    96.67 ರೂ.    
ಮುಂಬೈ    120.51 ರೂ.   104.77 ರೂ. 
ಕೋಲ್ಕತ್ತಾ   115.12 ರೂ.   99.83 ರೂ. 
ಚೆನ್ನೈ          110.85 ರೂ.    100.94 ರೂ. 
ಭೋಪಾಲ್​      118.14 ರೂ.  101.16 ರೂ. 
ಹೈದರಾಬಾದ್     119.49 ರೂ.   105. 49 ರೂ. 

ಇದನ್ನು ಓದಿ: ರಾಜ್ಯದಲ್ಲಿ ತರಕಾರಿ ಬೆಲೆ ಸ್ಥಿರ: ಇಂದಿನ ದರ ಇಂತಿದೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News