Petrol Diesel Price Today: ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ ನೋಡಿ

ಜನಸಾಮಾನ್ಯರು ಮತ್ತು ವಿಪಕ್ಷಗಳ ಟೀಕೆಗೆ ಮಣಿದು ಕೇಂದ್ರವು ದೀಪಾವಳಿ ಹಬ್ಬದ ಮುನ್ನಾದಿನದಂದು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 10 ರೂ.ಕಡಿತಗೊಳಿಸಿತ್ತು.

Written by - Puttaraj K Alur | Last Updated : Nov 21, 2021, 09:57 AM IST
  • ಸತತ 20ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ
  • ದೇಶದ ಮಹಾನಗರಗಳಲ್ಲಿ ಮಾತ್ರ ಪೆಟ್ರೋಲ್ ಬೆಲೆ 100 ರೂ. ಮೇಲಿದೆ
  • ಪೆಟ್ರೋಲ್ ಮೇಲೆ 5 ರೂ. ಮತ್ತು ಡೀಸೆಲ್ ಮೇಲೆ 10 ರೂ. ಅಬಕಾರಿ ಸುಂಕ ಕಡಿತಗೊಳಿಸಿದ್ದ ಕೇಂದ್ರ ಸರ್ಕಾರ
Petrol Diesel Price Today: ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ ನೋಡಿ title=
ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ ಗೊತ್ತಾ?

ನವದೆಹಲಿ: ಸತತ 20ನೇ ದಿನವಾದ ಭಾನುವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol Diesel Price Today)ಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನವೆಂಬರ್ ತಿಂಗಳಿನಲ್ಲಿ ಕೇವಲ 3 ಬಾರಿ ತೈಲದರ ಏರಿಕೆಯಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಇಂಧನದರ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರ್ಕಾರವು ಈ ತಿಂಗಳ ಆರಂಭದಲ್ಲಿ ವಾಹನ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಲು ನಿರ್ಧರಿಸಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತೀವ್ರವಾಗಿ ಕುಸಿದಿದೆ. ಜನಸಾಮಾನ್ಯರು ಮತ್ತು ವಿಪಕ್ಷಗಳ ಟೀಕೆಗೆ ಮಣಿದು ಕೇಂದ್ರವು ದೀಪಾವಳಿ ಹಬ್ಬದ ಮುನ್ನಾದಿನದಂದು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 10 ರೂ.ಕಡಿತಗೊಳಿಸಿತ್ತು.

ಕೇಂದ್ರದ ಈ ನಿರ್ಧಾರದ ನಂತರ ಬಿಜೆಪಿ(BJP) ಆಡಳಿತವಿರುವ ರಾಜ್ಯಗಳು ಸೇರಿದಂತೆ ವಿವಿಧ ಪಕ್ಷಗಳು ಆಡಳಿತವಿರುವ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (VAT) ಕಡಿತಗೊಳಿಸಲಾಗಿದೆ. ಇದರೊಂದಿಗೆ ಭಾರತದ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಿಂತ ಕಡಿಮೆಯಾಗಿದೆ. ಅಗತ್ಯವಸ್ತುಗಳ ಜೊತೆಗೆ ನಿರಂತರವಾಗಿ ಇಂಧನ ದರವೂ ಏರಿಕೆಯಾಗಿತ್ತು. ಇದರಿಂದ ಜನಸಾಮಾನ್ಯರು ಹೈರಾಣಾಗಿದ್ದರು. ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: Good News: ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಪ್ರಕಟ, ಈ ವರದಿ ಓದಿ

ಕೇಂದ್ರದ ತೆರಿಗೆ ಕಡಿತದೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ(Petrol Price) ಪ್ರತಿ ಲೀಟರ್‌ಗೆ 103.97 ರೂ.ನಂತೆ ಮಾರಾಟವಾಗುತ್ತಿದೆ. ಅದೇ ರೀತಿ ಡೀಸೆಲ್ ಪ್ರತಿ ಲೀಟರ್‌ಗೆ 86.67 ರೂ. ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 109.98 ರೂ. ಇದ್ದರೆ, ಡೀಸೆಲ್ 94.14 ರೂ. ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 100.58 ರೂ. ಇದ್ದರೆ, ಡೀಸೆಲ್ ಬೆಲೆ 85.01 ರೂ. ಇದೆ.

ಪಶ್ಚಿಮ ಬಂಗಾಲದ ಕೋಲ್ಕತ್ತಾದಲ್ಲಿ ಭಾನುವಾರ ಒಂದು ಲೀಟರ್ ಪೆಟ್ರೋಲ್ ಬೆಲೆ 104.67 ರೂ. ಇದ್ದರೆ, ಡೀಸೆಲ್ ಬೆಲೆ(Diesel Price) 89.79 ರೂ. ಇದೆ. ತಮಿಳುನಾಡಿನ ಚೆನ್ನೈನಲ್ಲಿ ಪೆಟ್ರೋಲ್ ದರ 1 ಲೀಟರ್‌ಗೆ 101.40 ರೂ.ಇದ್ದರೆ, ಡೀಸೆಲ್ 91.43 ರೂ. ಇದೆ. ಹೈದರಾಬಾದ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 108.20 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.62 ರೂ. ಇದೆ. ಭೋಪಾಲ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.23 ರೂ. ಇದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 90.87 ರೂ. ಇದೆ.

ಇದನ್ನೂ ಓದಿ: Arecanut Price Today: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಎಷ್ಟಿದೆ ತಿಳಿಯಿರಿ

ಇಲ್ಲಿಯವರೆಗೆ ಸುಮಾರು 24 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪೆಟ್ರೋಲ್ ಮತ್ತು ಡೀಸೆಲ್(Fuel Rates) ಮೇಲಿನ ಹೆಚ್ಚುವರಿ ತೆರಿಗೆಯನ್ನು ಕಡಿತಗೊಳಿಸಿವೆ. ಈ ಪೈಕಿ ಬಹುತೇಕ ಬಿಜೆಪಿ ಅಥವಾ ಎನ್‌ಡಿಎ ಆಡಳಿತದ ರಾಜ್ಯಗಳಾಗಿವೆ. ಪಂಜಾಬ್ ಮತ್ತು ರಾಜಸ್ಥಾನ ತೆರಿಗೆ ಕಡಿತಗೊಳಿಸಿದ 2 ಕಾಂಗ್ರೆಸ್ ಆಡಳಿತದ ರಾಜ್ಯಗಳಾಗಿವೆ. ಆದಾಗ್ಯೂ ಕೆಲವು ಕಾಂಗ್ರೆಸ್ ಆಡಳಿತದ ರಾಜ್ಯಗಳು ವ್ಯಾಟ್ ಅನ್ನು ಕಡಿತಗೊಳಿಸಿಲ್ಲ ಮತ್ತು ಕೇಂದ್ರವೇ ಅಬಕಾರಿ ಸುಂಕವನ್ನು ಮತ್ತಷ್ಟು ಕಡಿತಗೊಳಿಸಬೇಕೆಂದು ಒತ್ತಾಯಿಸುತ್ತಿವೆ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು, ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಅಂಶಗಳ ಆಧಾರದ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನವೀಕರಿಸುತ್ತವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News