Petrol Diesel Price Today: ಪೆಟ್ರೋಲ್-ಡೀಸೆಲ್ ಮತ್ತಷ್ಟು ದುಬಾರಿ, ಜನಸಾಮಾನ್ಯರ ಪರದಾಟ

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 113.15 ರೂ. ಇದ್ದರೆ, ಡೀಸೆಲ್ ಬೆಲೆ 104.09 ರೂ.ಗೆ ಏರಿಕೆಯಾಗಿದೆ.

Written by - Puttaraj K Alur | Last Updated : Oct 31, 2021, 10:03 AM IST
  • ವಾಣಿಜ್ಯ ನಗರಿ ಮುಂಬೈನಲ್ಲಿ 155 ರೂ. ಗಡಿ ದಾಟಿದ ಪೆಟ್ರೋಲ್ ಬೆಲೆ
  • ಮಧ್ಯಪ್ರದೇಶದ ಬಾಲಾಘಾಟ್‌ನಲ್ಲಿ ಪೆಟ್ರೋಲ್ ಲೀಟರ್ ಗೆ 120 ರೂ.ಗೆ ಏರಿಕೆ
  • ನಿರಂತರವಾಗಿ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆಯಿಂದ ಹೈರಾಣಾದ ಜನಸಾಮಾನ್ಯರು
Petrol Diesel Price Today: ಪೆಟ್ರೋಲ್-ಡೀಸೆಲ್ ಮತ್ತಷ್ಟು ದುಬಾರಿ, ಜನಸಾಮಾನ್ಯರ ಪರದಾಟ title=
ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ

ನವದೆಹಲಿ: ಅಕ್ಟೋಬರ್ ತಿಂಗಳಾಂತ್ಯವಾದ ಇಂದು(ಅ.31) ಕೂಡ ಪೆಟ್ರೋಲ್, ಡೀಸೆಲ್ ಬೆಲೆ(Petrol Diesel Price Today) ಮತ್ತೆ ಏರಿಕೆಯಾಗಿದೆ. ಸತತ 5ನೇ ದಿನವೂ ತೈಲದರ ಹೆಚ್ಚಿಸಿದರ ಪರಿಣಾಮ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು (OMC) ಇಂದು ಇಂಧನ ದರವನ್ನು ಪ್ರತಿ ಲೀಟರ್‌ಗೆ 35 ಪೈಸೆಯಷ್ಟು ಹೆಚ್ಚಿಸಿವೆ.

ದೀಪಾವಳಿ ಹಬ್ಬದ ಮುನ್ನಾದಿನವೇ ದೇಶದ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಜತ್ತು ಡೀಸೆಲ್ ಬೆಲೆಯಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ. ಅಗತ್ಯವಸ್ತುಗಳ ಬೆಲೆ ಏರಿಕೆ ಒಂದು ಕಡೆಯಾದರೆ, ಮತ್ತೊಂದೆಡೆ ಇಂಧನ ದರ ಏರಿಕೆಯು ದೇಶದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದ ಸುಸ್ತಾಗಿರುವ ನಾಗರಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: Arecanut Price: ರಾಜ್ಯದ ಮಾರ್ಕೆಟ್ ನಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ..?

ಪ್ರಮುಖ ನಗರಗಳಲ್ಲಿ ಇಂದಿನ ದರವೆಷ್ಟು..?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಇದರ ಪ್ರಕಾರ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ(Petrol Price) 109.34 ರೂ.ಗೆ ಏರಿಕೆಯಾಗಿದ್ದು,  ಡೀಸೆಲ್ ದರ ಸಹ 100 ಗಡಿಗೆ ಹತ್ತಿರವಾಗಿದ್ದು, 98.07 ರೂ.ಗೆ ಏರಿಕೆಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.15 ರೂ. ಆದರೆ, ಡೀಸೆಲ್ ದರ 106.23 ರೂ.ಗೆ ಏರಿಕೆಯಾಗಿದೆ. ಇನ್ನು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 113.15 ರೂ. ಇದ್ದರೆ, ಡೀಸೆಲ್ ಬೆಲೆ 104.09 ರೂ.ಗೆ ಏರಿಕೆಯಾಗಿದೆ.

ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 109.79 ರೂ. ಇದ್ದರೆ, ಡೀಸೆಲ್ ದರ(Diesel Price) 101.19 ರೂ.ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.04 ರೂ. ಇದ್ದು, ಡೀಸೆಲ್ ಬೆಲೆ 102.25 ರೂ. ತಲುಪಿದೆ. ದೇಶದ ಎಲ್ಲಾ ಪ್ರಮುಖ ಮಹಾನಗರಗಳಲ್ಲ ಇಂಧನ ದರ ಅತ್ಯಧಿಕವಾಗಿದೆ. ಈ ಮಧ್ಯೆ ಮಧ್ಯಪ್ರದೇಶದ ಬಾಲಾಘಾಟ್‌ನಲ್ಲಿ ಪೆಟ್ರೋಲ್ ಬೆಲೆ ಮೊದಲ ಬಾರಿಗೆ ಲೀಟರ್‌ಗೆ 120.06 ರೂ. ದಾಟಿದರೆ, ಡೀಸೆಲ್ ಬೆಲೆ 109.32ಕ್ಕೆ ತಲುಪಿದೆ.

ತೈಲ ಕಂಪನಿಗಳು ಅಳವಡಿಸಿಕೊಂಡ ಬೆಲೆ ಸೂತ್ರದ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ದರ(Fuel Rates)ಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್( BPCL ), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( HPCL)ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುತ್ತವೆ. ಪ್ರಸ್ತುತ ದೇಶದ 4 ಮೆಟ್ರೋ ನಗರಗಳಲ್ಲಿ ಇಂಧನ ದರ ಅತ್ಯಧಿಕವಾಗಿದೆ.

ಇದನ್ನೂ ಓದಿ: 7th pay commission: Family Pension ನಿಯಮದಲ್ಲಿ ಭಾರಿ ಬದಲಾವಣೆ, ಇದೀಗ 2.5 ಲಕ್ಷ ರೂ.ಗಳವರೆಗೆ ಸಿಗಲಿದೆ ಲಾಭ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol Diesel Price)ಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News