Today Petrol-Diesel Price: ಸೆ.19ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಲ್ಲಿದೆ; ನಿಮ್ಮ ನಗರದ ದರ ಪರಿಶೀಲಿಸಿರಿ

ತಿಂಗಳ ಆರಂಭದಲ್ಲಿ ಅಂದರೆ ಸೆ.1ರಂದು ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆಯನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ 15 ಪೈಸೆಯಷ್ಟು ಇಳಿಕೆ ಮಾಡಿವೆ.

Written by - Puttaraj K Alur | Last Updated : Sep 19, 2021, 09:36 AM IST
  • ಸತತ 14ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ
  • ಜಾಗತಿಕ ಕಚ್ಚಾ ತೈಲ ದರದಲ್ಲಿ ಅಲ್ಪ ಇಳಿಕೆಯಾಗಿದ್ದರೂ ಭಾನುವಾರವೂ ಇಂಧನ ದರ ಪರಿಷ್ಕರಿಸಿಲ್ಲ
  • ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 104.70 ರೂ. ಮತ್ತು ಡೀಸೆಲ್ 94.04 ರೂ. ಇದೆ
Today Petrol-Diesel Price: ಸೆ.19ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ  ಇಲ್ಲಿದೆ; ನಿಮ್ಮ ನಗರದ ದರ ಪರಿಶೀಲಿಸಿರಿ title=
ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸ್ಥಿರವಾಗಿವೆ (Photo Courtesy:@Zee News)

ನವದೆಹಲಿ: ಜಾಗತಿಕ ಕಚ್ಚಾ ತೈಲದ ದರದಲ್ಲಿ ಅಲ್ಪ ಇಳಿಕೆಯಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Today Petrol-Diesel Price)ಗಳನ್ನು ಭಾನುವಾರ ಪರಿಷ್ಕರಿಸಲಾಗಿಲ್ಲ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMC) ಸತತ 14ನೇ ದಿನವಾದ ಇಂದು(ಸೆ.19) ಕೂಡ ಇಂಧನ ಬೆಲೆಯನ್ನು ಸ್ಥಿರವಾಗಿಸಿವೆ.

ರಾಷ್ಟ್ರ ರಾಜಧಾನಿ ದೆಹಲಿ(New Delhi)ಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.19 ರೂ.ನಂತೆ ಮಾರಾಟವಾಗುತ್ತಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ 88.62 ರೂ. ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಕ್ರಮವಾಗಿ 107.26 ರೂ. ಮತ್ತು 96.19 ರೂ. ಇದೆ.

ಇದನ್ನೂ ಓದಿ: Arecanut Price: ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ದರ

ಅದರಂತೆ ಚೆನ್ನೈನಲ್ಲಿ ಪೆಟ್ರೋಲ್ ಬೆಲೆ(Petrol price) ಪ್ರತಿ ಲೀಟರ್‌ಗೆ 99.06 ರೂ. ಇದ್ದರೆ, ಡೀಸೆಲ್ ಪ್ರತಿ ಲೀಟರ್‌ಗೆ 93.26 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಪ್ರತಿ ಲೀಟರ್‌ಗೆ ಕ್ರಮವಾಗಿ 101.62 ರೂ. ಮತ್ತು 91.71 ರೂ. ಇವೆ. ಇತ್ತೀಚೆಗೆ ಇಂಧನ ಬೆಲೆ ಪರಿಷ್ಕರಿಸದಿದ್ದರೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಭಾರತದಾದ್ಯಂತ ದಾಖಲೆ ಮಟ್ಟದಲ್ಲಿ ಮಾರಾಟವಾಗುತ್ತಿದೆ.

ಜಾಗತಿಕ ಕಚ್ಚಾ ತೈಲದ ಬೆಲೆ(Fuel Rates)ಗಳು ಇಳಿಯದಿದ್ದರೆ ಇಂಧನ ಬೆಲೆಯಲ್ಲಿ ಪರಿಷ್ಕರಣೆ ಶೀಘ್ರವೇ ಅಸಂಭವವಾಗಿದೆ. ಅಲ್ಲದೆ ಕೇಂದ್ರ ಸರ್ಕಾರವು ಶುಕ್ರವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ಅಡಿಯಲ್ಲಿ ಸೇರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸೆಪ್ಟೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 2 ಬಾರಿ ಕಡಿಮೆ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗುತ್ತಿದ್ದಂತೆ ದರ 30 ಪೈಸೆಯಷ್ಟು ಇಳಿಕೆಯಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಇಂತಿವೆ:

ನಗರ ಪೆಟ್ರೋಲ್ (ಪ್ರತಿ ಲೀಟರ್‌ಗೆ)

ಡೀಸೆಲ್ (ಪ್ರತಿ ಲೀಟರ್‌ಗೆ)

ಬೆಂಗಳೂರು 104.70 ರೂ. 94.04 ರೂ.
ನವದೆಹಲಿ 101.19 ರೂ.

88.62 ರೂ.

ಮುಂಬೈ 107.26 ರೂ.

96.19 ರೂ.

ಚೆನ್ನೈ 99.06 ರೂ.

93.35 ರೂ.

ಕೋಲ್ಕತ್ತಾ 101.62 ರೂ.

91.71 ರೂ.

ಪಾಟ್ನಾ

103.79 ರೂ. 94.55 ರೂ.

ತಿಂಗಳ ಆರಂಭದಲ್ಲಿ ಅಂದರೆ ಸೆಪ್ಟೆಂಬರ್ 1 ರಂದು, ಭಾರತೀಯ ಮಾರುಕಟ್ಟೆಯಲ್ಲಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆಯನ್ನು ಪ್ರತಿ ಲೀಟರ್‌ಗೆ ಕ್ರಮವಾಗಿ 15 ಪೈಸೆಯಷ್ಟು ಇಳಿಕೆ ಮಾಡಿವೆ. ಏತನ್ಮಧ್ಯೆ ಸೆಪ್ಟೆಂಬರ್ 5 ರಂದು ಆಟೋ ಇಂಧನದ ದರವನ್ನು ಪ್ರತಿ ಲೀಟರ್‌ಗೆ 15 ಪೈಸೆ ಇಳಿಸಲಾಗಿದೆ.

ಇದನ್ನೂ ಓದಿ: Gold Price Today: ಚಿನ್ನ ಖರೀದಿದಾರರಿಗೆ ಬಂಪರ್ ಅವಕಾಶ; ನಿಮ್ಮ ನಗರದ ದರ ಪರಿಶೀಲಿಸಿರಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಗಳು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ಬದಲಾಗುತ್ತವೆ. ಸಂಜೆ 6 ರಿಂದ ಹೊಸ ಶುಲ್ಕಗಳು ಅನ್ವಯವಾಗುತ್ತವೆ. ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

ಈ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಿ ನೀವು ಪೆಟ್ರೋಲ್ ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿದುಕೊಳ್ಳಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಸಂಜೆ 6 ಗಂಟೆಗೆ ನವೀಕರಿಸಲಾಗುತ್ತದೆ. ಇಂಡಿಯನ್ ಆಯಿಲ್ ಗ್ರಾಹಕರ ಬೆಲೆಯನ್ನು ತಿಳಿಯಲು, ನೀವು ನಿಮ್ಮ ನಗರ ಕೋಡ್ ಅನ್ನು RSP ಯೊಂದಿಗೆ ಟೈಪ್ ಮಾಡಬೇಕು ಮತ್ತು 9224992249 ಗೆ SMS ಕಳುಹಿಸಬೇಕು. ಪ್ರತಿ ನಗರ ಕೋಡ್ ವಿಭಿನ್ನವಾಗಿರುತ್ತದೆ. ಈ ವಿವರಗಳನ್ನು ಐಒಸಿಎಲ್ ವೆಬ್‌ಸೈಟ್‌ನಲ್ಲಿ ಕಾಣಬಹುದು. ಬಿಪಿಸಿಎಲ್ ಗ್ರಾಹಕರು ಆರ್‌ಎಸ್‌ಪಿ 9223112222 ಮತ್ತು ಎಚ್‌ಪಿಸಿಎಲ್ ಗ್ರಾಹಕ ಎಚ್‌ಪಿ ಬೆಲೆ 9222201122 ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ತಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಂಡುಹಿಡಿಯಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News